Featured

ಕೊಲ್ಲೂರು ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ : ಕೋಟ ಶ್ರೀನಿವಾಸ ಪೂಜಾರಿ -Vishwanews24

ಕೊಲ್ಲೂರು: ದೇವರ ಮೇಲೆ ಭಕ್ತರು ನಂಬಿಕೆ ಇಟ್ಟು ನೀಡುವ ಕಾಣಿಕೆ ಸೇವೆ ಸದ್ವಿನಿಯೋಗ ಉದ್ದೇಶದಿಂದ ಯೋಜನೆ ರೂಪಿಸಿ ಧಾರ್ಮಿಕ ಕ್ಷೇತ್ರಗಳನ್ನು ಸಮಾಜಮುಖಿಯಾಗಿ ಬೆಳೆಸಬೇಕು. ಮುಜರಾಯಿ ದೇವಾಲಯಗಳಲ್ಲಿ ಸೇವೆಗಳನ್ನು ಆನ್‌ಲೈನ್ ವ್ಯವಸ್ಥೆಗೆ ತರುವ ಚಿಂತನೆ ಇದೆ ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಕೊಲ್ಲೂರಿನಲ್ಲಿ 21 ಕೋಟಿ ರೂ.ವೆಚ್ಚದಲ್ಲಿ ನಿರ್ಮಾಣವಾದ ಶ್ರೀ ಮೂಕಾಂಬಿಕಾ ಅನ್ನಪ್ರಸಾದ ಭೋಜನ ಶಾಲೆ ಕಟ್ಟಡ ಉದ್ಘಾಟಿಸಿ ಅವರು ಮಾತನಾಡಿದರು.

ರಾಜ್ಯದ ಮುಜರಾಯಿ ಇಲಾಖೆ ಅಧೀನದಲ್ಲಿರುವ ದೇವಸ್ಥಾನಗಳನ್ನು ಸರ್ಕಾರ ಪಡೆದು ಪ್ರತಿ ವರ್ಷ 1,000 ಜೋಡಿಗೆ ಉಚಿತ ಸಾಮೂಹಿಕ ವಿವಾಹ ಮಾಡಿಸಬೇಕು ಎನ್ನುವ ಸಂಕಲ್ಪವಿದೆ. ರಾಜ್ಯದಲ್ಲಿ ಅಧಿಕ ಆದಾಯ ಇರುವ ಕೊಲ್ಲೂರಿನಂತಹ ದೇವಾಲಯದಲ್ಲಿ ಕನಿಷ್ಠ 100 ಜೋಡಿಗೆ ಕಂಕಣ ಭಾಗ್ಯ ತೊಡಗಿಸಬೇಕು ಎನ್ನುವ ಗುರಿ ಇದೆ ಎಂದರು.

ರಾಜ್ಯದಲ್ಲಿ ಅಂದಾಜು 190ಕ್ಕಿಂತಲೂ ಹೆಚ್ಚು ’ಎ’ ದರ್ಜೆಯ ದೇವಾಲಯಗಳಿವೆ. ದಿನದಿಂದ ದಿನಕ್ಕೆ ದೇವಾಲಯಕ್ಕೆ ಬರುವ ಭಕ್ತರ ಸಂಖ್ಯೆ ಹೆಚ್ಚಳ ಆಗುತ್ತಿರುವುದರಿಂದ ಈ ಸಂಖ್ಯೆ ಸದ್ಯದಲ್ಲಿಯೇ 250ಕ್ಕಿಂತ ಹೆಚ್ಚಾಗುವ ಸಾಧ್ಯತೆ ಇದೆ. ಮುಜರಾಯಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ ನಿವಾರಿಸಲು 1,000 ಮಂದಿ ನೇಮಕಾತಿಗಾಗಿ ಆರ್ಥಿಕ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂಬ ಮಾಹಿತಿ ನೀಡಿದರು.

ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್, ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಕೊಲ್ಲೂರು ದೇವಸ್ಥಾನ ಕಾರ್ಯ ನಿರ್ವಹಣಾಧಿಕಾರಿ ಎಚ್.ಕೃಷ್ಣಮೂರ್ತಿ, ವ್ಯವಸ್ಥಾಪನಾ ಸಮಿತಿ ಸದಸ್ಯ ಕೆ.ವಿ.ಶ್ರೀಧರ ಅಡಿಗ ಮೊದಲಾದವರು ಇದ್ದರು. ಹಿಂದಿನ ಕಾರ್ಯನಿರ್ವಹಣಾಧಿಕಾರಿ ಸದಾಶಿವ ಪ್ರಭು, ಗ್ರಹ ಮಂಡಳಿ ಅಭಿಯಂತರ ಫಯಾಜುದ್ದೀನ್, ಗುತ್ತಿಗೆದಾರ ಕಾಪು ವಾಸುದೇವ ಶೆಟ್ಟಿ, ಯೋಗೀಶ್ವಂದ್ರ ರಾವ್ ಹಾಗೂ ವಿಜಯ್ ಕುಮಾರ ಅವರನ್ನು ಗೌರವಿಸಲಾಯಿತು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್‌ಕುಮಾರ ಎಂ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.

 

Vishwa News 24

Recent Posts

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ – vishwanews24

ಉಡುಪಿ: ಆಸ್ತಿಯನ್ನು ಬಲವಂತವಾಗಿ ತನ್ನ ಹೆಸರಿಗೆ ವರ್ಗಾಯಿಸಿಕೊಂಡು ವೃದ್ಧ ಪೋಷಕರನ್ನು ಮನೆಯಿಂದ ಹೊರಹಾಕಿದ ಮಗ ಉಡುಪಿ: ತಾಯಿಯ ಹೆಸರಿನಲ್ಲಿದ್ದ ಆಸ್ತಿಯನ್ನು…

6 hours ago

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು – vishwanews24

ವಿಟ್ಲ : ಚಲಿಸುತ್ತಿದ್ದ ಕಾರಿನ ಮೇಲೆ ಬಿದ್ದ ಮರ ಹಾಗೂ ವಿದ್ಯುತ್ ಕಂಬ: ದಂಪತಿ ಅಪಾಯದಿಂದ ಪಾರು ವಿಟ್ಲ: ಮರ ಹಾಗೂ…

7 hours ago

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ – vishwanews24

ಮಂಗಳೂರು: ಉದ್ಯಮಿಯ ಕಾರು ಅಡ್ಡಗಟ್ಟಿ ಕಾರು ಸಹಿತ ಚಿನ್ನಾಭರಣ ದರೋಡೆ ಮಂಗಳೂರು: ಕೇರಳ ಮೂಲದ ಉದ್ಯಮಿಯೊಬ್ಬರ ಕಾರನ್ನು ಅಡ್ಡಗಟ್ಟಿ ಕಾರು…

7 hours ago

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

8 hours ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

8 hours ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago