ಕೊಲ್ಲೂರು: ಮೇ 17ರ ಮಧ್ಯಾಹ್ನ ಕೊಲ್ಲೂರು ದಳಿ ಎಂಬಲ್ಲಿ ಕೊಡಚಾದ್ರಿಯಿಂದ ಕೇರಳದ ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಜೀಪು ಹಾಗೂ ಟೆಂಪೋ ನಡುವೆ ನಡೆದಿದ್ದ ಭೀಕರ ಅಪಘಾತದಲ್ಲಿ ಇಬ್ಬರು ಮೃತರಾಗಿ ಹಲವರು ಗಾಯಗೊಂಡಿದ್ದು ಮೃತ ಮಹಿಳೆಯ ಚಿನ್ನಾಭರಣಕ್ಕೆ ಕನ್ನ ಹಾಕಿದ ಘಟನೆ ವರದಿಯಾಗಿದೆ.
ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಮೃತರ ಸಂಬಂಧಿಕರು ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಬಲೆಬೀಸಿದ್ದಾರೆ.
ಇದನ್ನೂ ಓದಿ:
ಕಳೆದ ರವಿವಾರ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತರಾಗಿ ಮಕ್ಕಳು ಸಹಿತ ಎಂಟು ಮಂದಿ ತೀವ್ರವಾಗಿ ಗಾಯಗೊಂಡಿದ್ದರು. ಕೇರಳ ಮೂಲದ ಜ್ಯೋತಿ ಹಾಗೂ ಆರಿಯಾ ಅನುಪ್ ಎನ್ನುವರು ಮೃತಪಟ್ಟಿದ್ದರು. ಅಪಘಾತದ ತೀವೃತೆಯ ಸಂದರ್ಭದಲ್ಲಿ ಮೃತ ಮಹಿಳೆ ಜ್ಯೋತಿ ಅವರ ಮೈಮೇಲಿದ್ದ ಸುಮಾರು 18 ಗ್ರಾಂ ತೂಕದ ಚಿನ್ನದ ಆಭರಣಗಳನ್ನು ಖದೀಮರು ಚಾಣಾಕ್ಷತನದಿಂದ ಕಳವು ಮಾಡಿದ್ದರು.
ಮೃತ ಜ್ಯೋತಿ ಕುಟುಂಬಸ್ಥರು ಈ ಶೋಕದಿಂದ ಚೇತರಿಸಿಕೊಂಡ ಬಳಿಕ ಒಡವೆಗಳು ಕಾಣೆಯಾಗಿರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡ ಪೊಲೀಸರು ಆರೋಪಿಗಳ ಪತ್ತೆಗೆ ಕ್ರಮವಹಿಸಿದ್ದಾರೆ.
ಇದನ್ನೂ ಓದಿ:
ಉಡುಪಿ : ಯುವತಿ ನಾಪತ್ತೆ ಉಡುಪಿ : ಉಡುಪಿ ಸವೀಸ್ ಬಸ್ ನಿಲ್ದಾಣದ ಬಳಿ ಇರುವ ಹೊಲಿಗೆ ತರಬೇತಿ ಕೇಂದ್ರದಲ್ಲಿ…
ಪಡುಬಿದ್ರಿ : ವ್ಯಕ್ತಿ ನಾಪತ್ತೆ ಉಡುಪಿ: ಎಲ್ಲೂರು ಗ್ರಾಮ ಅದಮಾರು ಅಂಚೆ ಅಂಬೇಡ್ಕರ್ ರೋಡ್ ಆಶಿರ್ವಾದ ಹೌಸ್ ನಿವಾಸಿ ಹರ್ಷಲ್…
ತುಳು ಭಾಷೆಯ ಮಾನ್ಯತೆ ಕೇವಲ ಉಡುಪಿ-ದ.ಕ. ಜಿಲ್ಲೆಗಳಿಗೆ ಸೀಮಿತಗೊಳಿಸುವುದು ಸರಿಯಲ್ಲ : ಪ್ರಮೋದ್ ಮಧ್ವರಾಜ್ ಉಡುಪಿ: ತುಳು ಭಾಷೆಗೆ ಅಧಿಕೃತ…
ಉಡುಪಿ ಜಿಲ್ಲಾಸ್ಪತ್ರೆ ಶೀಘ್ರ ಲೋಕಾರ್ಪಣೆಗೆ ಖಾದರ್ ಗೆ ಉಡುಪಿ ಶಾಸಕರ ಮನವಿ ಉಡುಪಿ: ನೂತನ ಜಿಲ್ಲಾಸ್ಪತ್ರೆಯನ್ನು ಸಾರ್ವಜನಿಕರ ಸೇವೆಗೆ ಶೀಘ್ರ…
ದುಬೈಯ ಶಾರ್ಜಾದಲ್ಲಿ ಉಡುಪಿ ಮೂಲದ ವ್ಯಕ್ತಿಯ ಅಮಾನವೀಯ ಕೊಲೆ : ಪತ್ನಿ , ಪುತ್ರ ನಾಪತ್ತೆ ; ಪ್ರಕರಣ ದಾಖಲು…
ಮಂಗಳೂರು : ಅಕ್ರಮವಾಗಿ ಜಾನುವಾರು ಸಾಗಾಟ: ಓರ್ವ ಬಂಧನ, ಮತ್ತೋರ್ವ ಪರಾರಿ ಮಂಗಳೂರು: ಅಕ್ರಮವಾಗಿ ಹಾಗೂ ಹಿಂಸಾತ್ಮಕ ರೀತಿಯಲ್ಲಿ ಜಾನುವಾರುಗಳನ್ನು…