ಬೆಂಗಳೂರು,: ಕೇಂದ್ರ ಸರ್ಕಾರದ ಸೂಚನೆಯಂತೆ ಕೊರೊನಾ ಲಸಿಕೆ ವಿತರಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.
ಈ ಕುರಿತು ಮಾತನಾಡಿದ ಅವರು, “ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಕೊರೊನಾ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ ಎಂದರು”.
ಇನ್ನು ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದ್ದು, ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ. ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.
ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ ಶಿಳ್ಳೆ ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್ ಭಟ್ ಗರಂ ಮಂಗಳೂರು: ಯಕ್ಷಗಾನ…
ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…
SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…
ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಗೌರವ ಡಾಕ್ಟರೇಟ್ ಮಂಗಳೂರು…
ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…
ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ : ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…