ಕೊರೊನಾ ಹೆಚ್ಚಾದ್ರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ : ಆರಗ ಜ್ಞಾನೇಂದ್ರ – Vishwanews24
ಕೊರೊನಾ ಹೆಚ್ಚಾದ್ರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ : ಆರಗ ಜ್ಞಾನೇಂದ್ರ – Vishwanews24
ಚಿಕ್ಕಮಗಳೂರು: ಕೊರೊನಾ ವೈರಸ್ ಸಂಬಂಧ ಜನ ಸಹಕರಿಸದಿದ್ದರೆ ಲಾಕ್ ಡೌನ್ ಅನಿವಾರ್ಯ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಕೆ ನೀಡಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾ ಹೆಚ್ಚಾದ್ರೆ ಸರ್ಕಾರಕ್ಕೆ ಲಾಕ್ ಡೌನ್ ಅನಿವಾರ್ಯ. ಜನರ ಜೀವ ಉಳಿಸುವುದು ಸರ್ಕಾರದ ಬದ್ಧತೆ. ಜನ ಕೋವಿಡ್ ನಿಯಮಗಳನ್ನು ಪಾಲನೆ ಮಾಡಬೇಕು ಎಂದು ಮನವಿ ಮಾಡಿಕೊಂಡರು.
ಇದೇ ವೇಳೆ ಕಾಂಗ್ರೆಸ್ ಪಕ್ಷದಿಂದ ನಡೆಯುತ್ತಿರುವ ಪಾದಯಾತ್ರೆಗೆ ಬೇಸರ ವ್ಯಕ್ತಪಡಿಸಿದ ಅವರು, ಪಾದಯಾತ್ರೆಗೆ ಅನುಮತಿ ಕೊಡುವುದು ಬಿಡುವುದು ಬೇರೆ. ಕೋವಿಡ್ ಸಮಯದಲ್ಲಿ ರಾಜಕಾರಣದ ನಡೆಯನ್ನ ಮುಂದೂಡುವುದು ಒಳ್ಳೆಯದು. ವಿರೋಧ ಪಕ್ಷವಾಗಿ ಹೋರಾಟ ಮಾಡಲು ಅವರಿಗೆ ಅವಕಾಶವಿದೆ. ಅಧಿಕಾರದಲ್ಲಿದ್ದಾಗ ಕಾಂಗ್ರೆಸ್ಸಿಗರು ಏನು ಮಾಡಲಿಲ್ಲ. ಆದರೆ ಕೋವಿಡ್ ನಿಯಮಗಳನ್ನ ಪಾಲಿಸಬೇಕೆಂದು ಕೋರುತ್ತೇನೆ ಎಂದರು.
ಇಂದಿನಿಂದ ರಾಜ್ಯಾದ್ಯಂತ 15ರಿಂದ 18 ವರ್ಷದೊಳಗಿನ ಎಲ್ಲ ಮಕ್ಕಳಿಗೆ ಲಸಿಕೆ ಅಭಿಯಾನ – Vishwanews24
