Featured

ಕೊಲ್ಲೂರು ನದಿಗಳ ಮಾಲಿನ್ಯ : ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ – Vishwanews24

ಕೊಲ್ಲೂರು ನದಿಗಳ ಮಾಲಿನ್ಯ : ಅರ್ಜಿ ವಿಚಾರಣೆಗೆ ಹಸಿರು ಪೀಠ ಅಂಗೀಕಾರ

ಉಡುಪಿ: ಕೊಲ್ಲೂರಿನ ನದಿಗಳ ಮಾಲಿನ್ಯ, ಪರಿಸರ ನಾಶ ಹಾಗೂ ಸರಕಾರಿ ಭೂಮಿಗಳ ಅತಿಕ್ರಮಣದ ಬಗ್ಗೆ ಸಲ್ಲಿಸಿರುವ ಅರ್ಜಿಯನ್ನು ಚೆನ್ನೈಯ ಸರ್ವೋಚ್ಚ ನ್ಯಾಯಾಲಯದ ಹಸಿರು ಪೀಠ ವಿಚಾರಣೆಗೆ ಅಂಗೀಕರಿಸಿದೆ ಎಂದು ಹರೀಶ್ ತೋಳಾರ್ ಕೊಲ್ಲೂರು ತಿಳಿಸಿದ್ದಾರೆ.

ಕೊಡಚಾದ್ರಿ ಬೆಟ್ಟಗಳಿಂದ ಹರಿದು ಬರುವ ಪುಣ್ಯ ತೀರ್ಥಗಳು ಸಂಗಮವಾಗಿ ಅಗ್ನಿ ತೀರ್ಥ, ಕಾಶಿ ತೀರ್ಥ ಹಾಗೂ ಸೌಪರ್ಣಿಕೆಯಾಗಿ ಕೊಲ್ಲೂರಿನಲ್ಲಿ ಹರಿಯುತ್ತಿದೆ. ಈ ನದಿಯ ಬಗ್ಗೆ ಭಕ್ತರಿಗೆ ಬಹಳಷ್ಟು ನಂಬಿಕೆ ಇದೆ. ಇತ್ತೀಚಿನ ಕೆಲ ವರ್ಷ ಗಳಿಂದ ಕೊಲ್ಲೂರಿನಲ್ಲಿ ತಲೆ ಎತ್ತಿರುವ ಹಾಗೂ ನಿರ್ಮಾಣವಾಗುತ್ತಿರುವ ವಸತಿ ಗೃಹಗಳು, ಬಹು ಮಹಡಿಯ ಕಟ್ಟಡ ಗಳು ಹಾಗೂ ವಾಣಿಜ್ಯ ಕಟ್ಟಡಗಳಿಂದ ಅನುಪಯುಕ್ತ ದ್ರವ ಹಾಗೂ ಘನ ತ್ಯಾಜ್ಯಗಳು ನೇರವಾಗಿ ನದಿಯನ್ನು ಸೇರುವು ದರಿಂದ ನದಿಯ ಪಾವಿತ್ರ್ಯತೆ ಹಾಳಾಗುವ ಜೊತೆಯಲ್ಲಿ ನೀರಿನಾಶ್ರಯ ಹೊಂದಿರುವ ಜಲಚರಗಳು ಹಾಗೂ ಪರಿಸರದ ಪ್ರಾಣಿ ಸಂಕುಲದ ಜೀವಕ್ಕೂ ಕುತ್ತು ತರುತ್ತಿದೆ.

ಈವರೆಗೂ ಈ ಸಮಸ್ಯೆಗಳು ಪರಿಹಾರ ಕಾಣದೆ ವರ್ಷದಿಂದ ವರ್ಷಕ್ಕೆ ಉದ್ಭವಿಸುತ್ತಲೆ ಇದೆ. ನದಿಯ ಪಾವಿತ್ರ್ಯತೆ ಹಾಗೂ ಪರಿಸರದ ಉಳಿವಿಗಾಗಿ ಸಾಕಷ್ಟು ಸಾರ್ವಜನಿಕ ಹೋರಾಟ ನಡೆಸಿದರೂ, ಅದು ಕೇವಲ ಅರಣ್ಯ ರೋಧನವಾಗಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಶ್ರೀಮೂಕಾಂಬಿಕಾ ದೇವಿಯ ಭಕ್ತರು, ಮಾಧ್ಯಮ ಸ್ನೇಹಿತರು ಹಾಗೂ ಪರಿಸರಾಸಕ್ತರ ಸಲಹೆ ಪಡೆದು ಕೊಂಡು ಮಾಹಿತಿ ಹಕ್ಕಿನಲ್ಲಿ ಅನೇಕ ದಾಖಲೆಗಳನ್ನು ಪಡೆದುಕೊಂಡು, ನ್ಯಾಯಕ್ಕಾಗಿ ಹಸಿರು ಪೀಠಕ್ಕೆ ಅರ್ಜಿ ಸಲ್ಲಿಸಲಾಗಿತ್ತು.

ಅರ್ಜಿಗೆ ಸಂಬಂಧಿಸಿದ ದಾಖಲಿಕರಣವಾದ ಬಳಿಕ ನ್ಯಾಯಾಲಯವು ಅರ್ಜಿಯ ವಿಚಾರಣೆಗೆ ಅಂಗೀಕಾರ ನೀಡಿದ್ದು, ಪ್ರಕರಣದ ಸಂಖ್ಯೆ 125/2024(ಎಸ್‌ಝೆಡ್)ರಂತೆ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರೆಯ ಲಿದೆ. ವಿಚಾರಣೆಯ ಹಂತದಲ್ಲಿ ಕೊಲ್ಲೂರು ಪರಿಸರದಲ್ಲಿ ಅತಿಕ್ರಮವಾಗಿರುವ ಸರಕಾರಿ ಹಾಗೂ ಸಾರ್ವಜನಿಕ ಭೂಮಿಗಳು, ನಿಯಮ ಬಾಹಿರ ಕಟ್ಟಡಗಳು, ಅಸಮರ್ಪಕ ಒಳಚರಂಡಿ, ಪರಿಸರಕ್ಕೆ ಧಕ್ಕೆಯಾಗುವ ಸಾರ್ವಜನಿಕ ಶೌಚಾಲಯ ಗಳು ಹಾಗೂ ಇವುಗ ಳಿಂದ ಪರಿಸರದ ನೈರ್ಮಲ್ಯದ ಕುರಿತು ಆಗುತ್ತಿರುವ ಹಾನಿಗಳನ್ನು ನ್ಯಾಯಾಲಯಕ್ಕೆ ಮನವರಿಕೆ ಮಾಡಿಕೊಡಲು ಪ್ರಯತ್ನಿಸಲಾಗು ವುದು. ಶ್ರೀಮೂಕಾಂಬಿಕಾ ದೇವಿಯ ಕೋಟ್ಯಾಂತರ ಭಕ್ತರ ಭಾವನೆಗಳಿಗೆ ಘಾಸಿಯಾಗಿರುವ ಈ ಎಲ್ಲಾ ವಿಚಾರಗಳಿಗೆ ನ್ಯಾಯಾಲಯದಿಂದ ನ್ಯಾಯ ದೊರಕಬಹುದು ಎನ್ನುವ ವಿಶ್ವಾಸವಿದೆ ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

Vishwa News 24

Recent Posts

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ -vishwanews24

ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…

7 hours ago

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ -vishwanews24

ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…

7 hours ago

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ -vishwanews24

ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್‌ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…

7 hours ago

ಕಾರ್ಕಳ : ಯಕ್ಷರಂಗಾಯಣದ ಹೆಸರನ್ನು ಬದಲಾಯಿಸಿರುವುದು ಅತ್ಯಂತ ಬೇಜವಾಬ್ದಾರಿ ಹಾಗೂ ಏಕಪಕ್ಷೀಯ ನಿರ್ಧಾರ : ಸುನಿಲ್‌ ಕುಮಾರ್‌ ಆಕ್ರೋಶ -vishwanews24

ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್‌ ಕುಮಾರ್‌ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…

10 hours ago

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ -vishwanews24

ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…

11 hours ago

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ -vishwanews24

ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…

11 hours ago