ಉಡುಪಿ: ಕೊಲ್ಲೂರು ಮೂಕಾಂಬಿಕೆ ತಾಯಿಗೆ ಖ್ಯಾತ ಸಂಗೀತ ನಿರ್ದೇಶಕ, ಸ್ವರ ಮಾಂತ್ರಿಕ ಇಳಯರಾಜ ಅವರು 4 ಕೋಟಿ ರೂ. ಮೌಲ್ಯದ ವಜ್ರದ ಕಿರೀಟವನ್ನು ಅರ್ಪಿಸಿದ್ದಾರೆ.
ಕೊಲ್ಲೂರು ಮೂಕಾಂಬಿಕೆಯ ಭಕ್ತರಾಗಿರುವ ಇಳಯರಾಜ ಅವರು, ಈ ಹಿಂದೆಯೂ ಮೂಕಾಂಬಿಕೆ ದೇವಿಗೆ ಬಗೆಬಗೆಯ ಆಭರಣ ನೀಡಿ ಭಕ್ತಿ ತೋರಿದ್ದರು. ಈ ಬಾರಿ ದೇವಿಗೆ ವಜ್ರದ ಕಿರೀಟ ಸಹಿತ ಆಭರಣಗಳನ್ನು ಅರ್ಪಿಸಿದ್ದಾರೆ. ಜೊತೆಗೆ ವೀರಭದ್ರ ದೇವರಿಗೆ ರಜತ ಕಿರೀಟ ಮತ್ತು ಖಡ್ಗ ಸಮರ್ಪಿಸಿದ್ದಾರೆ.
ಆಭರಣ ಅರ್ಪಿಸುವ ಮುನ್ನ ದೇಗುಲದಲ್ಲಿ ಮೆರವಣಿಗೆ ಮಾಡಲಾಯಿತು. ಈ ವೇಳೆ ದೇಗುಲದ ಆಡಳಿತ ಮಂಡಳಿ ಹಾಗೂ ಅರ್ಚಕರು ಭಾಗಿಯಾಗಿದ್ದರು. ಕೋಟ್ಯಂತರ ಮೌಲ್ಯದ ಆಭರಣಗಳನ್ನು ಅರ್ಪಿಸಿ ಇಳೆಯರಾಜ ಅವರು ಭಾವುಕರಾಗಿದ್ದು, ಮೂಕಾಂಬಿಕೆಯಿಂದ ತನ್ನ ಜೀವನದಲ್ಲಿ ಪವಾಡ ನಡೆದಿದೆ ಎಂದಿದ್ದಾರೆ. ಬಳಿಕ ದೇಗುಲದ ವತಿಯಿಂದ ಮಹಾದಾನಿ ಇಳಯರಾಜ ಅವರಿಗೆ ಗೌರವಾರ್ಪಣೆ ಮಾಡಲಾಯಿತು.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…