ಮಂಗಳೂರು : ಕೇರಳದಲ್ಲಿ ಕೊರೊನಾ ಹಾಗೂ ನಿಫಾ ವೈರಸ್ ಹಾವಳಿ ಹೆಚ್ಚಾಗಿರುವ ಹಿನ್ನಲೆ ಕೇರಳದಿಂದ ದಕ್ಷಿಣಕನ್ನಡ ಜಿಲ್ಲೆಗೆ ಆಗಮಿಸುವವರು ಹಾಗೂ ತೆರಳುವವರಿಗೆ ಎರಡು ತಿಂಗಳ ಕಾಲ ನಿರ್ಬಂಧ ವಿಧಿಸಲು ದಕ್ಷಿಣಕನ್ನಡ ಜಿಲ್ಲಾಡಳಿತ ಮುಂದಾಗಿದ್ದು, ಈ ಬಗ್ಗೆ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಮುಂದಿನ ಎರಡು ತಿಂಗಳ ಕಾಲ ಸಂಚಾರ ನಿರ್ಬಂಧಿಸಲು ಸಲಹೆ ನೀಡಿದ್ದಾರೆ. ಈಗಾಗಲೇ ರಾಜ್ಯ ಸರಕಾರ ಈ ಕುರಿತಂತೆ ಆದೇಶ ಹೊರಡಿಸಿದೆ.
ದ.ಕ.ಜಿಲ್ಲೆಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಶಿಕ್ಷಣಕ್ಕಾಗಿ ಕೇರಳದಿಂದ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದವರೆಗೆ ಮಂಗಳೂರಿಗೆ ಬರುವಂತಿಲ್ಲ. ಈ ಬಗ್ಗೆ ಈಗಾಗಲೇ ಕೇರಳದಲ್ಲಿದ್ದವರಿಗೆ ಆಯಾ ಶಿಕ್ಷಣ ಸಂಸ್ಥೆಗಳು ಸೂಚನೆ ನೀಡಬೇಕೆಂದು ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಜಿಲ್ಲೆಯಿಂದ ಕೇರಳಕ್ಕೆ ತೆರಳುವ ಉದ್ದೇಶ ಇರುವವರೂ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಆಸ್ಪತ್ರೆಗಳು, ನರ್ಸಿಂಗ್ ಹೋಮ್ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಇತ್ಯಾದಿಯಲ್ಲಿ ಕೆಲಸಕ್ಕಿರುವವರು ಕೂಡಾ ಎರಡು ತಿಂಗಳ ಕಾಲ ಅವರು ಕೇರಳದಿಂದ ಜಿಲ್ಲೆಗೆ ಬರುವಂತಿಲ್ಲ. ಅವರ ಉದ್ಯೋಗದಾತರು ಕೂಡಾ ಕೇರಳ ಮೂಲದ ಸಿಬ್ಬಂದಿಯನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶಿಸಲು ಅನುವು ಮಾಡಿಕೊಡಬಾರದು. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಿಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಸಲಹೆಯಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್‌ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್‌ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…