ನವದೆಹಲಿ: ಮಹಾಮಾರಿ ಕೊರೊನಾ ವೈರಸ್ ಗೆ ಈಗಾಗಲೇ ಲಸಿಕೆ ಬಂದಿದ್ದು, ದೇಶದೆಲ್ಲೆಡೆ ಲಸಿಕೆ ನೀಡಲಾಗುತ್ತಿದೆ. ಇದೀಗ ಪ್ರಧಾನಿ ನರೇಂದ್ರ ಮೋದಿ ಕೂಡ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ.
ದೆಹಲಿಯ ಆಲ್ ಇಂಡಿಯಾ ಇನ್ಸ್ ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ನಲ್ಲಿ ಮೋದಿಯವರಿಗೆ ಕೊರೊನಾ ವೈರಸ್ ಲಸಿಕೆ ನೀಡಲಾಗಿದೆ. ಈ ಸಂಬಂಧ ಇಂದು ಬೆಳಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಏಮ್ಸ್ ಆಸ್ಪತ್ರೆಯಲ್ಲಿ ಕೋವಿಡ್ -19 ಲಸಿಕೆ ತೆಗೆದುಕೊಂಡಿದ್ದೇನೆ ಎಂದು ತಿಳಿಸಿದ್ದಾರೆ.
ಏಮ್ಸ್ ನಲ್ಲಿ ನನ್ನ ಮೊದಲ ಡೋಸ್ ಕೋವಿಡ್-19 ಲಸಿಕೆ ತೆಗೆದುಕೊಂಡೆ. ಕೋವಿಡ್-19 ವಿರುದ್ಧದ ಹೋರಾಟವನ್ನು ಬಲಪಡಿಸಲು ನಮ್ಮ ವೈದ್ಯರು ಮತ್ತು ವಿಜ್ಞಾನಿಗಳು ತ್ವರಿತ ಸಮಯದಲ್ಲಿ ಹೇಗೆ ಕೆಲಸ ಮಾಡಿದ್ದಾರೆ ಎಂಬುದು ಗಮನಾರ್ಹವಾಗಿದೆ. ಲಸಿಕೆ ತೆಗೆದುಕೊಳ್ಳುವಂತೆ ನಾನು ಎಲ್ಲರಿಗೂ ಮನವಿ ಮಾಡುತ್ತೇನೆ ಎಂದು ಪ್ರಧಾನಿ ಟ್ವೀಟ್ ನಲ್ಲಿ ಬರೆದುಕೊಂಡಿದ್ದಾರೆ.
ತಾವು ಕೊರೊನಾ ವೈರಸ್ ಲಸಿಕೆ ತೆಗೆದುಕೊಂಡ ನಂತರ ಭಾರತವನ್ನು ಕೋವಿಡ್ ಮುಕ್ತ ದೇಶವನ್ನಾಗಿ ಮಾಡಲು ಎಲ್ಲರೂ ಲಸಿಕೆ ಪಡೆದುಕೊಳ್ಳುವಂತೆ ಮೋದಿ ಮನವಿ ಮಾಡಿದರು. ಎಲ್ಲರೂ ಒಟ್ಟಾಗಿ ನಾವು ಭಾರತವನ್ನು ಕೊರೊನಾದಿಂದ ಮುಕ್ತಗೊಳಿಸೋಣ ಎಂದು ಕರೆ ನೀಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…