ಕೊರೋನಾ ಎಫೆಕ್ಟ್ : ಕೇರಳ ನಡುವೆ ಸಂಚರಿಸುವ ಎಲ್ಲಾ ವಾಹನ ಸಂಚಾರ ಬಂದ್..Vishwanews24

Featured, ದಕ್ಷಿಣ ಕನ್ನಡ

ಮಂಗಳೂರು : ಕಾಸರಗೋಡು ಜಿಲ್ಲೆಯಲ್ಲಿ ಕರೋನಾ ಸೊಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದಂತೆ ದಕ್ಷಿಣಕನ್ನಡ ಜಿಲ್ಲಾಡಳಿತ ಮುಂಜಾಗೃತ ಕ್ರಮಕೈಗೊಳ್ಳಲು ಮುಂದಾಗಿದ್ದು ಇಂದಿನಿಂದ ಮಧ್ಯಾಹ್ನ 2 ರಿಂದ ಮಾರ್ಚ್ 31 ರ ಮಧ್ಯರಾತ್ರಿ 12 ರ ವರೆಗೆ ದಕ್ಷಿಣಕನ್ನಡ ಕೇರಳ ನಡುವೆ ಸಂಚರಿಸುವ ಎಲ್ಲಾ ವಾಹನಗಳ ಸಂಚಾರವನ್ನು ನಿಷೇಧಿಸಿದೆ.

ಈಗಾಗಲೇ ಗಡಿ ಜಿಲ್ಲೆ ಕಾಸರಗೋಡಿನಲ್ಲಿ ಕರೋನಾ ಸೊಂಕಿತರ ಸಂಖ್ಯೆ ಏರಿಕೆಯಾಗುತ್ತಿದ್ದು, ಇಂದು ಮತ್ತೆ 6 ಕರೋನಾ ಶಂಕಿತ ಪ್ರಕರಣಗಳ ವೈದ್ಯಕೀಯ ತಪಾಸಣೆಯಿಂದ ದೃಡಪಟ್ಟಿದೆ.

ಈ ಹಿನ್ನಲೆ ಕಾಸರಗೋಡು ಮತ್ತು ಮಂಗಳೂರು ನಡುವೆ ಹೆಚ್ಚಿನ ಸಂಖ್ಯೆಯಲ್ಲಿ ಪ್ರಯಾಣಿಕರು ಹೆಚ್ಚಿನ ಸಂಖ್ಯೆಯಲ್ಲಿ ಕೆಲಸ ನಿಮ್ಮಿತ್ತ ಆಗಮಿಸುವ ಹಿನ್ನಲೆಯಲ್ಲಿ ಮುಂಜಾಗೃತ ಕ್ರಮವಾಗಿ ದಕ್ಷಿಣಕನ್ನಡ ಮತ್ತು ಕಾಸರಗೋಡು ನಡುವೆ ಎಲ್ಲಾ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ದಕ್ಷಿಣಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ ರೂಪೇಶ್ ಆದೇಶಿದ್ದಾರೆ.

ಈ ಆದೇಶ ಮಾರ್ಚ್ 21ರ ಮಧ್ಯಾಹ್ನ 2 ಗಂಟೆಯಿಂದ ಮಾರ್ಚ್ 31ರ ಮಧ್ಯರಾತ್ರಿ 12 ರವರೆಗೆ ಜಾರಿಯಲ್ಲಿರುತ್ತದೆ.

ಯಾವುದೇ ರೀತಿಯ ತುರ್ತು ಪ್ರಕರಣಗಳಲ್ಲಿ ತಲಪಾಡಿಯ ಚೆಕ್ ಪೋಸ್ಟ್ ಮೂಲಕ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿದೆ.