Featured

ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ : ಕೇರಳಿಗರಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ -Vishwanews24

ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ : ಕೇರಳಿಗರಿಗೆ ದಕ್ಷಿಣಕನ್ನಡ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ -Vishwanews24

ಮಂಗಳೂರು : ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ ಹೆಚ್ಚಾಗಿರುವ ಹಿನ್ನಲೆ ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವವರು ಹಾಗೂ ತೆರಳುವವರಿಗೆ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಈ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಂದಿನ ಎರಡು ತಿಂಗಳ ಕಾಲ ಸಂಚಾರ ನಿರ್ಬಂಧಿಸಲು ಸಲಹೆ ನೀಡಿದ್ದಾರೆ. ಈಗಾಗಲೇ ರಾಜ್ಯ ಸರಕಾರ ಈ ಕುರಿತಂತೆ ಆದೇಶ ಹೊರಡಿಸಿದೆ.

ದ.ಕ.ಜಿಲ್ಲೆಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಶಿಕ್ಷಣಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಜಿಲ್ಲೆಯಿಂದ ಕೇರಳಕ್ಕೆ ತೆರಳುವ ಉದ್ದೇಶ ಇರುವವರೂ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

ಆಸ್ಪತ್ರೆಗಳು, ನರ್ಸಿಂಗ್ ಹೋಮ್​ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇತ್ಯಾದಿಯಲ್ಲಿ ಕೆಲಸಕ್ಕಿರುವವರು ಕೂಡಾ ಎರಡು ತಿಂಗಳ ‌ಕಾಲ ಅವರು ಕೇರಳದಿಂದ ಜಿಲ್ಲೆಗೆ ಬರುವಂತಿಲ್ಲ. ಅವರ ಉದ್ಯೋಗದಾತರು ಕೂಡಾ ಕೇರಳ ಮೂಲದ ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶಿಸಲು ಅನುವು ಮಾಡಿಕೊಡಬಾರದು. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಿಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಸಲಹೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Vishwa News 24

Recent Posts

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ – vishwanews24

ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…

1 day ago

ಉಡುಪಿ ನಗರಸಭೆ ಬಾಕಿ ಕಾಮಗಾರಿ ಶೀಘ್ರ ಆರಂಭಕ್ಕೆ ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ – vishwanews24

ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…

2 days ago

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ – vishwanews24

ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…

2 days ago

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ – vishwanews24

ಮಂಡ್ಯ : ಅನಾರೋಗ್ಯದಿಂದ ಎಎಸ್‌ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…

2 days ago

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ – vishwanews24

ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…

2 days ago

ನೋಯ್ಡಾ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ‘ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ’ ಎಂದು ಮರುನಾಮಕರಣ: ಯೋಗಿ ಆದಿತ್ಯನಾಥ್ ಘೋಷಣೆ – vishwanews24

ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್‌ನಲ್ಲಿರುವ ನೋಯ್ಡಾ…

2 days ago