Featured

ಕೊಲ್ಲೂರು : ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪು ಹೆಸರಿನಲ್ಲಿ ನಿತ್ಯ ಸಲಾಂ ಮಂಗಳಾರತಿ :  ಹೆಸರು ಬದಲಾಯಿಸುವಂತೆ ದೇವಾಲಯಕ್ಕೆ ವಿಎಚ್‌ಪಿ ಮನವಿ – Vishwanews24

ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತ..

ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ

ಸಲಾಂ ಹೆಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕು..

ಏನಿದು ಸಲಾಂ ಮಂಗಳಾರತಿ ?

ಕೊಲ್ಲೂರು : ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ನಡೆಯುತ್ತಿರುವ ಸಲಾಂ ಮಹಾಮಂಗಳಾರತಿಯ ಹೆಸರನ್ನು ತೆಗೆಯ ಬೇಕೆಂದು, ಧಾರ್ಮಿಕ ದತ್ತಿ ಇಲಾಖೆ ಹಾಗೂ ಕ್ಷೇತ್ರದ ಆಡಳಿತ ಮಂಡಳಿಗೆ ವಿಶ್ವ ಹಿಂದೂ ಪರಿಷದ್ ಮನವಿ ಸಲ್ಲಿಸಿದೆ.

ಸಲಾಂ ಎಂಬ ಹೆಸರಿನಲ್ಲಿ ಪ್ರತಿ ನಿತ್ಯ ದೇವಿಗೆ ಮಹಾಮಂಗಳಾರತಿಯಾಗುವುದು ಗುಲಾಮಗಿರಿಯ ಸಂಕೇತವಾಗಿದೆ. ಆದರಿಂದ ತಕ್ಷಣ ಕ್ಷೇತ್ರದ ವ್ಯವಸ್ಥಾಪನಾ ಮಂಡಳಿ ಮತ್ತು ಧಾರ್ಮಿಕ ದತ್ತಿ ಇಲಾಖೆ ಇದನ್ನು ಗಂಭೀರವಾಗಿ ಪರಿಗಣಿಸಿ ಸಲಾಂ ಹೆಸರನ್ನು ತೆಗೆದು ಕೇವಲ ದೇವರ ಹೆಸರಲ್ಲಿ ಮಹಾಮಂಗಳಾರತಿ ಮಾಡಲು ಕ್ರಮತೆಗೆದುಕೊಳ್ಳಬೇಕೆಂದು ಶ್ರೀಕ್ಷೇತ್ರದ ಕೋಟ್ಯಂತರ ಭಕ್ತರ ಪರವಾಗಿ ವಿಶ್ವ ಹಿಂದೂ ಪರಿಷತ್ ಆಗ್ರಹಿಸುತ್ತದೆ ಎಂದು ವಿಶ್ವ ಹಿಂದೂ ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‍ವೆಲ್ ನೇತೃತ್ವದಲ್ಲಿ ಸದಸ್ಯರು ದೇವಾಲಯದ ಅಧಿಕಾರಿಗಳ ಬಳಿ ಆಗ್ರಹಿಸಿದೆ.

ಕೊಲ್ಲೂರು ಮೂಕಾಂಬಿಕಾ ದೇವಸ್ಥಾನವು ಐತಿಹಾಸಿಕ ಹಿನ್ನೆಲೆ ಇರುವ ಪವಿತ್ರ ಕ್ಷೇತ್ರ ಭಾರತದ 108 ಶಕ್ತಿ ಪೀಠಗಳಲ್ಲಿ ಒಂದು. ಕೊಲ್ಲೂರು ಮೂಕಾಂಬಿಕಾ ಕ್ಷೇತ್ರ ಆದಿ ಶಂಕರಾಚಾರ್ಯರು ಮೂಕಾಂಬಿಕಾ ತಾಯಿಯನ್ನು ಇಲ್ಲಿ ನೆಲೆಗೊಳಿಸಿದ್ದಾರೆ. ಇಂತಹ ಪುಣ್ಯ ಕ್ಷೇತ್ರದಲ್ಲಿ ಒಬ್ಬ ಕ್ರೂರಿ, ಮತಾಂಧ, ಹಿಂದೂ ವಿರೋಧಿ, ಕನ್ನಡ ವಿರೋಧಿ ಸಾವಿರಾರು ಹಿಂದುಗಳನ್ನು ನರಮೇಧ ಮಾಡಿ, ನೂರಾರು ದೇವಸ್ಥಾನಗಳನ್ನು ದ್ವಂಸಗೊಳಿಸಿದಂತಹ ಟಿಪ್ಪುವಿನ ಹೆಸರಿನಲ್ಲಿ ಪ್ರತೀ ದಿನ ರಾತ್ರಿ 8 ಗಂಟೆಗೆ ದೇವಿ ಮೂಕಾಂಬಿಕೆಗೆ ಸಲಾಂ ಎಂಬ ಹೆಸರಿನಲ್ಲಿ ಮಹಾಮಂಗಳಾರತಿಯಾಗುವುದು ಕ್ಷೇತ್ರದ ಪಾವಿತ್ರತೆಗೆ ಧಕ್ಕೆ ತರುತ್ತಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ ನೆನಪಿನಲ್ಲಿ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ.

ಏನಿದು ಸಲಾಂ ಮಂಗಳಾರತಿ?
ಟಿಪ್ಪು ಸುಲ್ತಾನ್ ಆಗಮಿಸಿದ ನೆನಪಿನಲ್ಲಿ ಇಂದಿಗೂ ನಿತ್ಯ ಕೊಲ್ಲೂರು ದೇವಾಲಯದಲ್ಲಿ ಸಲಾಂ ಮಂಗಳಾರತಿ ನಡೆಯುತ್ತಿದೆ. ಶ್ರೀ ಕ್ಷೇತ್ರಕ್ಕೆ 1765ರಿಂದ 1795ರ ನಡುವೆ ಟಿಪ್ಪು ಸುಲ್ತಾನ್ ಭೇಟಿ ನೀಡಿ, ಪೂಜೆ ಸಲ್ಲಿಸಿದ್ದ. ದೇವಿ ದರ್ಶನ ಮಾಡುವಾಗ ಮೂಲ ವಿಗ್ರಹಗಳು ಟಿಪ್ಪು ಸುಲ್ತಾನನಿಗೆ ಸ್ಪಷ್ಟವಾಗಿ ಕಾಣಿಸಿರಲಿಲ್ಲವಂತೆ.

ಟಿಪ್ಪು ಸುಲ್ತಾನ್ ಭೇಟಿ ಬಳಿಕ ಇಂದಿನವರೆಗೂ ಪ್ರತಿ ದಿನ ರಾತ್ರಿ 8 ರಿಂದ 8:15ರ ನಡುವೆ ಪರಿವಾರ ದೇವತೆಗಳ ಪೂಜೆ ಬಳಿಕ ನಡೆಯುವ ಮಂಗಳಾರತಿ (ಸುತ್ತು ಸಲಾಂ) ಪೂಜೆಗೆ ಸಲಾಂ ಮಂಗಳಾರತಿ ಎನ್ನುವ ಹೆಸರು ಉಳಿದಿದೆ.

Vishwa News 24

Recent Posts

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ – vishwanews24

ವಯೋವಂದನ ಯೋಜನೆ : ವೇದಿಕೆಯ ನೇತೃತ್ವಕ್ಕೆ ಸಮಾಜದ ಸಹಭಾಗಿತ್ವ ಅಗತ್ಯ : ಸಿ ಎಂ ಗುಜ್ಜಾಡಿ ಪ್ರಭಾಕರ್ ನಾಯಕ್ ಜಿ…

30 minutes ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ‘ನುವಾ’ ವಜ್ರಾಭರಣ ಅನಾವರಣ ಉಡುಪಿ: ಮಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಮೈನ್ ಬ್ರಾಂಡಿನ…

34 minutes ago

ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ ವಿರುದ್ಧ ಅವಹೇಳನಕಾರಿ ಹೇಳಿಕೆ: ವಿಠಲ ಗೌಡ ವಿರುದ್ಧ ಅರೆಸ್ಟ್​​​​​​ ವಾರಂಟ್ – vishwanews24

ಧರ್ಮಸ್ಥಳ ಪ್ರಕರಣ : ವಿಠಲ್‌ ಗೌಡ ವಿರುದ್ಧ ಅರೆಸ್ಟ್‌ ವಾರಂಟ್:‌ ಪೊಲೀಸರಿಂದ ಹುಡುಕಾಟ ಬೆಳ್ತಂಗಡಿ: ಧರ್ಮಸ್ಥಳ ಮತ್ತು ವೀರೇಂದ್ರ ಹೆಗ್ಗಡೆ…

2 days ago

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ – vishwanews24

ಕನ್ನಡ ಸಿನಿಮಾ ನಿರ್ಮಾಪಕ ಬಾ.ಮಾ ಹರೀಶ್ ಪುತ್ರ ಹೃದಯಾಘಾತದಿಂದ ನಿಧನ ಬೆಂಗಳೂರು: ಕನ್ನಡ ಸಿನಿಮಾ ರಂಗದ ಖ್ಯಾತ ನಿರ್ಮಾಪಕ ಬಾ.ಮಾ.…

2 days ago

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ – vishwanews24

ರಾಮನ ಹೆಸರಿನಲ್ಲಿ ನಡೆದ ಪ್ರತಿಯೊಂದು ರೂಪಾಯಿಯ ಲೆಕ್ಕದಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ: ಬಿ.ಕೆ.ಹರಿಪ್ರಸಾದ್ ಬೆಂಗಳೂರು: ಶ್ರೀರಾಮನನ್ನು ರಾಜಕೀಯವಾಗಿ ಬಳಸಿಕೊಡವರು, ಶ್ರೀರಾಮನ ಹೆಸರಿನಲ್ಲಿ ಒಂದೊಂದು…

2 days ago

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು – vishwanews24

ಉಡುಪಿ: 36.29 ಲಕ್ಷ ರೂ. ಮೌಲ್ಯದ ಮಾದಕ ವಸ್ತುಗಳನ್ನ ನಾಶಪಡಿಸಿದ ಪೊಲೀಸರು ಉಡುಪಿ: ಕಠಿಣ ಕಾನೂನು ಕ್ರಮ ಮತ್ತು ಜಾಗೃತಿ…

2 days ago