Featured

ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ :ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ -Vishwanews24

ಕೊರೊನಾ ನಿಯಂತ್ರಣದ ಹೆಸರಿನಲ್ಲಿ ಬಿಜೆಪಿ ಸರ್ಕಾರದಿಂದ ಭ್ರಷ್ಟಾಚಾರ :ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ -Vishwanews24

ಬೆಂಗಳೂರು: ‘ಕೊರೊನಾ ಸೋಂಕು ರಾಜ್ಯದಲ್ಲಿ ಕಾಣಿಸಿಕೊಂಡಾಗಿನಿಂದ ಅದರ ನಿಯಂತ್ರಣದ ಹೆಸರಿನಲ್ಲಿ ಬಿಜೆಪಿ ಸರ್ಕಾರ ಭ್ರಷ್ಟಾಚಾರ ಮಾಡುತ್ತಿದೆ’ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.

ಆನಂದರಾವ್ ವೃತ್ತದ ಗಾಂಧಿ ಪ್ರತಿಮೆ ಎದುರು ಸೇರಿದ್ದ ಕಾರ್ಯಕರ್ತರು, ‘ಕೊರೊನಾ ಸಮಯದಲ್ಲೇ ಬಿಜೆಪಿ ಸರ್ಕಾರ ಹಣ ಲೂಟಿ ಮಾಡುತ್ತಿದೆ’ ಎಂಬ ಘೋಷಣಾ ಫಲಕ ಪ್ರದರ್ಶಿಸಿದರು.

ಬಿಜೆಪಿ ಸಚಿವರ ಹಾಗೂ ಮುಖಂಡರ ಮುಖವಾಡ ಧರಿಸಿ ರಸ್ತೆಯಲ್ಲೇ ಮಲಗಿ ವ್ಯಂಗ್ಯವಾಗಿ ಘೋಷಣೆ  ಕೂಗಿದರು.

‘ಬಿಜೆಪಿ ಸರ್ಕಾರ, ಕೊರೊನಾ ಹೆಸರಿನಲ್ಲಿ ಕೋಟ್ಯಂತರ ರೂಪಾಯಿ ಲೂಟಿ ಮಾಡುತ್ತಿದೆ. ತಗಡು, ಹಾಸಿಗೆ, ದಿಂಬು. ವೆಂಟಿಲೇಟರ್… ಹೀಗೆ ಹಲವು ವಸ್ತುಗಳ ಖರೀದಿಯಲ್ಲೂ ಭ್ರಷ್ಟಾಚಾರ ನಡೆದಿದೆ. ಮುಖ್ಯಮಂತ್ರಿ ಹಾಗೂ ಸಚಿವ ಸಂಪುಟದ ಸಹೋದ್ಯೋಗಿಗಳೆಲ್ಲರೂ ಇದರಲ್ಲಿ ಭಾಗಿಯಾಗಿದ್ದಾರೆ’ ಎಂದು ಪ್ರತಿಭಟನಕಾರರು ದೂರಿದರು.

‘ಸೀಲ್‌ಡೌನ್ ಹೆಸರಿನಲ್ಲೂ ಭ್ರಷ್ಟಾಚಾರ ನಡೆದಿದೆ. ಖಜಾನೆಯಲ್ಲಿ ಹಣವಿಲ್ಲವೆಂಬ ಕಾರಣ ನೀಡುತ್ತಿರುವ ಬಿಜೆಪಿ ಸರ್ಕಾರ, ರಾಜ್ಯದ ಹಲವೆಡೆ ಇರುವ ಸರ್ಕಾರಿ ಭೂಮಿ ಹಾಗೂ ಸ್ವತ್ತನ್ನು ಮಾರಾಟ ಮಾಡಲು ಮುಂದಾಗಿರುವುದು ಖಂಡನೀಯ. ಇಂಥ ಸರ್ಕಾರದ ವಿರುದ್ಧ ನಮ್ಮ ಪ್ರತಿಭಟನೆ ನಿರಂತರ’ ಎಂದೂ ಪ್ರತಿಭಟನನಿರತ ಕಾಂಗ್ರೆಸ್ ಕಾರ್ಯಕರ್ತರು ತಿಳಿಸಿದರು.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

16 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

16 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

16 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

16 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

16 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

16 hours ago