ಬೆಂಗಳೂರು: ನಟ ಕಿಚ್ಚ ಸುದೀಪ್ ಇತ್ತೀಚೆಗಷ್ಟೆ ಚಿತ್ರದುರ್ಗ ಜಿಲ್ಲೆಯಲ್ಲಿ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. ಇದೀಗ ಮತ್ತೆ ನಾಲ್ಕು ಶಾಲೆಯನ್ನು ಕಿಚ್ಚ ದತ್ತು ಪಡೆಯುವ ಮೂಲಕ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿದ್ದಾರೆ.
ಕಿಚ್ಚ ಸುದೀಪ್ ಚಾರಿಟೇಬಲ್ ಟ್ರಸ್ಟ್ ‘ಶಾಲೆಗಾಗಿ ನಾವು-ನೀವು’ ಯೋಜನೆಯಡಿ ಈ ಬಾರಿ ಶಿವಮೊಗ್ಗ ಜಿಲ್ಲೆಯ ನಾಲ್ಕು ಶಾಲೆಗಳನ್ನು ದತ್ತು ಪಡೆದುಕೊಂಡಿದೆ. ಸಾಗರ ತಾಲೂಕಿನ ಆವಿಗೆ ಗ್ರಾಮ, ಹಾಳಸಸಿ ಗ್ರಾಮ, ಎಂ.ಎಲ್.ಹಳ್ಳಿ ಹಾಗೂ ಎಸ್.ಎನ್.ನಗರದ ನಾಲ್ಕು ಸರ್ಕಾರಿ ಶಾಲೆಗಳನ್ನು ದತ್ತು ಪಡೆದುಕೊಂಡಿದೆ.
ನಟ ಸುದೀಪ್ ಅವರ ಕಾರ್ಯಕ್ಕೆ ಸಚಿವ ಡಾ.ಸುಧಾಕರ್ ಟ್ವಿಟ್ಟರ್ ಮೂಲಕ ಅಭಿನಂದನೆ ಸಲ್ಲಿಸಿದ್ದಾರೆ. “ಕೋವಿಡ್ ಸಂಕಷ್ಟ ಕಾಲದಲ್ಲಿ ನಟ ಸುದೀಪ್ ಅವರು ರಾಜ್ಯದ 4 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು ಅಭಿವೃದ್ಧಿ ಪಡಿಸಲು ಮುಂದಾಗಿರುವ ಸುದ್ದಿ ಅತ್ಯಂತ ಶ್ಲಾಘನೀಯ. ಸರ್ಕಾರದ ಜೊತೆ ಕೈ ಜೋಡಿಸಿ ಶಿವಮೊಗ್ಗದ 4 ಶಾಲೆಗಳನ್ನು ಅಭಿವೃದ್ಧಿ ಪಡಿಸಲು ಮುಂದಾಗಿರುವ ಅವರ ಕಾರ್ಯ ಅತ್ಯಂತ ಸಂತಸದ ವಿಷಯ. ಅವರಿಗೆ ನನ್ನ ಹೃದಯ ಪೂರ್ವಕ ಅಭಿನಂದನೆಗಳು” ಎಂದು ಬರೆದುಕೊಂಡಿದ್ದಾರೆ.
ಈ ಹಿಂದೆ ನಟ ಸುದೀಪ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಮೂರು ಹಾಗೂ ಹಿರಿಯೂರು ತಾಲೂಕಿನ ಒಂದು ಸರ್ಕಾರಿ ಶಾಲೆಯನ್ನು ದತ್ತು ಪಡೆಯಲಾಗಿತ್ತು. ಪಿ. ಒಬವನಹಳ್ಳಿ, ಚಳ್ಳಕೆರೆ ಶಾಲೆ, ಪರುಶರಾಂಪುರ ಶಾಲೆ ಮತ್ತು ಚಿತ್ರದುರ್ಗದ ಶಾಲೆಯನ್ನು ದತ್ತು ಪಡೆದು, ಶಾಲೆಯ ಸಂಪೂರ್ಣ ಅಭಿವೃದ್ಧಿಯನ್ನು ವಹಿಸಿಕೊಂಡಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…