ಬೆಂಗಳೂರು, : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರ ಹೊರವಲಯದ ಮಾದನಾಯಕನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿರುವುದು ವರದಿಯಾಗಿದೆ.
ತೋಟದ ಗುಡ್ಡದಹಳ್ಳಿ ಹತ್ತಿರದ ಪ್ರಕೃತಿ ಲೇಔಟ್ ನಿವಾಸಿ ವಸಂತಾ(40), ಮಕ್ಕಳಾದ ಯಶವಂತ್ (15) ಹಾಗೂ ನಿಶ್ಚಿತಾ (8) ಮೃತಪಟ್ಟವರಾಗಿದ್ದಾರೆ. ಮೃತರ ಮನೆಗೆ ಸಂಬಂಧಿಕರು ರಾತ್ರಿ ಬಂದಾಗ ಘಟನೆ ಬೆಳಕಿಗೆ ಬಂದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಬಿಎಂಟಿಸಿ ಚಾಲಕ ಕಂ ನಿರ್ವಾಹಕರಾಗಿದ್ದ ವಸಂತ ಅವರ ಪತಿ ಕಳೆದ ವರ್ಷ ಕೋವಿಡ್ ಸೋಂಕಿನಿಂದ ಮೃತಪಟ್ಟಿದ್ದರು. ಇದರಿಂದ ವಸಂತಾ ಖಿನ್ನತೆಗೊಳಗಾಗಿದ್ದರು. ಇದೇ ಯಾತನೆಯಲ್ಲೇ ಅವರು ಮಕ್ಕಳೊಂದಿಗೆ ಆತ್ಮಹತ್ಯೆ ಮಾಡಿಕೊಂಡಿಬರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ.
ಒಂದೇ ಫ್ಯಾನ್’ಗೆ ಮಗಳು ನಿಶ್ಚಿತಾ ಜೊತೆ ವಸಂತಾ ನೇಣು ಹಾಕಿಕೊಂಡಿದ್ದರೆ, ಯಶವಂತ್ ಪ್ರತ್ಯೇಕವಾಗಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.
ಈ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅ.11 ರಿಂದ ಕನ್ನಡದಲ್ಲಿ ಪ್ರಸರಾವಾಗಲಿದೆ ತಿರುಪತಿ ಚಾನೆಲ್ – Vishwanews24
ಅಡುಗೆ ಎಣ್ಣೆ ಮೇಲಿನ ಆಮದು ಸುಂಕ ಕಡಿತ: ಕೇಂದ್ರ ಸರ್ಕಾರ ಆದೇಶ ಬೆಂಗಳೂರು: ಅಡುಗೆ ಎಣ್ಣೆ ಮೇಲಿನ ಆಮದು ಸುಂಕ…
ರೇಣುಕಾಸ್ವಾಮಿ ಹತ್ಯೆ ಪ್ರಕರಣ : ಸೆ.28 ರಂದು ಪ್ರದೋಷ್ ಮಾಫಿ ಸಾಕ್ಷಿ ದಾಖಲಿಸಲು ಕೋರ್ಟ್ ಆದೇಶ ಬೆಂಗಳೂರು: ರೇಣುಕಾಸ್ವಾಮಿ ಹತ್ಯೆ…
ಬರ ಪರಿಸ್ಥಿತಿ : ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ : ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು : “ಕರ್ನಾಟಕದಲ್ಲಿ 200ಕ್ಕೂ…
ವಾಕ್ ವಿತ್ ಕಮಿಷನರ್: ಮಂಗಳೂರಿನ ಹಂಪನಕಟ್ಟೆಯಲ್ಲಿ ಹೋಟೆಲ್ ಪರಿಶೀಲನೆ.. ಟ್ರೇಡ್ ಲೈಸೆನ್ಸ್ ಹಾಗೂ ಸ್ವಚ್ಛತೆ ಬಗ್ಗೆ ಅಧಿಕಾರಿಗಳಿಗೆ ಸೂಚನೆ ಫುಟ್‌ಪಾತ್ ಒತ್ತುವರಿ…
ಮಂಗಳೂರು : ಎಂಡಿಎಂಎ ಮಾರಾಟಕ್ಕೆ ಯತ್ನ ; 23.20 ಗ್ರಾಂ ಮಾದಕ ವಸ್ತು ವಶ, ಆರೋಪಿ ಬಂಧನ ಮಂಗಳೂರು: ಮಂಗಳೂರು…
ಉಡುಪಿ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದ ಟೀಂ ಇಂಡಿಯಾ ಮಾಜಿ ಕೋಚ್ ರವಿಶಾಸ್ತ್ರಿ ಉಡುಪಿ: ಟೀಂ ಇಂಡಿಯಾದ…