ಹಾಸನ: ಕೊರೊನ ವೈರಸ್ಗೆ ಗೋಮೂತ್ರವೇ ಔಷಧವಾಗಿದ್ದು, ಈ ವೈರಸ್ ಬಗ್ಗೆ ಆರು ಸಾವಿರ ವರ್ಷಗಳ ಹಿಂದೆಯೇ ನಮ್ಮ ತಾಳೆಗರಿ ಶಾಸ್ತ್ರದಲ್ಲಿ ಉಲ್ಲೇಖವಿದೆ ಎಂದು ವಿನಯ್ ಗುರೂಜಿ ಹೇಳಿದ್ದಾರೆ.
ಹಾಸನದ ಮಲ್ಲಪ್ಪನಹಳ್ಳಿಯ ಮಲ್ಲಿಕಾರ್ಜುನ ದೇವಾಲಯದ ಶಂಕುಸ್ಥಾಪನೆ ವೇಳೆ ಮಾತನಾಡಿದ ಅವಧೂತ ವಿನಯ್ ಗುರೂಜಿ, ಈ ವಿಷದ ಗಾಳಿಯಿಂದಾಗಿ ಈಶಾನ್ಯ ಭಾರತದಲ್ಲಿ ಮೃತ್ಯು ಸಂಭವಿಸುತ್ತದೆ ಎಂದು ಆ ಗ್ರಂಥದಲ್ಲಿ ಬರೆಯಲಾಗಿತ್ತು. ಬ್ರಹ್ಮೇಂದ್ರ ಅವರು ಬರೆದ ಈ ಗ್ರಂಥದಲ್ಲಿ ರಸ್ತೆ ರಸ್ತೆಯಲ್ಲಿ ಜನ ಸಾಯುತ್ತಾರೆ ಎಂದು ಬರೆಯಲಾಗಿದ್ದು, ಈಗ ಅದೇ ಆಗುತ್ತಿದೆ. ದೇವರು ಇದ್ದಾನೆ ಎಂಬ ನಂಬಿಕೆಯಿಂದ ಭಾರತೀಯ ಜನರು ಬದುಕುತ್ತಿದ್ದಾರೆ ಎಂದರು.
ಕೊರೊನಾ ವೈರಸ್ಗೆ ಔಷಧಿ ಇಲ್ಲ ಎಂದು ಹೇಳುವುದು ಮೂರ್ಖತನ ಎಂದುಕೊಳ್ಳುತ್ತೇನೆ. ಏಕೆಂದರೆ ಗೋಮೂತ್ರದಲ್ಲಿ ಎಲ್ಲದಕ್ಕೂ ಔಷಧಿ ಇದೆ. ಪರಿಸರದಿಂದ ಸಮಸ್ಯೆಗೆ ಪರಿಸರದಿಂದಲೇ ಉತ್ತರ ಸಿಗುತ್ತದೆ. ಸ್ವಲ್ಪ ಹುಡುಕಬೇಕು ಅಷ್ಟೇ. ಎಲ್ಲದಕ್ಕೂ ಎಂಬಿಬಿಎಸ್ ಕೊನೆಯಲ್ಲ. ನಾನು ಎರಡು ವರ್ಷಗಳ ಹಿಂದೆ ಆ ತಾಳೆಗರಿ ಓದಿದಾಗ ವಿಷದ ಗಾಳಿ ಬೀಸುತ್ತೆ ಎಂದು ಉಲ್ಲೇಖವಿದೆ. ಕೊರೊನಾ ವೈರಸ್ ಕೂಡ ಗಾಳಿಯಿಂದ ಹರಡುತ್ತಿದೆ. ಅದು 6 ಸಾವಿರ ವರ್ಷಗಳ ಹಿಂದಿನ ಗ್ರಂಥ ಎಂದು ವಿನಯ್ ಗುರೂಜಿ ತಿಳಿಸಿದರು.
ಇದೇ ವೇಳೆ ಮಾತನಾಡಿದ ಅವರು, ಈ ಹಿಂದೆ ಎಚ್1ಎನ್1 ಬಂದಾಗ ಅಮೃತಬಳ್ಳಿ ಕೆಲಸ ಮಾಡಿರಲಿಲ್ವಾ? ಹಿಮಾಲಯದಲ್ಲಿ ಋಷಿಗಳಿಗೆ ಆಧ್ಯಾತ್ಮಕ ಶಕ್ತಿ ರಕ್ಷಿಸುತ್ತಿದೆ. ಹಾಗಾಗಿ ಅವರಿಗೆ ಯಾವ ಭಯವಿರುವುದಿಲ್ಲ. ನಮಗೆ ಕಾಣಿಸುತ್ತಿರುವುದು ಅಷ್ಟೇ ಸತ್ಯ ಎಂಬುದು ಭ್ರಾಂತ. ನಮಗೆ ಕಾಣಿಸದಿರುವುದು ಹಲವು ವಿಷಯಗಳಿವೆ. ಸದ್ಯ ಈ ಜಾಗವು ಮುಂದಿನ ದಿನಗಳಲ್ಲಿ ಕೇದಾರನಾಥವಾಗಲಿದೆ. ಈ ಸ್ಥಳಕ್ಕೆ ಮುಂದಿನ ಎರಡು ವರ್ಷಗಳ ಪ್ರಧಾನಿ ಮೋದಿ ಭೇಟಿ ನೀಡಲಿದ್ದಾರೆ ಎಂದು ವಿನಯ್ ಗುರೂಜಿ ಭವಿಷ್ಯ ನುಡಿದರು.
ಇಲ್ಲಿಯವರೆಗೂ ಏಷ್ಟೋ ದೈವ ದೇವರು ಜ್ಯೋತಿಷ್ಯರಲ್ಲಿ ಕೇಳಿ ಸರಿಯಾದ ಪರಿಹಾರ ಸಿಗದೆ ನೊಂದಿದ್ದರೆ.ಅಂತಃಹ ಯಾವುದೇ ಕಠಿಣ ಸಮಸ್ಯೆ ಗಳಿದ್ದರು ಉತ್ತಮ ಸಲಹೆ ಹಾಗೂ ಶಾಶ್ವತ ಪರಿಹಾರ ತಿಳಿಸುತ್ತಾರೆ.
ಇಂದೇ ಸಂಪರ್ಕಿಸಿ ಪಂಡಿತ್ ವೈದಿಕ ಶ್ರೀ ಗಣಪತಿ ಭಟ್
8088827292
ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…
ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…
ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…
ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…
ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…
ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…