ಬೆಂಗಳೂರು: ಕೊರೊನಾ-ಒಮಿಕ್ರಾನ್ ನಿಯಂತ್ರಣಕ್ಕೆ ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ತಜ್ಞರೊಂದಿಗೆ ಸಭೆ ನಡೆದ ಬಳಿಕ ಮಾತನಾಡಿದ ಕಂದಾಯ ಸಚಿವ ಆರ್ ಅಶೋಕ್ ಅವರು ಸಭೆಯ ಮುಖ್ಯಾಂಶಗಳನ್ನು ಮಾಧ್ಯಮಗಳಿಗೆ ವಿವರಿಸಿದರು.
ಬೆಂಗಳೂರಿನಲ್ಲಿ ಈಗ 3048 ಸೋಂಕಿತರು 147 ಒಮಿಕ್ರಾನ್ ಪ್ರಕರಣಗಳು ಪತ್ತೆಯಾಗಿದೆ. ಕೊರೊನಾ ಪ್ರಕರಣಗಳ ಸಂಖ್ಯೆ ಎರಡು ಮೂರು ದಿನಗಳಲ್ಲಿ ಡಬಲ್ ಆಗ್ತಿದೆ. ಮಹಾರಾಷ್ಟ್ರದಲ್ಲಿ 10 ಸಾವಿರ ಕೇಸ್ ಆಗಿದೆ. ಆದ್ದರಿಂದ ರಾಜ್ಯದಲ್ಲಿ, ಅದರಲ್ಲೂ ಬೆಂಗಳೂರಿನಲ್ಲಿ ನಿಯಮಗಳನ್ನು ಜಾರಿ ಮಾಡುವ ಅಗತ್ಯ ಇದೆ. ಆದ್ದರಿಂದ ಸಭೆಯಲ್ಲಿ ಚರ್ಚೆ ನಡೆಸಿ ಕೆಲವು ನಿರ್ಧಾರ ಮಾಡಿದ್ದೇವೆ ಎಂದು ಆರ್ ಅಶೋಕ್ ತಿಳಿಸಿದರು.
ಬೆಂಗಳೂರಿನಲ್ಲಿ 10 ಮತ್ತು 12ನೇ ತರಗತಿ ಹೊರತುಪಡಿಸಿ ಉಳಿದೆಲ್ಲ ಕಡೆ ಆಫ್ಲೈನ್ ತರಗತಿ ನಿಲ್ಲುತ್ತದೆ. ಶಾಲಾ ಕಾಲೇಜುಗಳು ಆನ್ಲೈನ್ ವಿಧಾನದಲ್ಲಿ ನಡೆಯುತ್ತದೆ. 6ನೇ ತಾರೀಖಿನಿಂದ ಜಾರಿಯಾಗುವಂತೆ ವೀಕೆಂಡ್ ಕರ್ಫ್ಯೂ ಇರಲಿದೆ. ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಿಗ್ಗೆ 5ರವರೆಗೆ ವೀಕೆಂಟ್ ಕರ್ಫ್ಯೂ ಇರುತ್ತದೆ. ಆಹಾರ ವಸ್ತು, ಹೊಟೆಲ್ಗಳಲ್ಲಿ ಪಾರ್ಸೆಲ್, ಅತ್ಯಗತ್ಯ ಸೇವೆಗಳು ಮಾತ್ರ ಇರುತ್ತವೆ ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದರು.
ಸರ್ಕಾರಿ ಕಚೇರಿಗಳು ಮಾಲ್ಗಳಿಗೆ ಭಾರತ ಸರ್ಕಾರದ ಮಾರ್ಗಸೂಚಿ ಅನುಸರಿಸಲಾಗುವುದು. ಚಿತ್ರಮಂದಿರ, ಮಾಲ್, ಬಾರ್, ಪಬ್ಗಳ ಒಟ್ಟು ಸಾಮರ್ಥ್ಯದ ಅರ್ಧದಷ್ಟು ಜನರಿಗೆ ಮಾತ್ರ ಪ್ರವೇಶ ಇರುತ್ತದೆ. ಇಲ್ಲಿಗೆ ಭೇಟಿ ನೀಡುವವರಿಗೆ ಲಸಿಕೆ ಕಡ್ಡಾಯ ಆಗಿರಲಿದೆ. ಸಾರ್ವಜನಿಕ ಸ್ಥಳಗಳಿಗೆ ಭೇಟಿ ನೀಡಲು ಡಬಲ್ ಡೋಸ್ ಕಡ್ಡಾಯ ಆಗಿರಲಿದೆ. ಮದುವೆ ಹೊರಾಂಗಣದಲ್ಲಿದ್ದರೆ 200, ಒಳಾಂಗಣದಲ್ಲಿದ್ದರೆ 100 ಜನರಿಗೆ ಮಾತ್ರ ಅವಕಾಶ. ಅವರಿಗೂ 2 ಡೋಸ್ ಆಗಿರಬೇಕು. ಮಹಾರಾಷ್ಟ್ರ, ಕೇರಳದಿಂದ ಬರುವವರಿಗೆ ಆರ್ಟಿಪಿಸಿಆರ್ ಕಡ್ಡಾಯ. ವಿದೇಶಿ ಪ್ರಯಾಣಿಕರ ಟ್ರ್ಯಾಕಿಂಗ್-ಟ್ರೇಸಿಂಗ್ ಬಲಪಡಿಸಲು ತೀರ್ಮಾನಿಸಲಾಗಿದೆ. ಎಂದು ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಂತರ ಸಚಿವರಾದ ಆರ್. ಅಶೋಕ್, ಡಾ.ಕೆ. ಸುಧಾಕರ್ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.
ಮಳೆಯ ಅಬ್ಬರ : ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಜು.8 (ನಾಳೆ ) ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಂಗಳೂರು: ಕರಾವಳಿ ಜಿಲ್ಲೆ…
ಕುಂದಾಪುರ : ತ್ರಾಸಿಯಲ್ಲಿ ರಸ್ತೆ ಅಪಘಾತ: ಮತ್ತೊಬ್ಬ ಸವಾರ ಚಿಕಿತ್ಸೆ ಫಲಕಾರಿಯಾಗದೇ ಮೃತ್ಯು ಕುಂದಾಪುರ: ಎರಡು ದ್ವಿಚಕ್ರ ವಾಹನಗಳ ನಡುವೆ ಸೋಮವಾರ…
ಕೃಷಿ ಸಾಲ ಮನ್ನಾ ಮಾಡುವ ಬಗ್ಗೆ ಪರಿಶೀಲನೆ ಮಾಡುವೆ : ಸಿಎಂ ಡಿಕೆಶಿ ಕಲಬುರಗಿ: ಕೃಷಿ ಸಾಲ ಮನ್ನಾ ಮಾಡುವ…
ಮಂಗಳೂರು: ಯುವತಿ ನಾಪತ್ತೆ: ಪೋಲಿಸರಿಂದ ಪತ್ತೆಗೆ ಮನವಿ ಮಂಗಳೂರು: ಉರ್ವ ಅಶೋಕ ನಗರದ ಮೆಡ್ ಕ್ವಿಸ್ಟ್ ಲ್ಯಾಬ್ನಲ್ಲಿ ಲ್ಯಾಬ್ ಟೆಕ್ನಿಷಿಯನ್…
ಕಟಪಾಡಿಯಿಂದ ಕಳವಾದ ಆಟೋರಿಕ್ಷಾ ಬೆಳ್ತಂಗಡಿಯಲ್ಲಿ ಪತ್ತೆ ಬೆಳ್ತಂಗಡಿ : ಕಟಪಾಡಿಯಿಂದ ಕಳವಾದ ಆಟೋರಿಕ್ಷಾವೊಂದು ಸೋಮವಾರ ಬೆಳ್ತಂಗಡಿ ಪಟ್ಟಣದ ಮೂರು ಮಾರ್ಗದಲ್ಲಿ…
ಮುಂಬೈ : ಭಾರೀ ಮಳೆ - ಸಂಪೂರ್ಣ ಅಸ್ತವ್ಯಸ್ತ ; 43 ರೈಲು ಸಂಚಾರ ರದ್ದು ಮುಂಬೈ: ಕಳೆದ ಮೂರು…