Featured

ಕೊಲ್ಲೂರು ದೇವಸ್ಥಾನದ ನಕಲಿ ವೆಬ್ ಸೈಟ್ ಸೃಷ್ಠಿಸಿ ಭಕ್ತರ ಲಕ್ಷಾಂತರ ಹಣ ದೋಚಿರುವ ದೇವಸ್ಥಾನದ ಅರ್ಚಕರು -Vishwanews24

ಉಡುಪಿ : ಕೊಲ್ಲೂರು ದೇವಸ್ಥಾನದ ಅರ್ಚಕರೆ ದೇವಸ್ಥಾನದ ನಕಲಿ ವೆಬ್ ಸೈಟ್ ಕ್ರಿಯೆಟ್ ಮಾಡಿ ದೇವಸ್ಥಾನದ ಭಕ್ತರ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.

ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮತ್ತೊಂದು ದೋಖಾ ಪ್ರಕರಣ ಬಯಲಾಗಿದೆ. ದೂರದ ಊರಿನಿಂದ ದೇವಿಗೆ ಬಂದು ಸೇವೆ ಕೊಡಲು ಸಾಧ್ಯವಾಗದ ನೂರಾರು ಭಕ್ತರು ದೇವಸ್ಥಾನದ ಅಧಿಕೃತ ವೆಬ್‍ಸೈಟ್ ಮೂಲಕ ಸೇವೆಗೆ ದೇಣಿಗೆ ಕೊಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ದೇವಸ್ಥಾನ ವೆಬ್‍ಸೈಟ್ ನಕಲಿ ಮಾಡಿ, ಭಕ್ತರ ಹಣ ದೋಚಿದ್ದಾರೆ. ಹೆಸರಿಗೊಂದು ಪೂಜೆ ಮಾಡಿಸಿ ಪ್ರಸಾದ ಕಳುಹಿಸಿ ಲಕ್ಷಗಟ್ಟಲೆ ಕಾಸು ಜೇಬಿಗಿಳಿಸಿ ಕೈತೊಳೆದುಕೊಂಡಿದ್ದಾರೆ.

ಸಂಪೂರ್ಣ ಕೊಲ್ಲೂರು ದೇವಸ್ಥಾನದ ವೆಬ್‍ಸೈಟ್ ನಕಲಿ ಮಾಡಿ, ಆಪ್ಶನ್ಸ್, ಫೋಟೋಗಳು, ಸೇವಾ ವಿವರಗಳೆಲ್ಲಾ ಒಂದೇ ರೀತಿ ಇರುವ ಹಾಗೆ ಖದೀಮರು ನಕಲಿ ವೆಬ್‍ಸೈಟ್ ರೂಪಿಸಿದ್ದಾರೆ. ಇದನ್ನು ನಂಬಿ ಭಕ್ತರು ದೇವರ ಸೇವೆಗೆ ಈ ವೆಬ್‍ಸೈಟ್‍ನಲ್ಲಿ ಪೂಜೆ ಬುಕ್ ಮಾಡುತ್ತಿದ್ದರು. ಆದರೆ ಹಣ ಮಾತ್ರ ಆನ್‍ಲೈನ್ ಮೂಲಕ ದೇವಸ್ಥಾನದ ಅಕೌಂಟಿಗೆ ಹೋಗದೇ ದೇವಸ್ಥಾನದ ಅರ್ಚಕರೊಬ್ಬರ ಖಾಸಗಿ ಖಾತೆಗೆ ಹೋಗಿ ಬೀಳುತ್ತಿತ್ತು.

ಈ ವಿಚಾರ ದೇವಸ್ಥಾನದ ಹೊಸ ಇಒ ಗಮನಕ್ಕೆ ಬಂದಿದ್ದು, ಇಒ ಸೆನ್(ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯಗಳಿಗೆ ಸಂಬಂಧಿಸಿದ ಅಪರಾಧ ಠಾಣೆ) ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಶುರು ಮಾಡಿದಾಗ ದೇವಸ್ಥಾನದಲ್ಲೇ ಅರ್ಚಕ ವೃತ್ತಿ ಮಾಡುತ್ತಿರುವವರೇ ನಕಲಿ ವೆಬ್‍ಸೈಟ್‍ನ ಅಡ್ಮಿನ್ ಅನ್ನೋದು ಪೊಲೀಸರಿಗೆ ಗೊತ್ತಾಗಿದ್ದು, ತನಿಖೆ ಪೂರ್ಣಗೊಂಡ ಕೂಡಲೇ ದೇವರ ಹಣ ದೋಚಿದ ಕಳ್ಳ ಸಿಕ್ಕಿಹಾಕಿಕೊಳ್ಳುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

5 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

5 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

5 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

5 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

5 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

5 days ago