ಮೈಸೂರು: ಜಿಲ್ಲೆಯಲ್ಲಿ ಕೆಲದಿನಗಳಿಂದ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಈ ನಿಟ್ಟಿನಲ್ಲಿ ಏಪ್ರಿಲ್ 10 ರಿಂದ ಕೆಲವು ಟಫ್ ರೂಲ್ಸ್ ಗಳನ್ನು ಹಾಕಲು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಮುಂದಾಗಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ರೋಹಿಣಿ ಸಿಂಧೂರಿ, ಈಗಾಗಲೇ ರಾಜ್ಯದಲ್ಲಿ ಕೊರೊನಾ ಎರಡನೇ ಅಲೆ ಪ್ರಾರಂಭವಾಗಿದ್ದು, ಏಪ್ರಿಲ್ 10 ರಿಂದ ಏಪ್ರಿಲ್ 20 ರವರೆಗೆ ಹಲವು ರಜೆಗಳು ಇರುವುದರಿಂದಾಗಿ ಮೈಸೂರಿಗೆ ಪ್ರವಾಸಿಗರು ಆಗಮಿಸುವ ನಿರೀಕ್ಷೆ ಇದೆ. ಈ ವೇಳೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುವ ಆತಂಕವಿದೆ. ಹಾಗಾಗಿ ಮೈಸೂರಲ್ಲಿ ಕೆಲವು ಟಫ್ ರೂಲ್ಸ್ ಗಳನ್ನು ಜಾರಿಗೆ ತರಲು ಮುಂದಾಗಿದ್ದೇವೆ ಎಂದರು.
ಜಿಲ್ಲೆಯಲ್ಲಿ ಕೊರೊನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಈಗಾಗಲೇ ಜಿಲ್ಲಾಡಳಿತ ಕೆಲವು ಕ್ರಮಕ್ಕೆ ಮುಂದಾಗಿದ್ದು, ಈ ಪ್ರಕಾರ ಏಪ್ರಿಲ್ 10 ರಿಂದ ಏಪ್ರಿಲ್ 20ರ ವರೆಗೆ ಜಿಲ್ಲೆಯಲ್ಲಿರುವ ಪ್ರವಾಸಿ ತಾಣಗಳಿಗೆ ಹೋಗಲು, ಚಿತ್ರಮಂದಿರಗಳಿಗೆ ತೆರಳಲು ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.
ನಾವು ಮೈಸೂರಿನಲ್ಲಿರುವ ಯಾವುದೇ ಪ್ರವಾಸಿತಾಣಗಳನ್ನು ಮುಚ್ಚುತಿಲ್ಲ ಬದಲಾಗಿ ಕೆಲವು ನಿಯಮಗಳನ್ನು ಜಾರಿಗೆ ತಂದಿದ್ದೇವೆ. ರಜೆಯ ಇರುವುದರಿಂದಾಗಿ ಪ್ರವಾಸಿಗರು ಬರುವ ನಿರೀಕ್ಷೆ ಇದ್ದು ಈ ಸಂದರ್ಭ ಜನ ಸಂದಣಿ ಜಾಸ್ತಿ ಇರುವ ಪ್ರದೇಶಗಳಲ್ಲಿ ನಿಗಾ ವಹಿಸಲಾಗುವುದು, ಈ ಎಲ್ಲಾ ಕಾರ್ಯಗಳಿಗಾಗಿ ಈಗಾಗಲೇ ಜಿಲ್ಲೆಯಲ್ಲಿ 300 ಹೋಂ ಗಾರ್ಡ್‍ಗಳನ್ನು ನೇಮಕ ಮಾಡಿದ್ದೇವೆ. ಮೈಸೂರಿಗೆ ಪ್ರವಾಸಕ್ಕೆ ಬರುವವರು ಕೊರೊನಾ ನೆಗೆಟಿವ್ ರಿಪೋರ್ಟ್ ಕಡ್ಡಾಯವಾಗಿ ತರಬೇಕೆಂದು ಪ್ರವಾಸಿಗರಿಗೆ ಮನವಿ ಮಾಡಿಕೊಂಡರು.
ಅದೇ ರೀತಿ ಜಿಲ್ಲೆಯಲ್ಲಿ ನಡೆಯುವ ಎಲ್ಲಾ ಸಭೆ ಸಮಾರಂಭಗಳಿಗೆ ಪೊಲೀಸ್ ಇಲಾಖೆಯಿಂದ ಒಪ್ಪಿಗೆ ಪಡೆದುಕೊಂಡು ಸಮಾರಂಭಗಳನ್ನು ನಡೆಸಬೇಕೆಂದು ಸಾರ್ವಜನಿಕರಿಗೆ ಮನವರಿಕೆ ಮಾಡಿಕೊಂಡರು.
KSRTC ನೌಕರರ ಮುಷ್ಕರ:ರಾಜ್ಯದ ಸರ್ಕಾರದ ಪಾಪದ ಫಲವನ್ನು ಜನತೆ ಅನುಭವಿಸಿದಂತಾಗಿದೆ : ಸಿದ್ದರಾಮಯ್ಯ -Vishwanews24
ಅ.15ರಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದ.ಕ. ಮತ್ತು ಉಡುಪಿ ಪ್ರವಾಸ ಮಂಗಳೂರು ಉಚ್ಚಿಲ ದಸರಾ ನವರಾತ್ರಿ ಮಹೋತ್ಸವ ದಲ್ಲಿ ಭಾಗಿ…
ಉಡುಪಿ ಉಚ್ಚಿಲ ದಸರಾ -2026 ರಾಜ್ಯ ಮಟ್ಟದ ನೃತ್ಯ ಸ್ಪರ್ಧೆ ; ಟ್ರೋಫಿ ಗೆದ್ದುಕೊಂಡ ಉಡುಪಿಯ ಎಕ್ಸ್ಟ್ರಿಮ್ ಡ್ಯಾನ್ಸ್ ಅಕಾಡೆಮಿ…
ಉಡುಪಿ: ‘ಭಾರತ್ ಮಾತಾ ಕೀ ಜೈ’ ಘೋಷಣೆ ಕೂಗಿದ ವಿದ್ಯಾರ್ಥಿಗಳ ಮೇಲೆ ಹಲ್ಲೆ ಆರೋಪ; ಪೊಲೀಸ್ ಅಧಿಕಾರಿಯ ವಿರುದ್ಧ ಕಠಿಣ…
ದಸರಾ ರಜೆ ವೇಳೆ ಪರೀಕ್ಷೆ ವಿವಾದ: ಅ.19 ಮತ್ತು 22ರ ಪರೀಕ್ಷೆ ಮುಂದೂಡಿದ ಸೈಂಟ್ ಆಗ್ನೆಸ್ ಕಾಲೇಜು ಮಂಗಳೂರು: ದಸರಾ…
`ಬ್ರೇಕಿಂಗ್ ಬ್ಯಾಡ್' ಖ್ಯಾತಿಯ ಹಾಲಿವುಡ್ ನಟ ಆರ್ಜೆ ಮಿಟ್ಟೆ ನಿಧನ ಅಮೆರಿಕದ ಜನಪ್ರಿಯ ಟಿವಿ ಸರಣಿ `ಬ್ರೇಕಿಂಗ್ ಬ್ಯಾಡ್’ನಲ್ಲಿ ವಾಲ್ಟರ್…
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…