ರಿಯಾದ್ (Vishwanews24 ) : ಕೊರೊನಾ ಲಸಿಕೆ ಹಾಕಿಸಿಕೊಂಡವರು ಹಾಗೂ ಪ್ರತಿಕಾಯಗಳನ್ನು ಹೊಂದಿರುವವರಿಗೆ ಮಾತ್ರ ಮೆಕ್ಕಾ, ಮದಿನಾ ಸೇರಿ ಪವಿತ್ರ ಕ್ಷೇತ್ರಗಳ ಯಾತ್ರೆಗೆ ಅವಕಾಶ ನೀಡುತ್ತೇವೆ ಎಂದು ಸೌದಿ ಅರೇಬಿಯಾ ಸರ್ಕಾರ ತಿಳಿಸಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ, ಕೊರೊನಾ ಲಸಿಕೆಯ ಎರಡು ಡೋಸ್‌ಗಳನ್ನು ಈಗಾಗಲೇ ಪಡೆದಿರುವವರು, ಮೊದಲ ಡೋಸ್ ಪಡೆದು ಕನಿಷ್ಠ 14 ದಿನ ಕಳೆದಿರುವವರು ಈಗಾಗಲೇ ಕೊರೊನಾ ಸೋಂಕು ದೃಢಪಟ್ಟು ಗುಣಮುಖರಾಗಿರುವವರನ್ನು ಪ್ರತಿಕಾಯಗಳನ್ನು ಹೊಂದಿದವರು ಎಂದು ಪರಿಗಣನೆ ಮಾಡಲಾಗುವುದು. ಇವರಿಗೆ ಈ ಪವಿತ್ರ ರಂಜಾನ್ ತಿಂಗಳಿನಲ್ಲಿ ಆರಂಭವಾಗುವ ಮೆಕ್ಕಾ, ಮದಿನಾ ಯಾತ್ರೆಗೆ ಅವಕಾಶ ನೀಡಲಾಗುವುದು. ಹಾಗೆಯೇ ಈ ನಿಯಮ ರಂಜಾನ್ ತಿಂಗಳ ಆರಂಭದಿಂದ ಜಾರಿಗೆ ಬರಲಿದೆ ಎಂದು ತಿಳಿಸಿದೆ.
ಭಾರತದ ಮುಖ್ಯ ನ್ಯಾಯಾಧೀಶರಾಗಿ ಜಸ್ಟಿಸ್ ಎನ್. ವಿ. ರಮಣ ನೇಮಕ -Vishwanews24
ಇನ್ನು ಈ ನಿಯಮವು ಎಲ್ಲಿಯವರೆಗೆ ಜಾರಿಯಲ್ಲಿ ಇರಲಿದೆ ಹಾಗೂ ವರ್ಷದ ಕೊನೆಯ ಹಜ್ ಯಾತ್ರೆಗೂ ಇದು ಅನ್ವಯವಾಗಲಿದೆಯೇ ಎಂಬುದನ್ನು ಸೌದಿ ಅರೇಬಿಯಾದ ಹಜ್ ಮತ್ತು ಉಮ್ರಾ (ಯಾತ್ರೆ) ಸಚಿವಾಲಯ ಖಚಿತಪಡಿಸಿಲ್ಲ.
ಸೌದಿ ಅರೇಬಿಯಾದಲ್ಲಿ 3,93,000ಕ್ಕೂ ಅಧಿಕ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು 6,700 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. ಈ ನಡುವೆ ಸರ್ಕಾರ 50 ಲಕ್ಷಕ್ಕೂ ಅಧಿಕ ಮಂದಿಗೆ ಕೊರೊನಾ ಲಸಿಕೆ ನೀಡಿದೆ.
ಉಳ್ಳಾಲ : ಗುಳಿಗ ದೈವದ ಕಟ್ಟೆಯ ಬಳಿ ಚಪ್ಪಲಿ ಹಾಕಿ ವಿಕೃತಿ ಮೆರೆದ ದುಷ್ಕರ್ಮಿಗಳು -Vishwanews24
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…