ಕೊರೊನಾ : ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ’ : ಸುಧಾಕರ್ -Vishwanews24

ಕೊರೊನಾ : ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರ ಗುರುತಿಸಲಾಗಿದೆ’ : ಸುಧಾಕರ್ -Vishwanews24

ಬೆಂಗಳೂರು,: ಕೇಂದ್ರ ಸರ್ಕಾರದ ಸೂಚನೆಯಂತೆ ಕೊರೊನಾ ಲಸಿಕೆ ವಿತರಿಸಲು ಎಲ್ಲಾ ಸಿದ್ದತೆಗಳು ನಡೆಯುತ್ತಿದ್ದು, ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, “ಕೊರೊನಾ ಲಸಿಕೆ ವಿತರಣೆಗೆ ಎಲ್ಲಾ ಸಿದ್ಧತೆಗಳನ್ನು ಕೈಗೊಳ್ಳಲಾಗಿದ್ದು, ರಾಜ್ಯ ಕೊರೊನಾ ಕಾರ್ಯಪಡೆ ಸಭೆ ಸೇರಿ ಈ ಕುರಿತು ಚರ್ಚೆ ನಡೆಸಿದ್ದು, ಲಸಿಕೆ ಸಂಗ್ರಹ ಹಾಗೂ ವಿತರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ರಾಜ್ಯಾದ್ಯಂತ 29,451 ಲಸಿಕೆ ವಿತರಣೆ ಕೇಂದ್ರಗಳನ್ನು ಗುರುತಿಸಿದ್ದು, ಲಸಿಕೆ ವಿತರಣೆ ಮಾಡಲು 10,008 ವ್ಯಾಕ್ಸಿನೇಟರ್ ಸಿಬ್ಬಂದಿಗಳನ್ನು ಗುರುತಿಸಲಾಗಿದೆ ಎಂದರು”.

ಇನ್ನು ಸರ್ಕಾರಿ ಆರೋಗ್ಯ ಕೇಂದ್ರಗಳ ಸಿಬ್ಬಂದಿ, ಆರೋಗ್ಯ ಕಾರ್ಯಕರ್ತರ ಬಗೆಗಿನ ಮಾಹಿತಿಯನ್ನು ದಾಖಲಿಸಲಾಗಿದ್ದು, ಶೇ.80 ರಷ್ಟು ಖಾಸಗಿ ಆಸ್ಪತ್ರೆಗಳು ಮಾಹಿತಿ ಒದಗಿಸಿದ್ದು, ಇನ್ನೂ ಶೇ.20 ರಷ್ಟು ಆಸ್ಪತ್ರೆಗಳು ವಾರದೊಳಗೆ ಮಾಹಿತಿ ನೀಡಲಿವೆ. ಲಸಿಕೆ ಸಂಗ್ರಹ ಮತ್ತು ವಿತರಣೆಗೆ 2,855 ಕೋಲ್ಡ್ ಚೇನ್ ಕೇಂದ್ರ ಲಭ್ಯವಿದೆ. ಬೇಗನೆ ಲಸಿಕೆ ವಿತರಣೆ ಮಾಡಲು ಸಾಧ್ಯವಾಗುವಂತೆ ಹೊಸದಾಗಿ ಬೆಂಗಳೂರು ನಗರ, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಪ್ರಾದೇಶಿಕ ಲಸಿಕೆ ಸಂಗ್ರಹ ಕೇಂದ್ರಗಳನ್ನು ಆರಂಭಿಸಲು ಪ್ರಸ್ತಾಪಿಸಲಾಗಿದೆ ಎಂದು ಹೇಳಿದ್ದಾರೆ.

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

4 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

5 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

5 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

5 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

5 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

5 hours ago