ಉಡುಪಿ :ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ನಟ ಶಿವರಾಜ್ ಕುಮಾರ್ ಹಾಗೂ ಅವರ ಪತ್ನಿ ಶಿವಮೊಗ್ಗ ಲೋಕಸಭೆ ಕ್ಷೇತ್ರದ ಕಾಂಗ್ರೇಸ್ ಅಭ್ಯರ್ಥಿ ಗೀತಾಶಿವರಾಜ್ ಕುಮಾರ್ ಭೇಟಿ ನೀಡಿ ದೇವಿಯ ದರ್ಶನ ಪಡೆದರು.
ಮಾಜಿ ಸಿಎಂ ಬಂಗಾರಪ್ಪನವರ ಪುತ್ರಿ, ಡಾ ರಾಜ್ಕುಮಾರ್ ಸೊಸೆ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಶಿವಮೊಗ್ಗದಿಂದ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿದ್ದು ಈಗಾಗಲೇ ಚುನಾವಣೆ ಪ್ರಚಾರ ಆರಂಭಿಸಿದ್ದಾರೆ. ಈ ನಡುವೆ ಬೈಂದೂರಿನಲ್ಲಿ ಚುನಾವಣಾ ಪ್ರಚಾರಕ್ಕೆ ಆಗಮಿಸಿರುವ ಅವರು , ಕೊಲ್ಲೂರು ಕ್ಷೇತ್ರಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದರು. ಬಳಿಕ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಗೀತಾ ಅವರ ಜೊತೆ ನಟ ಶಿವರಾಜ್ ಕುಮಾರ್ ಆಗಮಿಸಿದ್ದು, ಅವರಿಗೆ ದೇವಳದ ವತಿಯಿಂದ ವಿಶೇಷ ಗೌರವ ಅರ್ಪಿಸಲಾಯಿತು.
ಈ ವೇಳೆ ಸಚಿವ ಮಧುಬಂಗಾರಪ್ಪ ಮಾಜಿ ಶಾಸಕರಾದ ಗೋಪಾಲ್ ಪೂಜಾರಿ- ಬಿ.ಎಂ ಸುಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…