ಮಂಗಳೂರು: ಅಕ್ಮೆ ಮೂವೀಸ್ ಇಂಟರ್‌ನ್ಯಾಷನಲ್ ಲಾಂಛನದಲ್ಲಿ ತಯಾರಾಗಿರುವ, ದುಬೈಯ ಖ್ಯಾತ ಉದ್ಯಮಿ, ಕನ್ನಡ ಚಲನಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಮತ್ತು ಶ್ರೀಮತಿ ಶರ್ಮಿಳಾ ಶೇರಿಗಾರ್ ನಿರ್ಮಿಸಿರುವ ಕೆ. ಸೂರಜ್ ಶೆಟ್ಟಿ ನಿರ್ದೇಶನದ “ಇಂಗ್ಲಿಷ್” – ಎಂಕ್ಲೆಗ್ ಬರ್ಪುಜಿ Bro ತುಳು ಸಿನಿಮಾ ಬಿಡುಗಡೆ ದಿನಾಂಕವನ್ನು ಇದೀಗ ಮುಂದೂಡಲಾಗಿದೆ.
ಮಂಗಳವಾರ (ಮಾರ್ಚ್ 17) ನಗರದ ಪತ್ರಿಕಾಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಚಿತ್ರದ ನಿರ್ದೇಶಕ ಕೆ. ಸೂರಜ್ ಶೆಟ್ಟಿ,‘ಕೊರೊನ ವೈರಸ್ ದೇಶವ್ಯಾಪಿ ಹರಡುತ್ತಿರುವುದರಿಂದ ಮುಂಜಾಗೃತ ಕ್ರಮವಾಗಿ ಕರ್ನಾಟಕ ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಮಾಲ್ ಹಾಗೂ ಚಿತ್ರಮಂದಿರಗಳನ್ನು ತಾತ್ಕಾಲಿಕ ಬಂದ್ ಮಾಡುವಂತೆ ಆದೇಶ ನೀಡಿದೆ’.
ಈ ಹಿನ್ನೆಲೆಯಲ್ಲಿ ಮಾರ್ಚ್ 20ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಗಲ್ಫ್ ರಾಷ್ಟ್ರಗಳಲ್ಲಿ ಬಿಡುಗಡೆಯಾಗ ಬೇಕಾಗಿದ್ದ “ಇಂಗ್ಲಿಷ್” ತುಳು ಸಿನಿಮಾ ಬಿಡುಗಡೆಯನ್ನು ಮುಂದೂಡಲಾಗಿದೆ.
ಚಿತ್ರದ ನಿರ್ಮಾಪರಾದ ಹರೀಶ್ ಶೇರಿಗಾರ್ ಇಚ್ಚೆಯಂತೆ ಚಿತ್ರಮಂದಿರದ ವಿಚಾರದಲ್ಲಿ ಯಾರಿಗೂ ತೊಂದರೆಯಾಗದಂತೆ ನೋಡಿಕೊಂಡು ಚಿತ್ರ ಬಿಡುಗಡೆಯ ಮುಂದಿನ ದಿನಾಂಕವನ್ನು ತಿಳಿಸಲಾಗುವುದು ಎಂದರು.
ನಟ ನವೀನ್ ಡಿ.ಪಡೀಲ್ ಮಾತನಾಡಿ, ಕೊರೊನ ಬಗ್ಗೆ ಮುಂಜಾಗೃತೆ ವಹಿಸುವ ನಿಟ್ಟಿನಲ್ಲಿ ಸರ್ಕಾರದ ಆದೇಶ ಬಂದಿದ್ದು, ಇದಕ್ಕೆ ನಾವೆಲ್ಲಾ ಸಹಕಾರ ನೀಡಬೇಕಾದದ್ದು ಅನಿವಾರ್ಯ.ಜನರ ಆರೋಗ್ಯದ ದೃಷ್ಠಿಯಿಂದ ಸರ್ಕಾರದ ಆದೇಶಕ್ಕೆ ಗೌರವ ನೀಡಿ ಚಿತ್ರ ಬಿಡುಗಡೆ ದಿನಾಂಕವನ್ನು ಮುಂದೂಡಲಾಗಿದೆ.ಮುಂದಿನ ದಿನಾಂಕವನ್ನು ಶೀಘ್ರದಲ್ಲೆ ತಿಳಿಸುತ್ತೇವೆ ಎಂದು ಹೇಳಿದರು.
ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…
ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…
ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…
ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…
ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…
ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…