Featured

ಕೊಲ್ಲೂರು ಮೂಕಾಂಬಿಕೆ ತಾಯಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ – vishwanews24

ಕೊಲ್ಲೂರು ಮೂಕಾಂಬಿಕೆ ತಾಯಿಗೆ 4 ಕೋಟಿ ಮೌಲ್ಯದ ವಜ್ರದ ಕಿರೀಟ ಅರ್ಪಿಸಿದ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ

ಉಡುಪಿ: ಕೊಲ್ಲೂರು ಮೂಕಾಂಬಿಕೆ ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು  ಅರ್ಪಿಸಿದ್ದಾರೆ.

ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.

ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.

Vishwa News 24

Recent Posts

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

10 hours ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

11 hours ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

11 hours ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

12 hours ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

13 hours ago

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ – vishwanews24

ಕೇಂದ್ರ ಸರ್ಕಾರ ತೈಲ ಬೆಲೆ ಏರಿಸುವ ಮೂಲಕ ನಮ್ಮನ್ನ ಕೊಲೆ ಮಾಡ್ತಿದೆ :  ಡಿಕೆಶಿ ಬೆಂಗಳೂರು : ಕೇಂದ್ರ ಸರ್ಕಾರ…

13 hours ago