ಚೆನ್ನೈ: ಕೊರೊನಾ ವೈರಸ್ ತಡೆಗಟ್ಟಲು ಈ ಬಾರಿ ಹೊಸ ವರ್ಷ ಸಂಭ್ರಮಾಚರಣೆಗೆ ಬ್ರೇಕ್ ಹಾಕಲು ತಮಿಳುನಾಡು ಸರ್ಕಾರ ಬೀಚ್‍ಗಳಲ್ಲಿ ಸಾರ್ವಜನಿಕರಿಗೆ ಡಿಸೆಂಬರ್ 31ರಂದು ಮತ್ತು ಜನವರಿ 1ರಂದು ನಿರ್ಬಂಧ ಹೇರಿದೆ.
ಈ ಬಗ್ಗೆ ಮುಖ್ಯಮಂತ್ರಿ ಸ್ಟಾಲಿನ್ ಅವರು, ಪ್ರಸ್ತುತ ಪರಿಸ್ಥಿತಿ ಅನುಗುಣವಾಗಿ 6ರಿಂದ 12ನೇ ತರಗತಿಯವರೆಗೂ ಶಾಲೆಗಳನ್ನು ತೆರೆಯಲಾಗುತ್ತಿಲ್ಲ. ಆದರೆ ಮುಂದಿನ ತಿಂಗಳಿನಿಂದ ಪ್ರಾರಂಭಿಸಲಾಗುತ್ತದೆ ಎಂದು ಹೇಳಿದ್ದಾರೆ.
ನೆರೆಯ ರಾಜ್ಯಗಳಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಸೋಮವಾರ ಸಭೆ ನಡೆಸಿದ ಸ್ಟಾಲಿನ್ ಅವರು, ಈ ವೇಳೆ ಡಿಸೆಂಬರ್ 31 ರವರೆಗಿನ ಕೋವಿಡ್-ಸಂಬಂಧಿತ ನಿರ್ಬಂಧಗಳನ್ನು ವಿಸ್ತರಿಸುವುದಾಗಿ ಘೋಷಿಸಿದರು. ಸಾಮಾಜಿಕ, ಸಾಂಸ್ಕೃತಿಕ ಮತ್ತು ರಾಜಕೀಯ ಸಭೆಗಳಲ್ಲಿ ಈ ಹಿಂದೆ ಇದ್ದ ಮಾರ್ಗಸೂಚಿಗಳನ್ನು ಮುಂದುವರಿಸುವಂತೆ ಸೂಚಿಸಿದ್ದಾರೆ.
ಕೊರೊನಾ ವೈರಸ್ ತಡೆಗಟ್ಟುವ ಸಲುವಾಗಿ ಡಿಸೆಂಬರ್ 31ರಿಂದ ಜನವರಿ 1ರವರೆಗೂ ಮರೀನಾ ಬೀಚ್ ಸೇರಿದಂತೆ ರಾಜ್ಯದ ಹಲವು ಬೀಚ್‍ಗಳಿಗೆ ಸಾರ್ವನಿಕರ ಪ್ರವೇಶವನ್ನು ನಿರ್ಬಂಧ ಹೇರಿರುವುದಾಗಿ ಅಧಿಕೃತವಾಗಿ ಪ್ರಕಟಿಸಿದ್ದಾರೆ.
ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಅಧಿಕಾರಿಗಳ ಸಮಿತಿ ರಚನೆ: ಸಚಿವ ಯು.ಟಿ. ಖಾದರ್ ಮಂಗಳೂರು: ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ…
ಮಂಗಳೂರು: ದಸರಾ ರಜೆ ವೇಳೆ ಸೆಮಿಸ್ಟರ್ ಪರೀಕ್ಷೆ: ಖಾಸಗಿ ಕಾಲೇಜು ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ ಮಂಗಳೂರು: ದಸರಾ ಸಂಭ್ರಮದ ನಡುವೆಯೇ…
ಮಂಗಳೂರು : ದಸರಾ ಉದ್ಘಾಟನೆಗೆ ಸಿಎಂ ಗೈರು ; ಕರಾವಳಿ ತೀವ್ರ ಜನರಲ್ಲಿ ಅಸಮಾಧಾನ : ಅಕ್ಷಿತ್ ಸುವರ್ಣ ಮಂಗಳೂರು:…
ಮಂಗಳೂರು: ಅಕ್ರಮ ಸಂಬಂಧದ ಶಂಕೆ ; ಪತ್ನಿಯನ್ನು ಚೂರಿಯಿಂದ ಇರಿದು ಕೊಂದ ಪತಿ ಮಂಗಳೂರು: ಅಕ್ರಮ ಸಂಬಂಧದ ಶಂಕೆಯ ಹಿನ್ನೆಲೆ…
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…