ಉಡುಪಿ: ಕೊಲ್ಲೂರಿನ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಸರಕಾರಿ ಭೂಮಿಗಳ ಅತಿಕ್ರಮಣದ ಬಗ್ಗೆ ಸಲ್ಲಿಸಿರುವ ಅರ್ಜಿಯನ್ನು ಚೆನ್ನೈಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ವಿಚಾರಣೆಗೆ ಅಂಗೀಕರಿಸಿದೆ ಎಂದು ಹರೀಶ್ ತೋಳಾರ್ ಕೊಲ್ಲೂರು ತಿಳಿಸಿದ್ದಾರೆ.
ಕೊಡಚಾದ್ರಿ ಬೆಟ್ಟಗಳಿಂದ ಹರಿದು ಬರುವ ಪುಣ್ಯ ತೀರ್ಥಗಳು ಸಂಗಮವಾಗಿ ಅಗ್ನಿ ತೀರ್ಥ, ಕಾಶಿ ತೀರ್ಥ ಹಾಗೂ ಸೌಪರ್ಣಿಕೆಯಾಗಿ ಕೊಲ್ಲೂರಿನಲ್ಲಿ ಹರಿಯುತ್ತಿದೆ. ಈ ನದಿಯ ಬಗ್ಗೆ ಭಕ್ತರಿಗೆ ಬಹಳಷ್ಟು ನಂಬಿಕೆ ಇದೆ. ಇತ್ತೀಚಿನ ಕೆಲ ವರ್ಷ ಗಳಿಂದ ಕೊಲ್ಲೂರಿನಲ್ಲಿ ತಲೆ ಎತ್ತಿರುವ ಹಾಗೂ ನಿರ್ಮಾಣವಾಗುತ್ತಿರುವ ವಸತಿ ಗೃಹಗಳು, ಬಹು ಮಹಡಿಯ ಕಟ್ಟಡ ಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಅನುಪಯುಕ್ತ ದ್ರವ ಹಾಗೂ ಘನ ತ್ಯಾಜ್ಯಗಳು ನೇರವಾಗಿ ನದಿಯನ್ನು ಸೇರುವು ದರಿಂದ ನದಿಯ ಪಾವಿತ್ರ್ಯತೆ ಹಾಳಾಗುವ ಜೊತೆಯಲ್ಲಿ ನೀರಿನಾಶ್ರಯ ಹೊಂದಿರುವ ಜಲಚರಗಳು ಹಾಗೂ ಪರಿಸರದ ಪ್ರಾಣಿ ಸಂಕುಲದ ಜೀವಕ್ಕೂ ಕುತ್ತು ತರುತ್ತಿದೆ.
ಈವರೆಗೂ ಈ ಸಮಸ್ಯೆಗಳು ಪರಿಹಾರ ಕಾಣದೆ ವರ್ಷದಿಂದ ವರ್ಷಕ್ಕೆ ಉದ್ಭವಿಸುತ್ತಲೆ ಇದೆ. ನದಿಯ ಪಾವಿತ್ರ್ಯತೆ ಹಾಗೂ ಪರಿಸರದ ಉಳಿವಿಗಾಗಿ ಸಾಕಷ್ಟು ಸಾರ್ವಜನಿಕ ಹೋರಾಟ ನಡೆಸಿದರೂ, ಅದು ಕೇವಲ ಅರಣ್ಯ ರೋಧನವಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಶ್ರೀಮೂಕಾಂಬಿಕಾ ದೇವಿಯ ಭಕ್ತರು, ಮಾಧ್ಯಮ ಸ್ನೇಹಿತರು ಹಾಗೂ ಪರಿಸರಾಸಕ್ತರ ಸಲಹೆ ಪಡೆದು ಕೊಂಡು ಮಾಹಿತಿ ಹಕ್ಕಿನಲ್ಲಿ ಅನೇಕ ದಾಖಲೆಗಳನ್ನು ಪಡೆದುಕೊಂಡು, ನ್ಯಾಯಕ್ಕಾಗಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು.
ಅರ್ಜಿಗೆ ಸಂಬಂಧಿಸಿದ ದಾಖಲಿಕರಣವಾದ ಬಳಿಕ ನ್ಯಾಯಾಲಯವು ಅರ್ಜಿಯ ವಿಚಾರಣೆಗೆ ಅಂಗೀಕಾರ ನೀಡಿದ್ದು, ಪ್ರಕರಣದ ಸಂಖ್ಯೆ 125/2024(ಎಸ್ಝೆಡ್)ರಂತೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆಯ ಲಿದೆ. ವಿಚಾರಣೆಯ ಹಂತದಲ್ಲಿ ಕೊಲ್ಲೂರು ಪರಿಸರದಲ್ಲಿ ಅತಿಕ್ರಮವಾಗಿರುವ ಸರಕಾರಿ ಹಾಗೂ ಸಾರ್ವಜನಿಕ ಭೂಮಿಗಳು, ನಿಯಮ ಬಾಹಿರ ಕಟ್ಟಡಗಳು, ಅಸಮರ್ಪಕ ಒಳಚರಂಡಿ, ಪರಿಸರಕ್ಕೆ ಧಕ್ಕೆಯಾಗುವ ಸಾರ್ವಜನಿಕ ಶೌಚಾಲಯ ಗಳು ಹಾಗೂ ಇವುಗ ಳಿಂದ ಪರಿಸರದ ನೈರ್ಮಲ್ಯದ ಕುರಿತು ಆಗುತ್ತಿರುವ ಹಾನಿಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗು ವುದು. ಶ್ರೀಮೂಕಾಂಬಿಕಾ ದೇವಿಯ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಘಾಸಿಯಾಗಿರುವ ಈ ಎಲ್ಲಾ ವಿಚಾರಗಳಿಗೆ ನ್ಯಾಯಾಲಯದಿಂದ ನ್ಯಾಯ ದೊರಕಬಹುದು ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…