ಮುಂಬೈ : ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ತಮ್ಮ ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ರಾತ್ರಿ ಕರ್ಫ್ಯೂವನ್ನು ಹೇರೋದಿಲ್ಲ ಅ ಎಂದು ಹೇಳಿದ್ದಾರೆ.
ಭಾನುವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯವನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಠಾಕ್ರೆ, ಮಾರ್ಗಸೂಚಿಯನ್ನು ಪಾಲಿಸುವಂತೆ ಜನರಲ್ಲಿ ಮನವಿ ಮಾಡಿಕೊಂಡರು. ಇದೇ ವೇಳೆ ಅವರು ಮಾತನಾಡುತ್ತ, ಮುಂದಿನ ಆರು ತಿಂಗಳಕಾಲ ಮಾಸ್ಕ್ ಧರಿಸುವುದು ಕಡ್ಡಾಯವಾಗಿದ್ದು, ಕರೋನವೈರಸ್ ಹರಡುವಿಕೆಗೆ ಕಡಿವಾಣ ಹಾಕಲು ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.
ಖಾಯಿಲೆ ಬರುವುದಕ್ಕಿಂತ ಮುನ್ನ ಅದನ್ನೂ ಬಾರದೇ ಇರುವಂತೆ ನೋಡಿಕೊಳ್ಳವುದು ನಮ್ಮ ಅದ್ಯತೆಯಾಗಿದ್ದು, ಈ ನಿಟ್ಟಿನಲ್ಲಿ ನಾವು ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸುವುದನ್ನು ಕನಿಷ್ಠ ಆರು ತಿಂಗಳಕಾಲ ಅಭ್ಯಾಸ ಮಾಡಿಕೊಳ್ಳಬೇಕಾಗಿದೆ ಅಂತ ಅಂತ ಅವರು ಹೇಳಿದರು. ಇನ್ನೂ ಇದೇ ವೇಳೆ ಅವರು ರಾಜ್ಯದಲ್ಲಿ ಕೊರೊನಾವೈರಸ್ ಪ್ರಕರಣಗಳು, ಮೆಟ್ರೋ ಕಾರ್ ಶೆಡ್ ಯೋಜನೆ ಸೇರಿದಂತೆ ಹಲವು ಸಮಸ್ಯೆಗಳ ಬಗ್ಗೆ ಠಾಕ್ರೆ ಮಾತನಾಡಿದರು. ರಾತ್ರಿ ಕರ್ಫ್ಯೂ ಅಥವಾ ಲಾಕ್ ಡೌನ್ ಅನ್ನು ಹೇರುವುದಕ್ಕೆ ತಜ್ಞರು ಒಲವು ತೋರುತ್ತಿದ್ದಾರೆ ಎಂದು ಸಿಎಂ ಠಾಕ್ರೆ ಹೇಳಿದ್ದು, ಆದರೆ ರಾಜ್ಯದಲ್ಲಿ ಕೋವಿಡ್-19 ಪರಿಸ್ಥಿತಿ ಸಂಪೂರ್ಣವಾಗಿ ನಿಯಂತ್ರಣದಲ್ಲಿರುವುದರಿಂದ ಈ ಕ್ರಮಗಳನ್ನು ಅವರು ಬೆಂಬಲಿಸುವುದಿಲ್ಲ ಎಂದು ಠಾಕ್ರೆ ಹೇಳಿದ್ದಾರೆ.ಮಹಾರಾಷ್ಟ್ರದಲ್ಲಿ ಶನಿವಾರ 3,940 ಹೊಸ ಕೋವಿಡ್ ಪ್ರಕರಣಗಳು ದಾಖಲಾಗಿದ್ದು, ಒಟ್ಟು 18,92,707 ಮಂದಿ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಈ ಸಾಂಕ್ರಾಮಿಕ ರೋಗ ದಿಂದಾಗಿ 74 ಮಂದಿ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 48,648ಕ್ಕೆ ಏರಿಕೆ ಕಂಡಿದೆ
ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…