ನವದೆಹಲಿ, : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಅಧಿಕವಾಗುತ್ತಿರುವ ನಡುವೆ ಭಾರತದ ಒಟ್ಟು ಸೋಂಕಿತರಲ್ಲಿ ಸುಮಾರು 1 ಲಕ್ಷ ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು ಇದು ಆಶಾದಾಯಕ ಬೆಳವಣಿಗೆಯಾಗಿದೆ.
ಕೊರೊನಾ ರೋಗಿಗಳ ಪೈಕಿ 1 ಲಕ್ಷದ 303 ಮಂದಿ ಇದುವರೆಗೆ ಗುಣಮುಖರಾಗಿದ್ದಾರೆ. ಅಂದರೆ ಶೇ. 48.33% ರಷ್ಟು ಕೊರೊನಾ ರೋಗಿಗಳು ಗುಣಮುಖರಾಗಿದ್ದಾರೆ. ದಿನ ನಿತ್ಯ ಗುಣುಮುಖ ಸಂಖ್ಯೆಯಲ್ಲಿ ಏರಿಕೆಯಾಗುತ್ತಿದೆ ಎಂದು ಕೇಂದ್ರ ಆರೋಗ್ಯ ಇಲಾಖೆ ತಿಳಿಸಿದೆ.
ಸದ್ಯ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 2 ಲಕ್ಷದ 7 ಸಾವಿರದ 615 ಇದೆ . ಈಗ ಒಂದು ಲಕ್ಷಕ್ಕೂ ಅಧಿಕ ರೋಗಿಗಳು ಗುಣಮುಖರಾಗಿರುವುದರಿಂದ ಸದ್ಯ ಆಕ್ಟೀವ್ ಕೇಸ್‌ಗಳು 1,01,497 ಇದೆ. ಅಲ್ಲದೇ ಇದುವರೆಗೆ ದೇಶದಲ್ಲಿ ಕೊರೊನಾದಿಂದ 5,815 ಜನರು ಸಾವನಪ್ಪಿದ್ದಾರೆ ಎಂದು ತಿಳಿದು ಬಂದಿದೆ.
ದೇಶದಲ್ಲಿ ಗುಣಮುಖರಾಗುತ್ತಿರುವ ಸಂಖ್ಯೆ ಹೆಚ್ಚುತ್ತಿದ್ದರು ಮುನ್ನೆಚ್ಚರಿಕಾ ಕ್ರಮ ಅಗತ್ಯವೆಂದಿರುವ ಆರೋಗ್ಯ ಇಲಾಖೆ ಕೊರೊನಾಗೆ ಭಯ ಪಡುವ ಅಗತ್ಯವಿಲ್ಲ ಎಂದು ತಿಳಿಸಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…