ಕೊಲಂಬೊ : ಶ್ರೀಲಂಕಾ ಜಲಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪದ ಮೇಲೆ 9 ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆ ಬಂಧಿಸಿದೆ. ಅವರ ಟ್ರಾಲರ್ ದೋಣಿಯನ್ನೂ ವಶಕ್ಕೆ ಪಡೆದುಕೊಂಡಿದೆ.
ಮೀನುಗಾರರು ಅಂತಾರಾಷ್ಟ್ರೀಯ ಸಮುದ್ರ ಗಡಿ ರೇಖೆ ದಾಟಿ ತಲೈಮನ್ನಾರ್ ಉತ್ತರ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ಮಾಡುತ್ತಿದ್ದರು. ಈ ವೇಳೆ ಬುಧವಾರ ಸಂಜೆ ನಡೆಸಿದ ಕಾರ್ಯಾಚರಣೆಯಲ್ಲಿ ಅವರನ್ನು ಬಂಧಿಸಲಾಗಿದೆ ಎಂದು ಶ್ರೀಲಂಕಾ ನೌಕಾಪಡೆ ಮಾಹಿತಿ ನೀಡಿದೆ.
ಕಾರ್ಯಾಚರಣೆ ವೇಳೆ 50ಕ್ಕೂ ಹೆಚ್ಚು ಭಾರತೀಯ ಟ್ರಾಲರ್‌ಗಳು ಇರಾನತಿವು ದಕ್ಷಿಣ ಭಾಗದ ಶ್ರೀಲಂಕಾ ಜಲಪ್ರದೇಶದಲ್ಲಿ ಮೀನುಗಾರಿಕೆ ನಡೆಸುತ್ತಿರುವುದು ಪತ್ತೆಯಾಗಿದೆ ಎಂದು ನೌಕಾಪಡೆ ತಿಳಿಸಿದೆ.
ಬಂಧಿತ 9 ಮೀನುಗಾರರು ಹಾಗೂ ವಶಪಡಿಸಿಕೊಂಡ ಟ್ರಾಲರ್‌ನ್ನು ಮನ್ನಾರ್ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳಿಗೆ ಮುಂದಿನ ಕಾನೂನು ಕ್ರಮಕ್ಕಾಗಿ ಹಸ್ತಾಂತರಿಸಲಾಗಿದೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್‌ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…