ಬೆಂಗಳೂರು: ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸಮಿತಿ ಸದಸ್ಯ , ಬೆಳ್ಳಾರೆ ಮಾಸ್ತಿಕಟ್ಟೆಯಲ್ಲಿ ಚಿಕನ್ ಸೆಂಟರ್ ನಡೆಸುತ್ತಿದ್ದ ಪ್ರವೀಣ್( ೩೦) ಅವರನ್ನು ದುಷ್ಕರ್ಮಿಗಳು ಹತ್ಯೆ ನಡೆಸಿರುವುದನ್ನು ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ದಿನೇಶ್ ಗುಂಡುರಾವ್ ಖಂಡಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಬಜರಂಗದಳದ ನಾಯಕ ಪ್ರವೀಣ್ ನೆಟ್ಟಾರ್ ಹತ್ಯೆ ಖಂಡನೀಯ. ಪೊಲೀಸರು ತಕ್ಷಣ ಕೊಲೆಗಡುಕರನ್ನು ಬಂಧಿಸಿ ಊಹಾಪೋಹಗಳಿಂದ ಶಾಂತಿ-ಸುವ್ಯವಸ್ಥೆ ಕದಡುವುದನ್ನು ತಪ್ಪಿಸಬೇಕು. ಕೊಲೆಗಡುಕರ ಪಕ್ಷ,ಜಾತಿ, ಧರ್ಮವನ್ನು ಲೆಕ್ಕಿಸದೆ ಪೊಲೀಸರು ಮುಲಾಜಿಲ್ಲದೆ ಕ್ರಮಕೈಗೊಳ್ಳಬೇಕು” ಎಂದು ಒತ್ತಾಯಿಸಿದ್ದಾರೆ.
ಇನ್ನು ಇದೇ ವಿಚಾರದ ಕುರಿತು ಕಾಂಗ್ರೆಸ್ ನಾಯಕ ದಿನೇಶ್ ಗುಂಡುರಾವ್ ಟ್ವೀಟ್ ಮಾಡಿದ್ದು ” ದ.ಕನ್ನಡ ಜಿಲ್ಲೆ ಸುಳ್ಯದ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಎಂಬ ಯುವಕನ ಕೊಲೆ ಅತ್ಯಂತ ಹೇಯ ಕೃತ್ಯ. ಕೆಲ ದಿನಗಳ ಹಿಂದೆ ಸುಳ್ಯದಲ್ಲಿ ಅನ್ಯ ಧರ್ಮದ ಯುವಕನ ಕೊಲೆಯಾಗಿತ್ತು.ಆ ಕೊಲೆಗೆ ಪ್ರತಿಕಾರವಾಗಿ ಈ ಕೊಲೆ ನಡೆದ ಶಂಕೆಯಿದೆ. ಇದು ಖಂಡನೀಯ. ಕೊಲೆಗೆ ಕೊಲೆ ಪ್ರತಿಕಾರವಲ್ಲ. ಸರ್ಕಾರ ಹತ್ಯೆ ನಡೆಸಿದ ದುಷ್ಕರ್ಮಿಗಳ ಮಟ್ಟ ಹಾಕಲಿ ” ಎಂದು ಬರೆದುಕೊಂಡಿದ್ದಾರೆ.
ಪ್ರವೀಣ್ ನೆಟ್ಟಾರ್ ಹತ್ಯೆ- ಮಗನ ಶರ್ಟ್ ಹಿಡಿದುಕೊಂಡು ಅಳುತ್ತಿರುವ ತಾಯಿ: vishwanews24
ಮಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿ ಅಕ್ರಮ ಚಟುವಟಿಕೆ ನಿಯಂತ್ರಣಕ್ಕೆ ಜಿಲ್ಲಾಧಿಕಾರಿ ಸೂಚನೆ ಮಂಗಳೂರು: ರಾತ್ರಿ ವೇಳೆ ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮಂಗಳಮುಖಿಯರು ಅಕ್ರಮ…
ಉಡುಪಿ ನಗರಸಭೆಯ ಕಾಮಗಾರಿಗಳಿಗೆ ಚುರುಕು ಮುಟ್ಟಿಸಲು ಜಿಲ್ಲಾಧಿಕಾರಿಗೆ ಬಿಜೆಪಿ ಮನವಿ ಉಡುಪಿ: ಉಡುಪಿ ನಗರಸಭೆಯಲ್ಲಿ ಬಾಕಿ ಉಳಿದಿರುವ ಕಾಮಗಾರಿಗಳನ್ನು ತಕ್ಷಣ…
ಬಂಟ್ವಾಳ: ಮಾದಕ ದ್ರವ್ಯ ಮಾರಾಟ ಶಂಕೆ; ಓರ್ವನ ಬಂಧನ, 1.93 ಲಕ್ಷ ರೂ. ಮೌಲ್ಯದ ಸೊತ್ತು ವಶ ಬಂಟ್ವಾಳ: ಮಾದಕ…
ಮಂಡ್ಯ : ಅನಾರೋಗ್ಯದಿಂದ ಎಎಸ್ಪಿ ಸಿ.ಇ. ತಿಮ್ಮಯ್ಯ ನಿಧನ ಮಂಡ್ಯ: ಅನಾರೋಗ್ಯದಿಂದ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಸಿ.ಇ.ತಿಮ್ಮಯ್ಯ (57)…
ಕಾಪು : ಇಂದು ಸಂಜೆ ಉಚ್ಚಿಲ ದಸರಾದ ದೀಪಾಲಂಕಾರ ಉದ್ಘಾಟನೆ ಕಾಪು: ದ.ಕ. ಮೊಗವೀರ ಮಹಾಜನ ಸಂಘದ ಆಡಳಿತಕ್ಕೊಳಪಟ್ಟಿರುವ ಶ್ರೀ…
ನೊಯ್ಡಾ ವಿಮಾನ ನಿಲ್ದಾಣಕ್ಕೆ ನರೇಂದ್ರ ಮೋದಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಎಂದು ಮರುನಾಮಕರಣ ನವದೆಹಲಿ: ಉತ್ತರ ಪ್ರದೇಶದ ಜೆವಾರ್ನಲ್ಲಿರುವ ನೋಯ್ಡಾ…