ಬೆಂಗಳೂರು: ಕೊಲೆ ಕೇಸ್‌ನಲ್ಲಿ 20 ವರ್ಷಗಳಿಂದ ತಲೆ ಮರೆಸಿಕೊಂಡು, ಪೊಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿ ತಲೆಮರೆಸಿಕೊಂಡಿದ್ದ ಸಿನಿಮಾ ನಿರ್ದೇಶಕನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಸಿಸಿಬಿ ಪೊಲೀಸರು ಗಜೇಂದ್ರ ಅಲಿಯಾಸ್ ಗಜನನ್ನು ಅರೆಸ್ಟ್ ಮಾಡಿದ್ದಾರೆ. ಗಜೇಂದ್ರ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ಕಾಲಿವುಡ್ ಇಂಡಸ್ಟ್ರಿಯಲ್ಲೂ ಒಂದೆರಡು ಸಿನಿಮಾ ಮಾಡಿದ್ದ. 2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಈ ಕೊಲೆ ಕೇಸ್‌ನಲ್ಲಿ ಚಂದ್ರಪ್ಪ, ಅಲ್ಯೂಮಿನಿಯಂ ಬಾಬು ಜೊತೆಗೆ ನಿರ್ದೇಶಕ ಗಜೇಂದ್ರ ಎಂಟನೇ ಆರೋಪಿಯಾಗಿದ್ದ.
2004ರಲ್ಲಿ ಬೆಂಗಳೂರಿನ ವಿಲ್ಸನ್ ಗಾರ್ಡನ್ನಲ್ಲಿ ರೌಡಿ ಶೀಟರ್ ಕೊತ್ತರವಿ ಕೊಲೆಯಾಗಿತ್ತು. ಕೊಲೆ ಕೇಸ್‌ನಲ್ಲಿ ಬಂಧಿತನಾಗಿದ್ದ ಗಜೇಂದ್ರಗೆ ಕೋರ್ಟ್ 1 ವರ್ಷ ಶಿಕ್ಷೆ ಕೂಡ ವಿಧಿಸಿತ್ತು. ಒಂದು ವರ್ಷ ಜೈಲುವಾಸ ಅನುಭವಿಸಿದ ಗಜೇಂದ್ರ ಬಳಿಕ ಜಾಮೀನು ಪಡೆದು ಹೊರಬಂದಿದ್ದ.
ಜಾಮೀನು ಪಡೆದ ಬಳಿಕ ಹಲವು ವರ್ಷಗಳಿಂದ ಕೋರ್ಟ್‌ಗೆ ಹಾಜರಾಗದೆ ತಲೆ ಮರೆಸಿಕೊಂಡಿದ್ದ. 20 ವರ್ಷಗಳಿಂದ ಪೊಲೀಸರ ಕೈಗೆ ಸಿಕ್ಕಿಲ್ಲ. ಈ ಹಿಂದೆ ಪುಟಾಣಿ ಪವರ್ ಹಾಗೂ ರುದ್ರ ಎಂಬ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ. ಅಷ್ಟೇ ಅಲ್ಲದೇ ತಮಿಳಿನಲ್ಲಿ ಒಂದೆರಡು ಸಿನಿಮಾ ಮಾಡಿರೋದಾಗಿ ಹೇಳಿಕೊಂಡಿದ್ದಾನೆ. ಸದ್ಯ ಸಿಸಿಬಿ ಪೊಲೀಸರು ಇದೀಗ ಗಜೇಂದ್ರನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…