Featured

ಕೊಲ್ಲೂರು: ಭಕ್ತರ ಸೋಗಿನಲ್ಲಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳ – 4.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು – Vishwanews24

ಕೊಲ್ಲೂರು: ಭಕ್ತರ ಸೋಗಿನಲ್ಲಿ ಬ್ಯಾಗಿಗೆ ಕನ್ನ ಹಾಕಿದ ಕಳ್ಳ: 4.5 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಕುಂದಾಪುರ: ಕೊಲ್ಲೂರು ಮೂಕಾಂಬಕೆಯ ದರ್ಶನಕ್ಕೆ ಬಂದಿದ್ದ ಭಕ್ತೆಯೊಬ್ಬರ ವ್ಯಾನಿಟಿ ಬ್ಯಾಗಿಗೆ ಭಕ್ತರ ಸೋಗಿನಲ್ಲಿ ಬಂದ ಕಳ್ಳರು ಕನ್ನ ಹಾಕಿದ್ದಾರೆ.

ಮೂಲತಃ ಕೇರಳ ರಾಜ್ಯದ ಹಣಂಗೊರು ಶಾರದ ನಗರದ ನಿವಾಸಿಗಳಾದ ಪ್ರವೀಣ ಎಂಬುವರು ತನ್ನ ಪತ್ನಿ ವಾಣಿಶ್ರೀ ಹಾಗೂ ಮಕ್ಕಳೊಂದಿಗೆ ಸುರತ್ಕಲ್ ನಲ್ಲಿ ವಾಸವಾಗಿದ್ದರು. ಭಾನುವಾರ ಕೊಲ್ಲೂರು ದೇವಸ್ಥಾನಕ್ಕೆ ಬರುವಾಗ ಮನೆಯಲ್ಲಿ ಯಾರೂ ಇಲ್ಲದ ಕಾರಣ 13½ ಪವನ್ ಚಿನ್ನಾಭರಣಗಳನ್ನು ಚಿಕ್ಕ ಪರ್ಸ್ ನಲ್ಲಿ ಹಾಕಿ ವ್ಯಾನಟಿ ಬ್ಯಾಗ್ ನಲ್ಲಿ ಇಟ್ಟುಕೊಂಡು ಬಂದಿದ್ದರು. ಬೆಳಿಗ್ಗೆ 11-00 ಗಂಟೆಗೆ ದೇವರ ದರ್ಶನ ಮಾಡಿ ಬೆಳಿಗ್ಗೆ 11-30 ಗಂಟೆಗೆ ದೇವಸ್ಥಾನದ ಹೊರಗಡೆ ಬಂದಾಗ ಪ್ರವೀಣ ಅವರ ಹೆಂಡತಿಯ ವ್ಯಾನಟಿ ಬ್ಯಾಗ್ ನ ಜೀಪ್ ಓಪನ್ ಆಗಿತ್ತೆನ್ನಲಾಗಿದೆ.

ತಕ್ಷಣ ಬ್ಯಾಗ್ ಪರಿಶೀಲಿಸಿದಾಗ ಅದರಲ್ಲಿ ಚಿನ್ನಾಭರಣಗಳಿದ್ದ ಚಿಕ್ಕ ಪರ್ಸ್ ಕಳುವಾಗಿದ್ದು ಬೆಳಕಿಗೆ ಬಂದಿದೆ. ಅದಾಗಲೇ ಭಕ್ತರ ಸೋಗಿನಲ್ಲಿದ್ದ ಕಳ್ಳರು ವಾಣಿಶ್ರೀ ಬ್ಯಾಗಿಗೆ ಕನ್ನ ಹಾಕಿದ್ದರು. ಚಿಕ್ಕ ಪರ್ಸ್ ನಲ್ಲಿದ್ದ 7½ ಪವನ್ ಚಿನ್ನದ ಚೈನ್ -1, 1½ ಪವನ್ ಚಿನ್ನದ ಬಳೆ -2 ಒಟ್ಟು 3 ಪವನ್, 1½ ಪವನ್ ಚಿನ್ನದ ಚೈನ್ -1, ½ ಪವನ್ ಚಿನ್ನದ ಬಳೆ-1, 4 ಜೊತೆ ಚಿನ್ನದ ಕಿವಿ ಓಲೆ ಒಟ್ಟು -1 ಪವನ್ ಎಲ್ಲಾ ಒಟ್ಟು 13½ ಪವನ್ (108 ಗ್ರಾಂ) ಸೇರಿದಂತೆ ಒಟ್ಟು ಅಂದಾಜು ಮೌಲ್ಯ 4 ಲಕ್ಷದ 75 ಸಾವಿರ ರೂಪಾಯಿ ಚಿನ್ನಾಭರಣ ಸ್ವತ್ತುಗಳನ್ನು ಕದ್ದೊಯ್ದಿದ್ದಾರೆ. ಈ ಬಗ್ಗೆ ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿ – vishwanews24

ಕ್ವಾರಿ ದುರಂತ : ಅಧಿಕೃತ ವರದಿ ಪಡೆದ ಬಳಿಕ ಅಗತ್ಯ ಕ್ರಮಗಳ ಬಗ್ಗೆ ತೀರ್ಮಾನ: ಸಿಎಂ ಡಿ.ಕೆ.ಶಿವಕುಮಾರ್ ಬೆಂಗಳೂರು: “ಮಾಗಡಿ…

5 minutes ago

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ – vishwanews24

ಅಬುಧಾಬಿಯಲ್ಲಿ ಲೋಕೋ ಪೈಲಟ್ ಆಗಿ ಕೊಡಗಿನ ರಿಯಾಝ್ ಮಡಿಕೇರಿ : ಯುನೈಟೆಡ್ ಅರಬ್ ಎಮಿರೇಟ್ಸ್‌ನಲ್ಲಿ ಆರಂಭವಾದ 'ಇತ್ತಿಹಾದ್' ರೈಲು ಸೇವೆಯ…

10 minutes ago

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು  – vishwanews24

ಮಂಜನಾಡಿ ಮನೆ ಕುಸಿತ ದುರಂತ ; ಎರಡೂ ಕಾಲುಗಳನ್ನು ಕಳಕೊಂಡ ಅಶ್ವಿನಿಗೆ ಕೃತಕ ಕಾಲುಗಳ ಜೋಡಣೆಗೆ 23 ಲಕ್ಷ ನೆರವು …

44 minutes ago

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ – vishwanews24

ಮಂಗಳೂರು: ತಡೆಗೋಡೆ ಕುಸಿದು ಬಿದ್ದು ಮೂವರು ಮೃತ್ಯು; 5 ಲಕ್ಷ ರೂ.ಗಳ ಪರಿಹಾರ ಮೊತ್ತದ ಚೆಕ್‌ ವಿತರಣೆ ಮಂಗಳೂರು: ತಡೆಗೋಡೆ…

2 hours ago

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ರಿಯಾಕ್ಷನ್ – vishwanews24

ಡಿವಿ ಸದಾನಂದಗೌಡ ಆಡಿಯೋ ವೈರಲ್ ಬಗ್ಗೆ ವಿಜಯೇಂದ್ರ ಫಸ್ಟ್ ರಿಯಾಕ್ಷನ್ ಆಡಿಯೋ ಧ್ವನಿ ತಮ್ಮದಲ್ಲ ಎಂದು ಸದಾನಂದಗೌಡರೇ ಹೇಳಿದ್ದಾರೆ ;…

2 hours ago

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ – vishwanews24

ಬೆಳಗಾವಿ : ಜುಲೈ 10 ರಿಂದ ಆರ್‌ಎಸ್‌ಎಸ್ ಅಖಿಲ ಭಾರತೀಯ ಪ್ರಾಂತ ಪ್ರಚಾರಕರ ವಾರ್ಷಿಕ ಸಭೆ ಜು.6 ಕ್ಕೆ ಬೆಳಗಾವಿಗೆ…

2 hours ago