ರಾಜ್ಯ ನ್ಯೂಸ್

ಕೊಲೆ ಮಾಡಿಸುತ್ತಿದೆ ಸಿಎಂ ನೇತೃತ್ವದ ಕಾಂಗ್ರೆಸ್​ ಸರ್ಕಾರ: ಅಮಿತ್​ ಷಾ

ಬೆಂಗಳೂರು: ಪ್ರಧಾನಿ ಮೋದಿ ಸರ್ಕಾರ ಬದುಕಿ ಎಂದು ಹೇಳುತ್ತಿದ್ದರೆ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಕೊಲೆಗಳನ್ನು ಮಾಡಿಸುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್​ ಷಾ ಹೇಳಿದರು.

ಸಭೆಯಲ್ಲಿ ಮಾತನಾಡಿ, ಸಚಿವರಾದ ಡಿ.ಕೆ.ಶಿವಕುಮಾರ್​, ಕೆ.ಜೆ.ಜಾರ್ಜ್​, ಕೃಷ್ಣಪ್ಪ ಭ್ರಷ್ಟಾಚಾರದ ಮೆಡಲ್​ ಹಾಕಿಕೊಂಡು ಸರ್ಕಾರದಲ್ಲಿ ಇದ್ದಾರೆ ಎಂದು ಆರೋಪ ಮಾಡಿದರು.

ಈ ಬಾರಿ ಚುನಾವಣೆ ಗೆಲುವು ಬೂತ್​ ಮಟ್ಟದ ಕಾರ್ಯಕರ್ತರ ಕೈಯಲ್ಲಿದೆ. ಬೇರೆ ಪಕ್ಷಗಳಲ್ಲಿ ಚುನಾವಣೆ ನಾಯಕರ ನೇತೃತ್ವದಲ್ಲಿ ನಡೆದರೆ, ನಮ್ಮ ಬಿಜೆಪಿಯಲ್ಲಿ ಕಾರ್ಯಕರ್ತರನ್ನು ಕೇಂದ್ರೀಕರಿಸಿ ನಡೆಸಲಾಗುತ್ತದೆ. 10 ಜನರಿಂದ ಆರಂಭವಾದ ನಮ್ಮ ಪಕ್ಷ ಇವತ್ತು ವಿಶ್ವದ ಅತಿ ದೊಡ್ಡ ಪಕ್ಷವಾಗಿದೆ‌. 20 ರಾಜ್ಯಗಳಲ್ಲಿ ಬಿಜೆಪಿ ಅಧಿಕಾರದಲ್ಲಿ ಇದೆ. ಮೋದಿಯವರ ಕೆಲಸದಿಂದ ಭಾರತ ವಿಶ್ವಮಟ್ಟದಲ್ಲಿ ಹೆಸರಾಗಿದೆ ಎಂದು ಹೇಳಿದರು.
ಈ ಚುನಾವಣೆ ಬಿಜೆಪಿಗೆ ಮಹತ್ವದ್ದಾಗಿದೆ. ಕರ್ನಾಟಕದಲ್ಲಿ ಯಡಿಯೂರಪ್ಪನವರನ್ನು ಸಿಎಂ ಮಾಡುವವರೆಗೂ ಕಾರ್ಯಕರ್ತರು ನಿದ್ದೆ ಮಾಡಬಾರದು. ಮೇ 15 ರಂದು ಯಡಿಯೂರಪ್ಪನವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುತ್ತಾರೆ ಎಂದರು.

ಕರ್ನಾಟಕವನ್ನು ಹಾಳುಗೆಡವಿದ ಸಿಎಂ

ಕರ್ನಾಟಕ, ಬೆಂಗಳೂರನ್ನು ಸಿಎಂ ಸಿದ್ದರಾಮಯ್ಯ ಹಾಳು ಮಾಡಿದ್ದಾರೆ. ಬೆಂಗಳೂರು ವಿಕಾಸ ಆಗಬೇಕು. ಈ ಸರ್ಕಾರದ ಎಲ್ಲ ನಾಯಕರಿಗೆ ಕಾಮಗಾರಿಗಳ ಕಮಿಷನ್​ ಹೋಗಲೇಬೇಕು. ಮೋದಿ ಸರ್ಕಾರ ಕರ್ನಾಟಕಕ್ಕೆ 3 ಲಕ್ಷ ಕೋಟಿ ರೂಪಾಯಿ ನೀಡಿದೆ. ಆ ಹಣವೆಲ್ಲ ಕಾಂಗ್ರೆಸ್ ನಾಯಕರ ಜೇಬು ಸೇರಿದೆ. ನಮ್ಮ ಸರ್ಕಾರದ ಯಾವ ಯೋಜನೆಗಳನ್ನೂ ಸಿದ್ದರಾಮಯ್ಯ ಜನರಿಗೆ ತಲುಪಿಸಿಲ್ಲ. ಇದೊಂದು ಕಮಿಷನ್​ ಸರ್ಕಾರ ಎಂದು ವಾಗ್ದಾಳಿ ನಡೆಸಿದರು,. ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ ಮತ್ತಿತರರು ಪಾಲ್ಗೊಂಡಿದ್ದರು.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago