ವಾರಾಣಾಸಿ,- ವಿರೋಧ ಪಕ್ಷದವರು ನನ್ನ ವಿರುದ್ಧ ಮಾಡುವ ಆರೋಪಗಳು ಮತ್ತು ಟೀಕೆಗಳಿಗೆ ತಲೆ ಕೆಡಿಸಿಕೊಳ್ಳಬೇಡಿ ಕೊಳಕು ಪರಿಸರ ಮತ್ತು ಕೆಸರಿನಲ್ಲೇ ಕಮಲ ಅರಳುತ್ತದೆ ಎಂಬುದನ್ನು ನೀವು ಮರೆಯಬೇಡಿ ಎಂದು ಪ್ರಧಾನಿ ನರೇಂದ್ರ ಮೋದಿ ಪಕ್ಷದ ಕಾರ್ಯಕರ್ತರಿಗೆ ಹೇಳಿದ್ದಾರೆ.
ವಾರಾಣಾಸಿಯಲ್ಲಿ ಬಿಜೆಪಿ ಹಿರಿಯ ಕಾರ್ಯಕರ್ತರೊಂದಿಗೆ ಮಾತನಾಡಿದ ಮೋದಿ ಈ ದೇಶದಲ್ಲಿ ನಡೆಯುತ್ತಿರುವ ಲೋಕಸಭಾ ಚುನಾವಣೆಗಳಲ್ಲಿ ಸ್ಪರ್ಧಿಸುವರ ಅಭ್ಯರ್ಥಿಗಳು ಸಹ ನಮ್ಮ ಮಿತ್ರರರೇ ಹೊರತು ಶತ್ರುಗಳಲ್ಲ, ಅವರು ಬೇರೆ ಪಕ್ಷದಲ್ಲಿ ಇದ್ದಾರೆ ಅಷ್ಟೆ ಎಂದು ತಿಳಿಸಿದರು.
ನನ್ನ ಬಗ್ಗೆ ವ್ಯಾಪಕ ಟೀಕೆಗಳು, ಆರೋಪಗಳು ವ್ಯಕ್ತವಾಗುತ್ತಿದೆ. ಈ ಬಗ್ಗೆ ನೀವು ಕೋಪಗೊಳ್ಳಬೇಡಿ ಮತ್ತು ಚಿಂತಿಸ ಬೇಡಿ ಇಂತಹ ಟೀಕೆಗಳನ್ನು ನನ್ನ ಸಾಮಾಜಿಕ ಜಾಲತಾಣಕ್ಕೆ ಫೋಸ್ಟ್ ಮಾಡಿಬಿಡಿ ಎಂದು ಕಾರ್ಯಕರ್ತರಿಗೆ ಪ್ರಧಾನಿ ಸಲಹೆ ಮಾಡಿದರು.
ನಾನು ಶ್ರೀಮಂತಿಕೆ ಹಿನ್ನೆಲೆಯಿಂದ ಬಂದವನಲ್ಲ, ನಾನೊಬ್ಬ ನಿಮ್ಮಂತೆಯೇ ಸಾಮಾನ್ಯ ಕಾರ್ಯಕರ್ತ. ನಿಮ್ಮೆಲ್ಲರ ಪರಿಶ್ರಮ ಮತ್ತು ಸಹನೆಗೆ ಬೆಲೆ ಕಟ್ಟಲಾಗದು, ಕಾರ್ಯಕರ್ತರು ಮತ್ತು ಜನರು ಪಕ್ಷ ಮತ್ತು ನನ್ನ ಮೇಲೆ ತೋರಿರುವ ಪ್ರೀತಿ, ವಿಶ್ವಾಸಕ್ಕೆ ನಾನು ತುಂಬಾ ಆಭಾರಿಯಾಗಿದ್ದೇನೆ ಎಂದು ಮೋದಿ ಭಾವೋದ್ವೇಗದಿಂದ ನುಡಿದರು.
ಕೋಳಿ ಫಾರ್ಮ್ ಹೆಸರಲ್ಲಿ ಡ್ರಗ್ಸ್ ಫ್ಯಾಕ್ಟರಿ : ಮೂರು ರಾಜ್ಯಗಳಿಗೆ ಸಪ್ಲೈ ಮಾಡ್ತಿದ್ದ 7 ಮಂದಿ ಪೊಲೀಸರ ವಶಕ್ಕೆ ಬೆಳಗಾವಿ:…
ಮಂಗಳೂರು: ಅಕ್ರಮ ಗೋ ಸಾಗಾಟ : 23 ಗೋವುಗಳ ರಕ್ಷಣೆ ಮಂಗಳೂರು: ನಗರದ ಕುಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅಕ್ರಮವಾಗಿ…
ಬ್ರಹ್ಮಾವರ: ತಂದೆ-ತಾಯಿಯನ್ನೇ ಸುತ್ತಿಗೆಯಿಂದ ಹೊಡೆದು ಹತ್ಯೆಗೈದ ಮಗ ಬ್ರಹ್ಮಾವರ: ಕ್ಷುಲ್ಲಕ ವಿಚಾರಕ್ಕೆ ಸಂಬಂಧಿಸಿದಂತೆ ಮಗನೇ ತಂದೆ-ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆಗೈದಿರುವ…
ಡೇವಿಡ್ ಡಿಸೋಜಾ ಕೊಲೆ ಪ್ರಕರಣ: ಕುಖ್ಯಾತ ಗ್ಯಾಂಗ್‌ಸ್ಟರ್ ಬಂಧನ ; ಪರಾರಿಯಾಗಲು ಯತ್ನಿಸಿದ ಆರೋಪಿ ಕಾಲಿಗೆ ಪೊಲೀಸರಿಂದ ಗುಂಡೇಟು ಉಡುಪಿ:…
ಕಾಪು : ಭಾರತ್ ಜೋಡೋ ಮತ್ತು ಗ್ಯಾರಂಟಿ ಯೋಜನೆಗಳ ಮಾಹಿತಿ ಕಾರ್ಯಾಗಾರ ಕರ್ನಾಟಕ ಸರ್ಕಾರದ ಯೋಜನೆಗಳಾದ ಭಾರತ್ ಜೋಡೋ ಮತ್ತು…
ದೇಶ ವಿರೋಧಿ ಚಟುವಟಿಕೆ ಮಾಡಿದಾಗ ಆರ್‌ಎಸ್‌ಎಸ್ ವಿರುದ್ಧ ಮಾತನಾಡಬೇಕಾಗುತ್ತೆ : ಬಿ.ಕೆ. ಹರಿಪ್ರಸಾದ್ ಬೀದರ್: ‘ದೇಶ ವಿರೋಧಿ ಚಟುವಟಿಕೆ ಮಾಡಿದಾಗ…