Featured

ಕೊರೊನಾ ರೂಪಾಂತರಿ – 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ನಿರ್ಬಂಧ ಸದ್ಯಕ್ಕಿಲ್ಲ : ಸಚಿವ ದಿನೇಶ್ ಗುಂಡೂರಾವ್ – vishwanews24

’ಕೊರೊನಾ ರೂಪಾಂತರಿ – 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ನಿರ್ಬಂಧ ಸದ್ಯಕ್ಕಿಲ್ಲ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.‌

ಕೊರೋನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ. 60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಗತ್ಯವಿರುವ ಬೆಡ್, ಪಿಪಿಇ ಕಿಟ್, ಸನ್ನದ್ದ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು.

ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ, ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

Vishwa News 24

Recent Posts

ಎಸ್‌ಐಆರ್‌ ವಿವಾದ: ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ನೀಡಿದರೆ ರಾಜ್ಯಾದ್ಯಂತ ಹೋರಾಟ :ಯಡಿಯೂರಪ್ಪ ಎಚ್ಚರಿಕೆ – vishwanews24

ಬಿಜೆಪಿ ಕಾರ್ಯಕರ್ತರ ಮೇಲಿನ FIR ರದ್ದಿಗೆ ಆಗ್ರಹ : ರಾಜ್ಯಾದ್ಯಂತ ಹೋರಾಟದ ಎಚ್ಚರಿಕೆ ನೀಡಿದ ಬಿಎಸ್‌ವೈ ಬೆಂಗಳೂರು: ಎಸ್‍ಐಆರ್ ಸಂಬಂಧ…

18 hours ago

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ – vishwanews24

ಮಂಗಳೂರು: ಮನೆ ಕನ್ನ ಕಳವು ಪ್ರಕರಣ ಭೇದಿಸಿದ ಪೊಲೀಸರು; ದೆಹಲಿ ಮೂಲದ ಇಬ್ಬರ ಬಂಧನ, 18 ಲಕ್ಷ ಮೌಲ್ಯದ ಸೊತ್ತು…

18 hours ago

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ – vishwanews24

ಏಷ್ಯನ್ ಗೇಮ್ಸ್ : ಕುಸ್ತಿಯಲ್ಲಿ ಚಿನ್ನ ಗೆದ್ದ ಅಮನ್ ಸೆಹ್ರಾವತ್ ನಗೋಯಾ: ಜಪಾನ್‌ನ ಐಚಿ-ನಗೋಯಾದಲ್ಲಿ ನಡೆಯುತ್ತಿರುವ 2026ರ ಏಷ್ಯನ್ ಗೇಮ್ಸ್‌ನಲ್ಲಿ…

19 hours ago

ಕಾರ್ಕಳ : ಅ. 5 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ – vishwanews24

ಕಾರ್ಕಳ : ಅ. 05 ರಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿಯಿಂದ ಬೃಹತ್ ಪ್ರತಿಭಟನೆ ಕಾರ್ಕಳ: ರಾಜ್ಯ ಕಾಂಗ್ರೆಸ್ ಸರ್ಕಾರದ…

19 hours ago

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ – vishwanews24

ಮಂಗಳೂರು: ಯುವನಿಧಿ ಫಲಾನುಭವಿಗಳಿಗೆ ಕೌಶಲ ಭಾಗ್ಯ: ಉಚಿತ ತರಬೇತಿ ಮತ್ತು ಉದ್ಯೋಗಾವಕಾಶಕ್ಕಾಗಿ ಅರ್ಜಿ ಆಹ್ವಾನ ಮಂಗಳೂರು: ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ…

19 hours ago

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ – vishwanews24

180 ಜನರ ಪ್ರಾಣ ಉಳಿಸಿದ ಭಾರತೀಯ ಪೈಲಟ್ ಸ್ಮಿತ್ ಮಚ್ಚಾರ್‌ಗೆ 1 ಕೋಟಿ ರೂ. ಘೋಷಣೆ ನವದೆಹಲಿ : ದುಬೈನಿಂದ…

20 hours ago