ಕೊಲ್ಲೂರು: ದೇವರ ಮೇಲೆ ಭಕ್ತರು ನಂಬಿಕೆ ಇಟ್ಟು ನೀಡುವ ಕಾಣಿಕೆ ಸೇವೆ ಸದ್ವಿನಿಯೋಗ ಉದ್ದೇಶದಿಂದ ಯೋಜನೆ ರೂಪಿಸಿ ಧಾರ್ಮಿಕ ಕ್ಷೇತ್ರಗಳನ್ನು ಸಮಾಜಮುಖಿಯಾಗಿ ಬೆಳೆಸಬೇಕು. ಮುಜರಾಯಿ ದೇವಾಲಯಗಳಲ್ಲಿ ಸೇವೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರುವ ಚಿಂತನೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಕೊಲ್ಲೂರಿನಲ್ಲಿ 21 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳನ್ನು ಸರ್ಕಾರ ಪಡೆದು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪವಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ ಎಂದರು.
ರಾಜ್ಯದಲ್ಲಿ ಅಂದಾಜು 190ಕ್ಕಿಂತಲೂ ಹೆಚ್ಚು ’ಎ’ ದರ್ಜೆಯ ದೇವಾಲಯಗಳಿವೆ. ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಳ ಆಗುತ್ತಿರುವುದರಿಂದ ಈ ಸಂಖ್ಯೆ ಸದ್ಯದಲ್ಲಿಯೇ 250ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು 1,000 ಮಂದಿ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂಬ ಮಾಹಿತಿ ನೀಡಿದರು.
ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕೊಲ್ಲೂರು ದೇವಸ್ಥಾನ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ವಿ.ಶ್ರೀಧರ ಅಡಿಗ ಮೊದಲಾದವರು ಇದ್ದರು. ಹಿಂದಿನ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಗ್ರಹ ಮಂಡಳಿ ಅಭಿಯಂತರ ಫಯಾಜುದ್ದೀನ್, ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ, ಯೋಗೀಶ್ವಂದ್ರ ರಾವ್ ಹಾಗೂ ವಿಜಯ್ ಕುಮಾರ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ ಎಂ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡ ಟೆನಿಸ್ ಆಟಗಾರ ಲಿಯಾಂಡರ್ ಪೇಸ್ ಹೊಸದಿಲ್ಲಿ: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಮುನ್ನ ಟೆನಿಸ್ ಆಟಗಾರ…
ಬೀದರ್ : ಮಳೆ ಆರ್ಭಟ - ಸಿಡಿಲು ಬಡಿದು ಯುವಕ ಸಾವು ಬೀದರ್: ಸಿಡಿಲು ಬಡಿದು ಯುವಕನೊಬ್ಬ ಮೃತಪಟ್ಟ ಘಟನೆ ಔರಾದ್…
ಬೆಳ್ತಂಗಡಿ: ಏಕಾಏಕಿ ತೆರೆಯಲ್ಪಟ್ಟ ಬಸ್ಸಿನ ಬಾಗಿಲು ; ನಿಯಂತ್ರಣ ತಪ್ಪಿ ರಸ್ತೆಗೆ ಎಸೆಯಲ್ಪಟ್ಟು ಇಬ್ಬರು ವಿದ್ಯಾರ್ಥಿನಿಯರಿಗೆ ಗಾಯ ಬೆಳ್ತಂಗಡಿ: ಚಲಿಸುತ್ತಿದ್ದ ಬಸ್ಸಿನಿಂದ…
ಉಡುಪಿ: ಚಲಿಸುತ್ತಿದ್ದ ರೈಲಿನಿಂದ ಜಿಗಿಯಲು ಯತ್ನ; ಯುವಕನ ರಕ್ಷಣೆ ಉಡುಪಿ: ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಯುವಕನೊಬ್ಬ ರೈಲಿನಿಂದ ಜಿಗಿಯಲು ಯತ್ನಿಸುತ್ತಿದ್ದ…
ಕಾಸರಗೋಡು : ಕೆಟ್ಟು ನಿಂತಿದ್ದ ಪಿಕಪ್ ವ್ಯಾನ್ ಗೆ ಬೈಕ್ ಢಿಕ್ಕಿ: ಸವಾರ ಮೃತ್ಯು ಕಾಸರಗೋಡು : ರಾಷ್ಟ್ರೀಯ ಹೆದ್ದಾರಿಯ ಬದಿಯಲ್ಲಿ…
ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ ; ಆನ್‌ಲೈನ್‌ನಲ್ಲಿ ವೀಕ್ಷಿಸುವುದು ಹೇಗೆ? ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು…