ಪೂನಾ: ದೇಶದಲ್ಲಿ ಸಾರ್ವತ್ರಿಕ ತುರ್ತು ಬಳಕೆಗೆ ಅನುಮೋದನೆ ಪಡೆದಿರುವ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯ ಹಾಗೂ ಸೀರಮ್ ಇನ್ಸ್ಟಿಟ್ಯೂಟ್ ಜಂಟಿಯಾಗಿ ಅಭಿವೃದ್ಧಿಪಡಿಸಿರುವ ಕೋವಿಶೀಲ್ಡ್ ಲಸಿಕೆಯ ವಿತರಣೆ ಪ್ರಕ್ರಿಯೆ ಆರಂಭವಾಗಿದೆ.
ಈಗಾಗಲೇ ಸಂಸ್ಥೆಯ ಕೇಂದ್ರ ಸ್ಥಾನದಿಂದ ದೇಶದ ವಿವಿಧ ಭಾಗಗಳಿಗೆ ಲಸಿಕೆ ಪೂರೈಕೆ ಪ್ರಕ್ರಿಯೆಗೆ ಚಾಲನೆ ನೀಡಲಾಗಿದ್ದು, ಹಲವು ಕಡೆ ಲಸಿಕೆ ಬಂದು ತಲುಪಿದೆ.
ಈ ಕುರಿತು ಮಾತನಾಡಿರುವ ಸೀರಮ್ ಇನ್ಸ್ಟಿಟ್ಯೂಟ್ ಮಾಲೀಕ ಆದಾರ್ ಪೂನಾವಾಲಾ, ಸಂಸ್ಥೆಯ ಪಾಲಿಗೆ ಇದೊಂದು ಹೆಮ್ಮೆಯ ಕ್ಷಣ ಎಂದು ಹೇಳಿದ್ದಾರೆ. ದೇಶದ ಎಲ್ಲ ನಾಗರಿಕರಿಗೂ ಲಸಿಕೆ ಸಿಗಬೇಕು ಎಂಬುದು ಸಂಸ್ಥೆಯ ಅಭಿಲಾಷೆಯಾಗಿದ್ದು, 2021ರಲ್ಲಿ ಈ ನಿಟ್ಟಿನಲ್ಲಿ ನಾವು ಕಾರ್ಯೋನ್ಮುಖರಾಗಲಿದ್ದೇವೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಮನವಿಯ ಮೇರೆಗೆ ನಾವು ಮೊದಲ 100 ಮಿಲಿಯನ್ ಲಸಿಕೆಗೆ 200 ರೂ. ದರ ನಿಗದಿಪಡಿಸಿದ್ದು, ಬಳಿಕ ಖಾಸಗಿ ಮಾರುಕಟ್ಟೆಯಲ್ಲಿ ಈ ಲಸಿಕೆಗೆ 1,000 ರೂ. ದರ ನಿಗದಿ ಮಾಡಲಾಗುವುದು ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ.
ಮೊದಲ 100 ಮಿಲಿಯನ್ ಲಸಿಕೆಯಲ್ಲಿ ಸಂಸ್ಥೆಗೆ ಯಾವುದೇ ಲಾಭ ಇರುವುದಿಲ್ಲ. ದೇಶದ ಒಳಿತಿಗಾಗಿ ನಾವು ಕಿರುಕಾಣಿಕೆಯನ್ನು ನೀಡಿದ್ದು, 100 ಮಿಲಿಯನ್ ಲಸಿಕೆ ಬಳಿಕ ಮಾರಾಟವಾಗುವ ಲಸಿಕೆಯಿಂದ ಮಾತ್ರ ಸಂಸ್ಥೆ ಲಾಭಗಳಿಸಲಿದೆ ಎಂದು ಆದಾರ್ ಪೂನಾವಾಲಾ ನುಡಿದಿದ್ದಾರೆ.
ಕೇವಲ ಭಾರತ ಮಾತ್ರವಲ್ಲದೇ ಆಫ್ರಿಕಾ ಹಾಗೂ ದಕ್ಷಿಣ ಅಮೆರಿಕದ ರಾಷ್ಟ್ರಗಳಿಗೂ ಲಸಿಕೆ ಪೂರೈಸುವ ಕುರಿತು ಚಿಂತನೆ ನಡೆಸಲಾಗುತ್ತಿದ್ದು, ಆದರೆ ಭಾರತದ ಜನರ ಯೋಗಕ್ಷೇಮವೇ ಸಂಸ್ಥೆಯ ಪ್ರಥಮ ಪ್ರಾಶಸ್ತ್ಯವಾಗಿರಲಿದೆ ಎಂದು ಆದಾರ್ ಪೂನಾವಾಲಾ ಸ್ಪಷ್ಟಪಡಿಸಿದ್ದಾರೆ.
ಸದ್ಯ ನಾವು ತಿಂಗಳಿಗೆ 70-80 ಮಿಲಿಯನ್ ಡೋಸ್‌ಗಳನ್ನು ತಯಾರಿಸುತ್ತಿದ್ದು, ಕೇಂದ್ರ ಆರೋಗ್ಯ ಇಲಾಖೆ ನಿರ್ದೇಶನದ ಮೇರೆಗೆ ಇವುಗಳ ವಿತರಣಾ ಕಾರ್ಯಕ್ಕೆ ಚಾಲನೆ ನೀಡಿದ್ದೇವೆ ಎಂದು ಆದಾರ್ ಪೂನಾವಾಲಾ ಹೇಳಿದ್ದಾರೆ,.
ಕಾರ್ಕಳ: ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಾರ್ಕಳ: ನಾಪತ್ತೆಯಾಗಿದ್ದ ಎಣ್ಣೆಹೊಳೆ ಸೇತುವೆಯ ಕೆಳಭಾಗದ ನದಿಯಲ್ಲಿ ವ್ಯಕ್ತಿಯ ಮೃತದೇಹ ಪತ್ತೆ ಕಾರ್ಕಳ: ಮರ್ಣೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಣ್ಣೆಹೊಳೆ…
ಕಿರುಕುಳ ಆರೋಪ : ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಬಳ್ಳಾರಿ: ಗಂಡನ ಕಿರುಕುಳ ತಾಳಲಾರದೆ ತಾಯಿಯೊಬ್ಬಳು ತನ್ನ ಇಬ್ಬರು ಮಕ್ಕಳನ್ನು…
ಮಂಗಳೂರಿನಿಂದ ಅಗತ್ತಿ ದ್ವೀಪಕ್ಕೆ ವಿಮಾನಯಾನ ಸೇವೆ ;ನೂತನ 'ಚಳಿಗಾಲದ ವೇಳಾಪಟ್ಟಿ ಪ್ರಕಟ ಮಂಗಳೂರು : ಕರಾವಳಿಯ ಪ್ರಯಾಣಿಕರಿಗೆ ದೇಶೀಯ ಹಾಗೂ…
ಕಾಂಗ್ರೆಸ್ನಿಂದ ಆಹ್ವಾನ ಬಂದಿರುವುದು ನಿಜ .. ಪಕ್ಷ ಬದಲಾವಣೆಯಂತಹ ನಿರ್ಧಾರವನ್ನು ಏಕಾಏಕಿ ತೆಗೆದುಕೊಳ್ಳಲು ಸಾಧ್ಯವಿಲ್ಲ .. 2028ರ ವಿಧಾನಸಭಾ ಚುನಾವಣೆಯಲ್ಲಿ…
ಉಡುಪಿ: ಕಾಮಗಾರಿ ಹಿನ್ನೆಲೆ ಸಂಚಾರಕ್ಕೆ ಬದಲಿ ಮಾರ್ಗ ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ತೆಂಕಪೇಟೆ ವಾರ್ಡಿನ ಬಡಗುಪೇಟೆ ರಸ್ತೆಯಲ್ಲಿ ಒಳಚರಂಡಿ…