Featured

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ – vishwanews24

ಕೊಳಲು ವಾದನದೊಂದಿಗೆ ಬ್ಯಾಕ್ ಸ್ವಿಮ್: ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ

ಮಂಗಳೂರು: ಬಹುಮುಖ ಪ್ರತಿಭೆಯ ಸಂಗೀತ ಶಿಕ್ಷಕ ರುಬೆನ್ ಜೇಸನ್ ಮಚಾದೊ ಅವರು ಬುಧವಾರ ಬೆಳಗ್ಗೆ ನಗರದ ಸಂತ ಅಲೋಶಿಯೆಸ್ ಪರಿಗಣಿತ ವಿವಿಯ ಈಜು ಕೊಳದಲ್ಲಿ ಕೊಳಲನ್ನು ನುಡಿಸುತ್ತಾ ಸುಮಾರು 700 ಮೀಟರ್‌ಗೂ ಅಧಿಕ ದೂರವನ್ನು ಹಿಂದಕ್ಕೆ ಈಜುತ್ತಾ ಸಾಗುವ ಮೂಲಕ ಬ್ಯಾಕ್ ಸ್ಟ್ರೋಕ್ ಸ್ವಿಮ್‌ನಲ್ಲಿ ಅಪೂರ್ವ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್ ದಾಖಲೆ ಬರೆದಿದ್ದಾರೆ.

29ರ ಹರೆಯದ ಸಂಗೀತಗಾರ ಮಚಾದೊ ಸ್ವಿಮ್ಮಿಂಗ್ ಪೂಲ್‌ನಲ್ಲಿ ಬುಧವಾರ ಬೆಳಗ್ಗೆ 10 ಗಂಟೆಗೆ ಕೊಳಲು ವಾದನದೊಂದಿಗೆ ಈಜು ಆರಂಭಿಸಿ 5 ಸುತ್ತು ಮತ್ತು 75 ಮೀಟರ್‌ಗಳನ್ನು ಪೂರ್ಣಗೊಳಿಸಿ ದಾಖಲೆ ಬರೆದರು.

‘ಗೋಲ್ಡನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್’ (ಜಿಬಿಡಬ್ಲ್ಯುಆರ್) ಸಂಸ್ಥೆಯು ಇವರ ಅಪೂರ್ವ ಸಾಧನೆಯನ್ನು ಗುರುತಿಸಿ, ಅಧಿಕೃತ ಪ್ರಮಾಣಪತ್ರವನ್ನು ಪ್ರದಾನ ಮಾಡಿದೆ.

ನ್ಯಾಶನಲ್ ಇನ್‌ಸ್ಟಿಟ್ಯೂಟ್ ಆಫ್ ವಾಟರ್ ಸೇಫ್ಟಿ (ಎನ್‌ಐಡಬ್ಲ್ಯುಎಸ್) ತಂಡದ ಅಧೀಕೃತ ಲೈಫ್ ಸೇವರ್‌ ಆಗಿರುವ ರುಬೆನ್ ರುಬೆನ್ ಜೇಸನ್ ಮಚಾದೊ ಅವರು ಹಿಂದೂಸ್ತಾನಿ ಕೊಳಲು (ಫ್ಲೂಟ್) ಮತ್ತು ವೆಸ್ಟರ್ನ್ ಫ್ಲೂಟ್‌ನಲ್ಲಿ ಪರಿಣತರು. ಸ್ಯಾಕ್ಸೋಫೋನ್, ಗಿಟಾರ್ ಮತ್ತು ಇತರ ವಾದ್ಯಗಳನ್ನೂ ನುಡಿಸುವುದರಲ್ಲಿ ಖ್ಯಾತರಾಗಿದ್ದಾರೆ.

ಬಾಲಿವುಡ್‌ಗೆ ಚಿತ್ರಗಳಿಗೆ ಸಂಗೀತ: ರುಬೆನ್ ಜೇಸನ್ ಮಚಾದೊ ಬಾಲಿವುಡ್, ಸ್ಯಾಂಡಲ್‌ವುಡ್ ಮತ್ತು ಕೋಸ್ಟಲ್‌ ಚಲನಚಿತ್ರಗಳಿಗೆ ಸಂಗೀತ ನೀಡಿದ್ದಾರೆ. ಭಾರತದಾದ್ಯಂತ ಪ್ರಮುಖ ಕಾರ್ಯಕ್ರಮಗಳಲ್ಲಿ ಪ್ರದರ್ಶನ ನೀಡಿರುವ ಅವರು 2016ರಲ್ಲಿ ನಡೆದ ವರ್ಲ್ಡ್ ಕಲ್ಚರ್ ಫೆಸ್ಟಿವಲ್‌ನಲ್ಲಿ 150ಕ್ಕೂ ಹೆಚ್ಚು ದೇಶಗಳ ಸಂಗೀತಗಾರರೊಂದಿಗೆ ಗಿನ್ನೆಸ್ ವಿಶ್ವ ದಾಖಲೆ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.

 

ಸಂತ ಅಲೋಸಿಯಸ್ ಕಾಲೇಜಿನಲ್ಲಿ ಸುಮಾರು ಎರಡು ವರ್ಷಗಳ ಕಾಲ ಪತ್ರಿಕೋದ್ಯಮ ವಿಭಾಗದಲ್ಲಿ ಉಪನ್ಯಾಸಕರಾಗಿ ಸೇವೆ ಸಲ್ಲಿಸಿದ್ದ ರುಬೆನ್ ಕೊಳಲು ವಾದನದಲ್ಲಿ 15 ವರ್ಷಗಳ ಅನುಭವ ಹೊಂದಿದ್ದಾರೆ.

 

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

18 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

18 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

18 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

19 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

20 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago