Featured

ಕೊರೊನಾ ಸಂಕಷ್ಟ ಹಾಗೂ  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ನಡುವೆ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ – Vishwanews24

ಕೊರೊನಾ ಸಂಕಷ್ಟ ಹಾಗೂ  ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ನಡುವೆ ಜನತೆಗೆ ವಿದ್ಯುತ್ ದರ ಏರಿಕೆಯ ಬಿಸಿ – Vishwanews24

ಬೆಂಗಳೂರು: ಕೊರೊನಾ ಲಾಕ್ ಡೌನ್ , ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆಯಿಂದ ಹೈರಾಣಾಗಿರುವ ಜನತೆಗೆ ಇದೀಗ ರಾಜ್ಯ ಸರ್ಕಾರ ವಿದ್ಯುತ್ ದರ ಏರಿಕೆ ಮಾಡಿ ಶಾಕ್ ನೀಡಿದೆ.

ಪ್ರತಿ ಯೂನಿಟ್’ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್’ಗೆ 10 ಪೈಸೆ ಹೆಚ್ಚಳವಾಗಲಿದೆ. ಪರಿಷ್ಕೃತ ದರವು ಏ.1ರಿಂದಲೇ ಪೂರ್ವಾನ್ವಯವಾಗಲಿದ್ದು, ಕೊರೊನಾ ಸಂಕಷ್ಟದ ಹಿನ್ನೆಲೆಯಲ್ಲಿ ಏಪ್ರಿಲ್ ಮೇ. ತಿಂಗಳ ದರ ಪರಿಷ್ಕರಣೆ ಬಾಕಿಯನ್ನು ಯಾವುದೇ ಬಡ್ಡಿ ವಿಧಿಸದೆ ಅಕ್ಟೋಬರ್ ಮತ್ತು ನವೆಂಬರ್ ತಿಂಗಳಿನಲ್ಲಿ ವಸೂಲಿ ಮಾಡಲು ಎಸ್ಕಾಂಗಳಿಗೆ ಆದೇಶ ನೀಡಿದೆ.

ರಾಜ್ಯದ ವಿವಿಧ ವಿದ್ಯುತ್ ವಿತರಣಾ ಕಂಪನಿಗಳು 1.35 ರೂ. ಬೆಲೆ ಏರಿಕೆ ಮಾಡುವಂತೆ ಸರ್ಕಾರಕ್ಕೆ ಈ ಹಿಂದೆಯೇ ಪ್ರಸ್ತಾವ ಸಲ್ಲಿಸಿದ್ದವು. ಈ ಪ್ರಸ್ತಾವಗಳನ್ನು ಕೂಲಂಕಶವಾಗಿ ಪರಿಶೀಲಿಸಿರುವ ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗವು ಸರಾಸರಿ 30 ಪೈಸೆ ದರ ಹೆಚ್ಚಳಕ್ಕೆ ಅನುಮೋದನೆ ನೀಡಿದೆ.

ಇದರಂತೆ ಪ್ರತಿ ಯೂನಿಟ್’ಗೆ ಸರಾಸರಿ 30 ಪೈಸೆಯಂತೆ ವಿದ್ಯುತ್ ದರವನ್ನು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೆಚ್ಚಳ ಮಾಡಿದೆ. ಇದರ ಪರಿಣಾಮ ಗೃಹ ಬಳಕೆ ಗ್ರಾಹಕರಿಗೆ ಪ್ರತಿ ಯೂನಿಟ್’ಗೆ 10 ಪೈಸೆ ಹೆಚ್ಚಳವಾಗಲಿದೆ.

ಉಪಚುನಾವಣೆ, ಪಂಚಾಯತ್‌ ಚುನಾವಣೆ ಹಾಗು ಕರೋನಾ ಕಾರಣಕ್ಕೆ ದರ ಪರಿಷ್ಕರಣೆ ವಿಳಂಬವಾಗಿದೆ ಎಂದು ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಹೇಳಿದೆ.

Vishwa News 24

Recent Posts

ಉಡುಪಿ : ಬಾಲಕಿ ನಾಪತ್ತೆ -vishwanews24

ಉಡುಪಿ : ಬಾಲಕಿ ನಾಪತ್ತೆ ಉಡುಪಿ : ಉಡುಪಿ ಮಹಿಳಾ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ಪ್ರೀತಿ (16) ಎಂಬ…

6 hours ago

ಮಂಗಳೂರು ವಿಮಾನ ನಿಲ್ದಾಣದಲ್ಲಿ ‘ಉಬರ್’ ಸೇವೆ ಆರಂಭ -vishwanews24

ಮಂಗಳೂರು ವಿಮಾನ ನಿಲ್ದಾಣದಲ್ಲಿ 'ಉಬರ್' ಸೇವೆ ಆರಂಭ ಪ್ರಯಾಣಿಕರಿಗೆ ವೇಗವಾದ ಮತ್ತು ಸುಲಭ ಸಾರಿಗೆ ಸೌಲಭ್ಯ ಮಂಗಳೂರು: ಮಂಗಳೂರು ಅಂತರರಾಷ್ಟ್ರೀಯ…

10 hours ago

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ -vishwanews24

ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಅತ್ಯಂತ ಖಂಡನೀಯ ಕೃತ್ಯ : ರೆನೋಲ್ಡ್ ಪ್ರವೀಣ್ ಕುಮಾರ್ ಉಡುಪಿ: ಜಿಲ್ಲಾ ನ್ಯಾಯಾಲಯಕ್ಕೆ…

12 hours ago

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ -vishwanews24

ಉಡುಪಿ : ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ ಸಂದೇಶ ;   ಪೊಲೀಸರು, ಶ್ವಾನ ದಳದಿಂದ ಶೋಧ ಕಾರ್ಯಾಚರಣೆ ಉಡುಪಿ: ಉಡುಪಿ…

13 hours ago

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ -vishwanews24

ಇಂದಿನಿಂದ ಟೆಲಿಗ್ರಾಮ್ ಮೇಲಿನ ನಿಷೇಧ ತೆರವು: ಮೆಸೇಜ್ ಎಡಿಟಿಂಗ್ ನಿರ್ಬಂಧ ಜೂ. 30ರವರೆಗೆ ಮುಂದುವರಿಕೆ ನವದೆಹಲಿ : ನೀಟ್ -ಯುಜಿ…

14 hours ago

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ -vishwanews24

246 ಕೋಟಿ ರೂ.ಗಳ 46 ಯೋಜನೆಗಳು ರದ್ದು; ದೇವಸ್ಥಾನಗಳ ಹಣ ಬೇರೆ ಕೆಲಸಕ್ಕೆ ಬಳಸುವಂತಿಲ್ಲ: ಸಿಎಂ ವಿಜಯ್ ಚೆನ್ನೈ: ತಮಿಳುನಾಡಿನಾದ್ಯಂತ…

14 hours ago