Featured

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ :  ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ – vishwanews24

ಕೊಲ್ಲೂರು ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ :  ಕೊಠಡಿ ಕಾಯ್ದಿರಿಸುವ ಹೆಸರಿನಲ್ಲಿ ಭಕ್ತರಿಗೆ ವಂಚನೆ

ಕೊಲ್ಲೂರು: ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಹೆಸರಿನಲ್ಲಿ ನಕಲಿ ವೆಬ್ಸೈಟ್ ರಚಿಸಿ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಹೆಸರಿನಲ್ಲಿ ವಂಚಿಸುತ್ತಿರುವ ಬಗ್ಗೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕೊಲ್ಲೂರು ಶ್ರೀಮೂಕಾಂಬಿಕಾ ದೇವಸ್ಥಾನದ ಅಧಿಕೃತ ವೆಬ್ಸೈಟ್ http://karnatakatemplesaccommodation.com ಬದಲಿಗೆ ಅಪರಿಚಿತರು ಅಕ್ರಮ ಲಾಭದ ಉದ್ದೇಶದಿಂದ karnatakatempleaccommodation ಎಂಬ ಹೆಸರಿನ ಅನಧಿಕೃತ ನಕಲಿ ವೆಬ್ಸೈಟ್ನ್ನು ರಚಿಸಿದ್ದು, ಈ ನಕಲಿ ವೆಬ್ಸೈಟ್ ಮೂಲಕ ಹಲವಾರು ಜನರಿಗೆ ಲಲಿತಾಂಬಿಕಾ ಅತಿಥಿ ಗೃಹದ ಕೊಠಡಿಯನ್ನು ಕಾಯ್ದಿರಿಸಿದ್ದಾರೆ. ಅವರಿಂದ ವಾಟ್ಸಾಪ್ ತಂತ್ರಾಂಶದಲ್ಲಿ ಪೋನ್ ಪೇಯ ಕ್ಯೂಆರ್ ಕೋಡ್ನ್ನು ನೀಡಿ ಹಣವನ್ನು ಪಡೆದು ನಕಲಿ ರಶೀದಿ ನೀಡಿ ವಂಚಿಸಿ ಹಣ ದೋಚುತ್ತಿರುವುದು ಕಂಡುಬಂದಿದೆ.

ದೇವಳದ ಭಕ್ತರಿಗೆ ದೇವಳದ ಕೊಠಡಿಗಳನ್ನು ಕಾಯ್ದಿರಿಸುವ ಬಗ್ಗೆ ವಂಚಿಸುತ್ತಿರುವ ಈ ನಕಲಿ ವೆಬ್ಸೈಟ್ ಜಾಲವನ್ನು ಪತ್ತೆ ಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ದೇವಸ್ಥಾನದ ಕಾರ್ಯನಿರ್ವಾಹಣಾಧಿಕಾರಿ ಪ್ರಶಾಂತ್ ಕುಮಾರ್ ಶೆಟ್ಟಿ ನೀಡಿದ ದೂರಿನಂತೆ ಕೊಲ್ಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

10 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

10 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

10 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

11 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

12 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

12 hours ago