ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ : ಡಿ.ಕೆ.ಶಿವಕುಮಾರ್ -Vishwanews24

ಕಲಬುರ್ಗಿ: ಕೊರೋನಾ ನಿಯಂತ್ರಿಸುವ ಜವಾಬ್ದಾರಿ ಹೊತ್ತ ಸರ್ಕಾರವೇ ಹಗಲು ದರೋಡೆಗೆ ನಿಂತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆರೋಪಿಸಿದ್ದಾರೆ. ಕೊರೋನಾ ಭ್ರಷ್ಟಾಚಾರ ಬಯಲಿಗೆಳೆದರೆ ನಮಗೆ ನೋಟೀಸ್ ನೀಡುತ್ತಾರೆ. ಇಂತಹ ನೂರು ನೋಟೀಸ್ ಕೊಟ್ಟರೂ ನಾವು ಹೆದರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೋವಿಡ್ ಬಂದು ಹಣ ಲೂಟಿ ಮಾಡಲು ನಿಮಗೆ ಹಬ್ಬ ಆಗಿದೆ. ಕೋವಿಡ್ ನಲ್ಲಿ ನನಗೇನು ಸಿಗುತ್ತೆ ಅಂತ ಪ್ರತಿಯೊಬ್ಬ ಮಂತ್ರಿ ಚಿಂತೆ ಮಾಡ್ತಿದಾನೆ ಎಂದು ಗಂಭೀರ ಆರೋಪ ಮಾಡಿದರು.

ಇದೇ ವೇಳೆ, ಇಡೀ ಭಾರತದಲ್ಲಿ ರಾಜ್ಯದಲ್ಲಿ ಹೆಚ್ಚು ಆಸ್ಪತ್ರೆ, ಮೇಡಿಕಲ್ ಕಾಲೇಜುಗಳಿವೆ. 10,500ಬೆಡ್ ಗಳ ಕೋವಿಡ್ ಕೇರ್ ಸೆಂಟರ್ ಮಾಡಲು ಸಿದ್ಧತೆ ನಡೆದಿತ್ತು. ನಾಲ್ಕು ಸಾವಿರ ಕೋಟಿ ರೂಪಾಯಿ ಅವ್ಯವಹಾರ ಆಗಿದೆ. ಎಲ್ಲಾ ಇಲಾಖೆಯ ಖರೀದಿಯಲ್ಲಿ ಅವ್ಯವಹಾರ ಆಗಿದೆ. ಆರೋಗ್ಯ, ಆಹಾರ ವಿಚಾರದಲ್ಲಿ ದುಡ್ಡು ಹೊಡೆಯುವುದು ಎಷ್ಟು ಸರಿ. ಭ್ರಷ್ಟಾಚಾರ ಮಾಡೋಕೆ ನಾವು ಸಹಕಾರ ನೀಡಬೇಕಾ ಎಂದು ಡಿಕೆಶಿ ಪ್ರಶ್ನಿಸಿದ್ದಾರೆ.

ಕೊರೋನಾ ಸೋಂಕು ಹಂಚಲು ನೀವೇ ಕಾರಣಕರ್ತರು. ನಿಮ್ಮ ಮೇಲೆಯೇ ಕೇಸ್ ದಾಖಲಾಗಬೇಕು ಎಂದು ಡಿ.ಕೆ.ಶಿವಕುಮಾರ್ ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಕೊರೋನಾದಲ್ಲಿ ಅಕ್ರಮ ಆಗಿದೆ ಅಂದ್ರೆ ನಮಗೆ ನೋಟಿಸ್ ಕೊಡ್ತಿರಾ? ಯಾವ ನೋಟಿಸ್​ಗೂ ಹೆದರಲ್ಲ. ಇಂತಹ ನೂರು ನೋಟಿಸ್ ಕೊಟ್ಟರೂ ಎದುರಿಸೋ ಶಕ್ತಿ ನಮಗೆ ಜನತೆ ಕೊಟ್ಟಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

 

Vishwa News 24

Recent Posts

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ – vishwanews24

ಈ ಬಾರಿ ದಸರಾ ಮಹೋತ್ಸವದಲ್ಲಿ ಅಂಬಾರಿ ಹೊತ್ತು ಸಾಗಲಿರುವ ದುಬಾರೆ ವೀರ ಪ್ರಶಾಂತ​ ಆನೆ ಮೈಸೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು…

13 hours ago

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ – vishwanews24

ಬೆಳ್ತಂಗಡಿ: ನಾವೂರಿನ ಆರೋಗ್ಯ ಕ್ಲಿನಿಕ್‌ಗೆ ಬೆಂಕಿ ಹಚ್ಚಿದ ಪ್ರಕರಣ; ಓರ್ವನ ಬಂಧನ, ಇಬ್ಬರು ವಶಕ್ಕೆ ಬೆಳ್ತಂಗಡಿ: ನಾವೂರು ಗ್ರಾಮದ ಸ್ವಾತಿ…

13 hours ago

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು – vishwanews24

ಮಂಗಳೂರು: ನಿಯಮಬಾಹಿರವಾಗಿ ಶಾಲಾ ಮಕ್ಕಳ ಸಾಗಾಟ ; 30 ವಾಹನಗಳ ಮೇಲೆ ಕೇಸು ದಾಖಲು ಮಂಗಳೂರು: ಮಂಗಳೂರು ಪ್ರಾದೇಶಿಕ ಸಾರಿಗೆ…

13 hours ago

ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ – vishwanews24

ಕಾಪು: ಇಂದು ಉಚ್ಚಿಲ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ಉಡುಪಿ: ಐದನೇ ವರ್ಷದ ಉಚ್ಚಿಲ ದಸರಾ ಲಲಿತ ಪಂಚಮಿಯ ಸಂಭ್ರಮ…

13 hours ago

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ – vishwanews24

ಉಡುಪಿ ಉಚ್ಚಿಲ ದಸರಾ: ಅ.17ರಂದು ಮಹಾಲಕ್ಷ್ಮೀ ಬ್ಯಾಂಕ್ ವತಿಯಿಂದ ಚಿತ್ರಕಲೆ ಸ್ಪರ್ಧೆ : ಯಶ್ಪಾಲ್ ಸುವರ್ಣ ಉಡುಪಿ: ಉಚ್ಚಿಲ ಮಹಾಲಕ್ಷ್ಮೀ…

13 hours ago

ಕೋಳಿಮರಿ ವಿತರಣೆ : ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ – vishwanews24

 ಕೋಳಿಮರಿ ವಿತರಣೆ: ಉಡುಪಿ ತಾಲೂಕಿನ ಗ್ರಾಮೀಣ ರೈತ ಮಹಿಳೆಯರಿಗೆ ಅರ್ಜಿ ಆಹ್ವಾನ  ಉಡುಪಿ: ಕರ್ನಾಟಕ ಸಹಕಾರ ಕುಕ್ಕುಟ ಮಹಾಮಂಡಳ ನಿಯಮಿತ…

14 hours ago