ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಕೊಲೆ ಪ್ರಕರಣದಲ್ಲಿ ದರ್ಶನ್ ಅವರನ್ನು ಅರೆಸ್ಟ್ ಆಗಿದ್ದಾರೆ.ಚಿತ್ರದುರ್ಗಮೂಲದ ರೇಣುಕಾ ಸ್ವಾಮಿ ಎನ್ನುವವರ ಕೊಲೆ ಪ್ರಕರಣದಲ್ಲಿ ಆರೋಪಿಯನ್ನಾ ಗಿ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ ಎಂಬ ಮಾಹಿತಿ ಲಭ್ಯ ವಾಗಿದೆ. ಕಾಮಾಕ್ಷಿಪಾಳ್ಯದಲ್ಲಿ ರೇಣುಕಾಸ್ವಾಮಿಯ ಕೊಲೆ ಆಗಿತ್ತು. ದರ್ಶನ್ ಸೂಚನೆ ಮೇಲೆ ಕೊಲೆ ಮಾಡಿದ್ದಾಗಿ ನಾಲ್ವರು ಆರೋಪಿಗಳು ಬಾಯ್ಬಿಟ್ಟಿದ್ದಾರೆ. ಘಟನೆ ವೇಳೆ ಸ್ಥಳದಲ್ಲಿ ದರ್ಶನ್ ಕೂಡ ಇದ್ದರು ಎನ್ನಲಾಗಿದೆ. ಈ ಪ್ರಕರಣದಲ್ಲಿ ದರ್ಶನ್ ಸೇರಿ 10 ಜನರನ್ನು ಬಂಧಿಸಲಾಗಿದೆ.
ಘಟನೆಯ ವಿವರ:
ನಟ ದರ್ಶನ್ ಅವರ ಆತ್ಮೀಯರಾದ ನಟಿ ಪವಿತ್ರ ಗೌಡ ಅವರ ಫೋಟೋಗಳಿಗೆ ರೇಣುಕಾ ಸ್ವಾಮಿ ಸಾಮಾಜಿಕ ಜಾಲತಾಣದಲ್ಲಿ ಆಶ್ಲೀಲವಾಗಿ ಕಮೆಂಟ್ , ಕೆಟ್ಟದಾಗಿ ಮೆಸೇಜ್ ಮಾಡುತ್ತಿದ್ದ ಎನ್ನಲಾಗಿದೆ.
ಚಿತ್ರದುರ್ಗದಿಂದ ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆಯಲಾಗಿತ್ತು. ಜೂ. 8ರಂದು ರಾತ್ರಿ ವಿನಯ್ ಎನ್ನುವವರ ಶೆಡ್ ಗೆ ಕರೆತಂದು ಬಲವಾಧ ಆಯುಧದಿಂದ ರೇಣುಕಾ ಅವರಿಗೆ ಹೊಡೆದು ಕೊಲೆಗೈದು, ಮೃತದೇಹನ್ನು ಮೋರಿಗೆ ಎಸೆಯಲಾಗಿತ್ತು. ಜೂ. 9ರಂದು ಮೋರಿಯಲ್ಲಿ ಬೀದಿ ನಾಯಿಗಳು ಮೃತದೇಹವನ್ನು ಎಳೆಯುತ್ತಿದ್ದನ್ನು ನೋಡಿ, ಪಕ್ಕದಲ್ಲಿದ್ದ ಅಪಾರ್ಟ್‌ಮೆಂಟ್ ಭದ್ರತಾ ಸಿಬ್ಬಂದಿಯೊಬ್ಬರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ದರ್ಶನ್ ಸೇರಿದಂತೆ ನಾಲ್ವರು ರೇಣುಕಾ ಸ್ವಾಮಿಗೆ ಹಲ್ಲೆ ಮಾಡಿ ಕೊಲೆಗೈದಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಘಟನೆ ಸಂದರ್ಭದಲ್ಲಿ ದರ್ಶನ್ ಅವರು ಸ್ಥಳದಲ್ಲೇ ಇದ್ದರು ಎನ್ನಲಾಗಿದೆ.
ಪೊಲೀಸರಿಗೆ ಮೃತದೇಹ ಸಿಕ್ಕಾಗ ತನಿಖೆ ಶುರುವಾಗಿದೆ. ಈ ಪ್ರಕರಣದಲ್ಲಿ ಮೂವರು ಮೊದಲು ಠಾಣೆಗೆ ಬಂದು ನಾವೇ ಕೊಲೆ ಮಾಡಿದ್ದು, ಹಣಕಾಸಿನ ವಿಚಾರದಲ್ಲಿ ಈ ಕೊಲೆ ಮಾಡಿದ್ದೇ ವೆ ಎಂದು ಹೇಳಿದ್ದಾರೆ. ಆದರೆ ಪೊಲೀಸರಿಗೆ ಈ ಬಗ್ಗೆ ಸಂಶಯ ಉಂಟಾಗಿದೆ. ಮತ್ತಷ್ಟು ಆಳವಾಗಿ ತನಿಖೆ ನಡೆಸಿದಾಗ ಘಟನೆ ಹಿಂದಿನ ಕಾರಣ ತಿಳಿದು ಬಂದಿದೆ.
ಬೆಂಗಳೂರಿನ ಶೆಡ್ ವೊಂದರಲ್ಲಿ ರೇಣುಕಾ ಸ್ವಾಮಿ ಅವರ ಕೊಲೆಯಾಗಿತ್ತು. ಮೊದಲಿಗೆ ಇದೊಂದು ಆತ್ಮಹತ್ಯೆ ಪ್ರಕರಣವೆನ್ನಲಾಗಿತ್ತು. ಆದರೆ ತನಿಖೆಯ ಬಳಿಕ ಇದೊಂದು ಕೊಲೆ ಎನ್ನುವುದು ಗೊತ್ತಾಗಿದೆ. ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿರುವುದಾಗಿ ಆರೋಪಿಗಳು ಹೇಳಿರುವುದಾಗಿ ತಿಳಿದು ಬಂದಿದೆ.
ಸದ್ಯ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎನ್ನಲಾಗಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…