ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣ ಸಂಬಂಧ ನಟ ದರ್ಶನ್ ಸೇರಿದಂತೆ 10 ಜನರನ್ನು ಬಂಧಿಸಿದ ಬೆನ್ನಲ್ಲೇ ನಟಿ ಪವಿತ್ರಾ ಗೌಡ ಅವರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.
ನಟ ದರ್ಶನ್ ಅವರೊಂದಿಗೆ ಕಳೆದ ಕೆಲ ಸಮಯದಿಂದ ಪವಿತ್ರಾ ಗೌಡ ಆತ್ಮೀಯವಾಗಿದ್ದಾರೆ. ದರ್ಶನ್ ಹಾಗೂ ಪವಿತ್ರಾ ಹಲವು ಸಮಾರಂಭದಲ್ಲಿ ಜೊತೆಯಾಗಿ ಕಾಣಿಸಿಕೊಂಡಿದ್ದಾರೆ. ಇಬ್ಬರ ನಡುವಿನ ಸ್ನೇಹದ ಬಗ್ಗೆ ನಾನಾ ರೀತಿಯ ಚರ್ಚೆಗಳು ನಡೆದಿದೆ.
ಪವಿತ್ರಾ ಗೌಡಗೆ ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎನ್ನುವ ವ್ಯಕ್ತಿ ಸೋಶಿಯಲ್ ಮೀಡಿಯಾದಲ್ಲಿ ಮೆಸೇಜ್ ಹಾಗೂ ಆಶ್ಲೀಲ, ಫೋಟೋ ವಿಡಿಯೋಗಳನ್ನು ಕಳುಹಿಸುತ್ತಿದ್ದ. ಈ ವಿಚಾರ ದರ್ಶನ್ ಅವರ ಅಭಿಮಾನಿಯೊಬ್ಬನಿಗೆ ತಿಳಿದಿದೆ. ಇದಾದ ಬಳಿಕ ಗುಂಪು ಸೇರಿಕೊಂಡು ರೇಣುಕಾ ಸ್ವಾಮಿಯನ್ನು ಬೆಂಗಳೂರಿಗೆ ಕರೆತಂದು ಶೆಡ್ ವೊಂದರಲ್ಲಿ ಇಟ್ಟು, ಹಲ್ಲೆಗೈದು ಕೊಲೆ ಮಾಡಿ ಮೃತದೇಹವನ್ನು ಮೋರಿಯೊಂದಕ್ಕೆ ಎಸೆದಿದ್ದಾರೆ.
ಈ ಸಂಬಂಧ ಪೊಲೀಸರಿಗೆ ಅಪಾರ್ಟ್ಮೆಂಟ್ ವೊಂದರ ಭದ್ರತಾ ಸಿಬ್ಬಂದಿಯೊಬ್ಬರು ಮೃತದೇಹವನ್ನು ನಾಯಿಗಳು ಎಳೆಯುತ್ತಿದೆ ಎಂದು ಮಾಹಿತಿ ನೀಡಿದ್ದಾರೆ. ಪ್ರಕರಣ ಸಂಬಂಧ ನಾಲ್ವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಮೊದಲಿಗೆ ಆರೋಪಿಗಳು ಬೇರೆ ಕಾರಣಗಳನ್ನು ಹೇಳಿದ್ದು, ಆ ಬಳಿಕ ದರ್ಶನ್ ಅವರ ಸೂಚನೆ ಮೇರೆಗೆ ಕೊಲೆ ಮಾಡಿದ್ದೇವೆ ಎಂದಿದ್ದಾರೆ.
ಪೊಲೀಸರು ನಟ ದರ್ಶನ್ ಸೇರಿದಂತೆ 10 ಮಂದಿಯನ್ನು ಬಂಧಿಸಿದ್ದಾರೆ. ಇದೀಗ ನಟ ದರ್ಶನ್ ಅವರ ಸ್ನೇಹಿತೆ ಪವಿತ್ರಾ ಗೌಡರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಆರ್ ಆರ್ ನಗರ ಪೊಲೀಸರು ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಪವಿತ್ರಾ ಅವರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…