ಕೊರೊನಾ ಭೀತಿ : ಮಾ.31ರ ವರೆಗೆ ಕರ್ನಾಟಕದಲ್ಲಿ ಬಂದ್ ಮುಂದುವರಿಕೆ : ನೋ ಮಾಲ್, ಥಿಯೇಟರ್ -Vishwanews24

ಬೆಂಗಳೂರು : ಕೊರೊನಾ ವೈರಸ್ ಸೋಂಕಿನ ತಡೆಗಾಗಿ 200 ಕೋಟಿ ರೂಪಾಯಿ ಮೀಸಲಿಡುವುದಲ್ಲದೇ, ರಾಜ್ಯದಲ್ಲಿ ಮಾರ್ಚ್ 31ರ ವರೆಗೆ ಕರ್ನಾಟಕ ಬಂದ್ ಮುಂದುವರೆಸಲು, ಪ್ರತಿ ಜಿಲ್ಲೆಯಲ್ಲೂ ಐವರು ಸಚಿವರ ನೇತೃತ್ವದಲ್ಲಿ ಹಾಗೂ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಟಾಸ್ಕ್ ಪೋರ್ಸ್ ರಚಿಸಲು ಇಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯವನ್ನು ಕೈಗೊಳ್ಳಲಾಗಿದೆ.

ಇಂದು ಕೊರೊನಾ ವೈರಸ್ ಸೋಂಕು ರಾಜ್ಯದಲ್ಲಿ ಹೆಚ್ಚುತ್ತಿರುವ ಕುರಿತಂತೆ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರ ನೇತೃತ್ವದಲ್ಲಿ ವಿಧಾನಸೌಧದಲ್ಲಿ ನಡೆಸಲಾಯಿತು. ಈ ಕುರಿತಂತೆ ಸದನದಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸದನದ ಗಮನಕ್ಕೆ ತಂದ ಅವರು, ಸಚಿವ ಸಂಪುಟ ಸಭೆಯಲ್ಲಿ, ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯನ್ನು ಕೊರೊನಾ ವೈರಸ್ ಸೋಂಕಿನ ಭೀತಿಯ ಹಿನ್ನಲೆಯಲ್ಲಿ ಮುಂದೂಡುವಂತೆ ರಾಜ್ಯ ಚುನಾವಣಾ ಆಯೋಗಕ್ಕೆ ಮನವಿ ಮಾಡಲು ತೀರ್ಮಾನ ಕೈಗೊಳ್ಳಲಾಗಿದೆ.

ಇನ್ನೂ ಕೊರೊನಾ ವೈರಸ್ ವಿರುದ್ಧದ ಸಮರಕ್ಕೆ, ಮುಂಜಾಗ್ರತಾ ಕ್ರಮ ಸೇರಿದಂತೆ ವೈದ್ಯಕೀಯ ವೆಚ್ಚಕ್ಕಾಗಿ 200 ಕೋಟಿಯನ್ನು ನಿಗಧಿ ಪಡಿಸಲಾಗಿದೆ. ಈ ಹಿಂದಿನ ಎಲ್ಲಾ ಮಾರ್ಗ ಸೂಚಿಗಳನ್ನು ಮುಂದುವರೆಸುವಂತ ನಿರ್ಣಯಗಳನ್ನು ಕೈಗೊಂಡಿರುವ ರಾಜ್ಯ ಸಚಿವ ಸಂಪುಟ ಸಭೆ, ಮಾರ್ಚ್ 31ರ ವರೆಗೆ ಮತ್ತೆ ರಾಜ್ಯದಲ್ಲಿ ಬಂದ್ ಮುಂದುವರೆಸುವಂತ ನಿರ್ಣಯವನ್ನು ಕೈಗೊಳ್ಳಲಾಗಿರುವುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಇದಷ್ಟೇ ಅಲ್ಲದೇ ಮತ್ತೆ ಮಾರ್ಚ್ 31ರ ವರೆಗೆ ಕರ್ನಾಟಕ ಲಾಕ್ ಡೌನ್ ಮಾಡಲಿದ್ದು, ಮಾಲ್, ಥಿಯೇಟರ್, ಪಬ್, ಕ್ಲಬ್ ಬಂದ್ ಆಗಲಿದೆ. ಮದುವೆ, ನಿಶ್ಚಿತಾರ್ಥಕ್ಕೂ ಬ್ರೇಕ್ ಬಿದ್ದಿದೆ. ಸಂತೆ, ಜಾತ್ರೆ, ರಥೋತ್ಸವವೂ ಇಲ್ಲ. ಈಜು, ಬೇಸಿಗೆ ಶಿಬಿರ, ಪ್ರವಾಸ ರದ್ದು ಪಡಿಸಲಾಗಿದೆ. ಯುಗಾದಿ ಸಂಭ್ರಮಕ್ಕೂ ಬ್ರೇಕ್ ಹಾಕಿರುವ ಸರ್ಕಾರ, ರಾಜ್ಯದ ಎಲ್ಲ ದೇವಾಲಯಗಳೂ ಬಂದ್ ಮಾಡುವ ನಿರ್ಧಾರವನ್ನು ಕೈಗೊಳ್ಳಲಿಗೆ. ಶಾಲಾ-ಕಾಲೇಜುಗಳಿಗೆ ರಜೆ ಮುಂದುವರಿಕೆ ಮಾಡಿದೆ

Vishwa News 24

Recent Posts

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ -vishwanews24

ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆ ವತಿಯಿಂದ ಗಾಂಧಿ ಜಯಂತಿ ಆಚರಣೆ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ…

17 hours ago

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ -vishwanews24

ಮಂಗಳೂರು : ಅ.2ರಂದು ಜಿಲ್ಲಾ ಯುವ ಕಾಂಗ್ರೆಸ್‌ನಿಂದ ‘ಸದ್ಭಾವನಾ ನಡಿಗೆ’ ಮಂಗಳೂರು: ಗಾಂಧಿ ಜಯಂತಿ ಪ್ರಯುಕ್ತ ದ.ಕ.ಜಿಲ್ಲಾ ಯುವ ಕಾಂಗ್ರೆಸ್…

2 days ago

ಕಾಪು : ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ -vishwanews24

ಶಂಕರಪುರ ದ್ವಾರಕಾಮಾಯಿ ಮಠದಲ್ಲಿ ‘ಪಂಚಾಶತ್ ಜನ್ಮ ವೈಭವ’ ಅ.3ರಿಂದ ಧಾರ್ಮಿಕ ಕಾರ್ಯಕ್ರಮಗಳ ಚಾಲನೆ.. ವರ್ಷಪೂರ್ತಿ ಗೋಸೇವೆ, ಅನ್ನದಾನ, ಆರೋಗ್ಯ–ಶಿಕ್ಷಣ ಸೇವೆ…

2 days ago

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  -vishwanews24

ಸೌಜನ್ಯಾ ಪ್ರಕರಣದ ಮರುತನಿಖೆ: ಮಂಗಳೂರಿಗೆ ಆಗಮಿಸಿದ ನೂತನ ಎಸ್ಐಟಿ ತಂಡ  ಮಂಗಳೂರು : ಸೌಜನ್ಯಾ ಅತ್ಯಾಚಾರ, ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ…

2 days ago

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ -vishwanews24

ಪರಪ್ಪನ ಆಗ್ರಹಾರ ಕಾರಾಗೃಹದಲ್ಲಿ ಮತ್ತೆ ಮೊಬೈಲ್ ಫೋನ್, ಸಿಮ್ಕಾರ್ಡ್ ಗಳು ಪತ್ತೆ ಬೆಂಗಳೂರು: ಪರಪ್ಪನ ಆಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್…

2 days ago

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ -vishwanews24

ಎಂಆರ್‌ಪಿಎಲ್ ಕಾರ್ಮಿಕರ ಮುಷ್ಕರ: ಮೃತ ಮನೀಶ್ ಕಾರ್ಕಡಗೆ ಶ್ರದ್ಧಾಂಜಲಿ, ಪರಿಹಾರಕ್ಕೆ ಆಗ್ರಹ ಮಂಗಳೂರು: ಎಂಆರ್‌ಪಿಎಲ್‌ನಲ್ಲಿ ನಿನ್ನೆ (ಸೆ.30ರ ಬುಧವಾರ) ನಡೆದ…

2 days ago