ನವದೆಹಲಿ: ಕೊಲೆ ಪ್ರಕರಣದಲ್ಲಿ ಜೈಲು ಸೇರಿರುವ ಒಲಿಂಪಿಕ್ ಪದಕ ವಿಜೇತ ಕುಸ್ತಿ ಪಟು ಸುಶೀಲ್ ಕುಮಾರ್ ಅವರ ನ್ಯಾಯಾಂಗ ಬಂಧನವನ್ನು ಜೂನ್ 25 ರವರೆಗೆ ವಿಸ್ತರಿಸಿ ದೆಹಲಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಜೈಲಿನಲ್ಲಿ ವಿಶೇಷ ಆಹಾರ ಮತ್ತು ಪೂರಕ ಸಾಮಗ್ರಿಗಳನ್ನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ನ್ಯಾಯಾಲಯ ಬುಧವಾರ ವಜಾಗೊಳಿಸಿತ್ತು. ಅವುಗಳು ‘ಅವಶ್ಯ’ವಾದುದಲ್ಲ ಎಂದು ಕೋರ್ಟ್ ಹೇಳಿತ್ತು.
ಕುಸ್ತಿಪಟು ಸಾಗರ್ ರಾಣಾ(23) ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಶೀಲ್ ಕುಮಾರ್ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.
ಛತ್ರಸಾಲ್ ಕ್ರೀಡಾಂಗಣದಲ್ಲಿ ಮೇ 4ರ ತಡರಾತ್ರಿ ಕುಸ್ತಿಪಟು ಸಾಗರ್ ರಾಣಾ ಮತ್ತು ಅವರ ಇಬ್ಬರು ಸ್ನೇಹಿತರ ಮೇಲೆ ಹಲ್ಲೆ ನಡೆದಿತ್ತು. ಘಟನೆಯಲ್ಲಿ ಸಾಗರ್ ಮೃತಪಟ್ಟರು. ಮಾಡೆಲ್ ಟೌನ್ ಪ್ರದೇಶದಲ್ಲಿ ಆಸ್ತಿ ವಿಚಾರಕ್ಕಾಗಿ ಸುಶೀಲ್ ಈ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಸುಶೀಲ್ ಮತ್ತು ಅವರ ಸ್ನೇಹಿತ ಅಜಯ್ ಅವರನ್ನು ಇತ್ತೀಚಿಗೆ ದೆಹಲಿ ಹೊರವಲಯದ ಮುಂಡ್ಕಾ ಪ್ರದೇಶದಲ್ಲಿ ದೆಹಲಿ ಪೊಲೀಸ್ ವಿಶೇಷ ಪಡೆ ಬಂಧಿಸಿತ್ತು.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…