Featured

ಕೊಲೆ ಪ್ರಕರಣ : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ – vishwanews24

ಕೊಲೆ ಪ್ರಕರಣ : ಚಾಲೆಂಜಿಂಗ್‌ ಸ್ಟಾರ್‌ ದರ್ಶನ್‌ ಬಂಧನ

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್‌ ಆಗಿದ್ದಾರೆ.ಚಿತ್ರದುರ್ಗಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾ ಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.

ಘಟನೆಯ ವಿವರ:
ನಟ ದರ್ಶನ್ ಅವರ ಆತ್ಮೀಯರಾದ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ , ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.

ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್ ಎನ್ನುವವರ ಶೆಡ್ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ಮೆಂಟ್ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.

ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆ ಮಾಡಿದ್ದೇ ವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಘಟನೆ ಹಿಂದಿನ ಕಾರಣ ತಿಳಿದು ಬಂದಿದೆ.

ಬೆಂಗಳೂರಿನ ಶೆಡ್ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿರುವುದಾಗಿ ತಿಳಿದು ಬಂದಿದೆ.

ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago