ಉಡುಪಿ : ಕೊಲ್ಲೂರು ದೇವಸ್ಥಾನದ ಅರ್ಚಕರೆ ದೇವಸ್ಥಾನದ ನಕಲಿ ವೆಬ್ ಸೈಟ್ ಕ್ರಿಯೆಟ್ ಮಾಡಿ ದೇವಸ್ಥಾನದ ಭಕ್ತರ ಲಕ್ಷಾಂತರ ರೂಪಾಯಿ ಹಣವನ್ನು ದೋಚಿರುವ ಪ್ರಕರಣ ಬೆಳಕಿಗೆ ಬಂದಿದೆ.
ದಕ್ಷಿಣ ಭಾರತದ ಪ್ರಸಿದ್ಧ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಮತ್ತೊಂದು ದೋಖಾ ಪ್ರಕರಣ ಬಯಲಾಗಿದೆ. ದೂರದ ಊರಿನಿಂದ ದೇವಿಗೆ ಬಂದು ಸೇವೆ ಕೊಡಲು ಸಾಧ್ಯವಾಗದ ನೂರಾರು ಭಕ್ತರು ದೇವಸ್ಥಾನದ ಅಧಿಕೃತ ವೆಬ್‍ಸೈಟ್ ಮೂಲಕ ಸೇವೆಗೆ ದೇಣಿಗೆ ಕೊಡುತ್ತಾರೆ. ಆದರೆ ಇದನ್ನೇ ಬಂಡವಾಳ ಮಾಡಿಕೊಂಡ ಖದೀಮರು ದೇವಸ್ಥಾನ ವೆಬ್‍ಸೈಟ್ ನಕಲಿ ಮಾಡಿ, ಭಕ್ತರ ಹಣ ದೋಚಿದ್ದಾರೆ. ಹೆಸರಿಗೊಂದು ಪೂಜೆ ಮಾಡಿಸಿ ಪ್ರಸಾದ ಕಳುಹಿಸಿ ಲಕ್ಷಗಟ್ಟಲೆ ಕಾಸು ಜೇಬಿಗಿಳಿಸಿ ಕೈತೊಳೆದುಕೊಂಡಿದ್ದಾರೆ.
ಸಂಪೂರ್ಣ ಕೊಲ್ಲೂರು ದೇವಸ್ಥಾನದ ವೆಬ್‍ಸೈಟ್ ನಕಲಿ ಮಾಡಿ, ಆಪ್ಶನ್ಸ್, ಫೋಟೋಗಳು, ಸೇವಾ ವಿವರಗಳೆಲ್ಲಾ ಒಂದೇ ರೀತಿ ಇರುವ ಹಾಗೆ ಖದೀಮರು ನಕಲಿ ವೆಬ್‍ಸೈಟ್ ರೂಪಿಸಿದ್ದಾರೆ. ಇದನ್ನು ನಂಬಿ ಭಕ್ತರು ದೇವರ ಸೇವೆಗೆ ಈ ವೆಬ್‍ಸೈಟ್‍ನಲ್ಲಿ ಪೂಜೆ ಬುಕ್ ಮಾಡುತ್ತಿದ್ದರು. ಆದರೆ ಹಣ ಮಾತ್ರ ಆನ್‍ಲೈನ್ ಮೂಲಕ ದೇವಸ್ಥಾನದ ಅಕೌಂಟಿಗೆ ಹೋಗದೇ ದೇವಸ್ಥಾನದ ಅರ್ಚಕರೊಬ್ಬರ ಖಾಸಗಿ ಖಾತೆಗೆ ಹೋಗಿ ಬೀಳುತ್ತಿತ್ತು.
ಈ ವಿಚಾರ ದೇವಸ್ಥಾನದ ಹೊಸ ಇಒ ಗಮನಕ್ಕೆ ಬಂದಿದ್ದು, ಇಒ ಸೆನ್(ಸೈಬರ್, ಆರ್ಥಿಕ ಹಾಗೂ ಮಾದಕ ದ್ರವ್ಯಗಳಿಗೆ ಸಂಬಂಧಿಸಿದ ಅಪರಾಧ ಠಾಣೆ) ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ದೂರು ದಾಖಲಿಸಿದ್ದಾರೆ. ಪ್ರಕರಣ ಕೈಗೆತ್ತಿಕೊಂಡ ಪೊಲೀಸರು ತನಿಖೆ ಶುರು ಮಾಡಿದಾಗ ದೇವಸ್ಥಾನದಲ್ಲೇ ಅರ್ಚಕ ವೃತ್ತಿ ಮಾಡುತ್ತಿರುವವರೇ ನಕಲಿ ವೆಬ್‍ಸೈಟ್‍ನ ಅಡ್ಮಿನ್ ಅನ್ನೋದು ಪೊಲೀಸರಿಗೆ ಗೊತ್ತಾಗಿದ್ದು, ತನಿಖೆ ಪೂರ್ಣಗೊಂಡ ಕೂಡಲೇ ದೇವರ ಹಣ ದೋಚಿದ ಕಳ್ಳ ಸಿಕ್ಕಿಹಾಕಿಕೊಳ್ಳುತ್ತಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…