ಬೆಂಗಳೂರು: ಕೊವೀಡ್ -19 ವೈರಸ್ ನಂತಹ ಸಂಕಷ್ಟದ ಸಮಯದಲ್ಲಿ ಒಂದು ವೇಳೆ ರಾಜ್ಯದಲ್ಲಿ ಏನಾದರೂ ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಸೋಂಕಿಗೆ ತುತ್ತಾಗಿ 50,000ಕ್ಕೂ ಹೆಚ್ಚು ಜನ ಸಾವನ್ನಪ್ಪುತ್ತಿದ್ದರು ಎಂದು ಮಾಜಿ ಸಚಿವ ಎಚ್.ವಿಶ್ವನಾಥ್ ಹೇಳಿದರು.
ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿ ಮಾತನಾಡಿದ, ಅವರು ಸಮ್ಮಿಶ್ರ ಸರ್ಕಾರಕ್ಕೆ ಸಮನ್ವಯತೆಯೇ ಇರಲಿಲ್ಲ ಇನ್ನು ಕೊವೀಡ್ ಹೇಗೆ ನಿಯಂತ್ರಿಸುತ್ತಿದ್ದರು. ಬಿಜೆಪಿ ಅಧಿಕಾರಕ್ಕೆ ಬಂದ ಕಾರಣ ಸಮ್ಮಿಶ್ರ ಸರ್ಕಾರ ಮಾಡುತ್ತಿದ್ದ ದೊಡ್ಡ ಅನಾಹುತ ತಪ್ಪಿತು ಎಂದು ಹೇಳಿದರು.
ಸಮ್ಮಿಶ್ರ ಸರ್ಕಾರವಿದ್ದಿದ್ದರೆ ಕೇಂದ್ರ ಸರ್ಕಾರದ ಯಾವುದೇ ಆದೇಶ ಪಾಲನೆ ಮಾಡದೇ ಉಲ್ಲಂಘನೆ ಮಾಡುತ್ತಿದ್ದರು. ಪ್ರಧಾನಿ ಮೋದಿ ಹೇಳಿದರು ಅಂತಾ ಎಲ್ಲವನ್ನೂ ಮಾಡಿಬಿಡಬೇಕೋ ಎಂದು ಪ್ರಶ್ನಿಸುತ್ತಿದ್ದರು. ಸಮ್ಮಿಶ್ರ ಸರ್ಕಾರವಿದ್ದು ಜಮೀರ್ ಅಹಮ್ಮದ್ ಸಚಿವರಾಗಿರುತ್ತಿದ್ದರೆ ಈಗ ಏನಾಗುತ್ತಿತ್ತು? ಕಾಂಗ್ರೆಸ್ ಪಕ್ಷ ಮುಸ್ಲಿಮರ ಪಕ್ಷಪಾತಿ. ಹೀಗಾಗಿ ಯಾರನ್ನೂ ನಿಯಂತ್ರಣಕ್ಕೆ ತೆಗೆದುಕೊಳ್ಳಲು ಸಾಧ್ಯವಾಗುತ್ತಿರಲಿಲ್ಲ. ಕರ್ನಾಟಕದ ಸ್ಥಿತಿ ಅಮೆರಿಕದ ಕೊರೊನಾ ಸ್ಥಿತಿಯಂತೆ ಆಗಿಬಿಡುತ್ತಿತ್ತು. ಸಮ್ಮಿಶ್ರ ಸರ್ಕಾರದ ಪತನದಿಂದ ಅದು ತಪ್ಪಿದೆ ಎಂದು ಹೇಳಿದರು.
ಮೃತ ಮಹಿಳೆಯರ ಬೆತ್ತಲೆ ಫೋಟೋ ತೆಗೆದು ವಿಕೃತಿ : ವರದಿ ಕೇಳಿದ ರಾಜ್ಯ ಮಹಿಳಾ ಆಯೋಗ ಬೆಂಗಳೂರು: ಬೀದರ್‌ನ ಬ್ರಿಮ್ಸ್ ಆಸ್ಪತ್ರೆಯಲ್ಲಿ…
ಉಡುಪಿ: ಕೇಂದ್ರ ಸರಕಾರದ ಜನವಿರೋಧಿ ನೀತಿ ವಿರುದ್ಧ ಜಿಲ್ಲಾ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಉಡುಪಿ: ಕೇಂದ್ರ ಸರಕಾರದ ಜನವಿರೋಧಿ…
ಮಂಗಳೂರು: ಚಲಿಸುತ್ತಿದ್ದ ಬಸ್ಸಿನಿಂದ ಬಿದ್ದ ತಾಯಿ-ಮಗುವಿನ ರಕ್ಷಣೆಗೆ ಧಾವಿಸಿದ ಸಿಟಿ ಬಸ್ ಸಿಬ್ಬಂದಿ.. ಪ್ರಯಾಣಿಕರನ್ನು ಬಸ್ಸಿನಿಂದ ಇಳಿಸಿ ಗಾಯಗೊಂಡ ತಾಯಿ,…
ಮಂಗಳೂರು- ಸೂರತ್ ವಿಶೇಷ ರೈಲು ಇನ್ನು ಮುಂದೆ ವಾರಕ್ಕೆ ಎರಡು ದಿನ ನಿರಂತರ ಸಂಚಾರ ಉಡುಪಿ: ಮಂಗಳೂರು- ಸೂರತ್ ನಡುವೆ…
ಕೊಂಕಣ ರೈಲ್ವೇ: ಟಿಕೆಟ್ ತಪಾಸಣೆ ಕಾರ್ಯಾಚರಣೆ; 2025-26ರಲ್ಲಿ 27.68 ಕೋ.ರೂ. ದಂಡ ವಸೂಲಿ ಉಡುಪಿ: ಟಿಕೆಟ್ ಇಲ್ಲದೆ ಹಾಗೂ ಅನಧಿಕೃತವಾಗಿ…
ಯುವಕ ನಾಪತ್ತೆ; ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು ಮಂಗಳೂರು: 23 ವರ್ಷದ ಯುವಕನೊಬ್ಬ ನಾಪತ್ತೆಯಾಗಿರುವ ಕುರಿತು ಕೊಣಾಜೆ ಪೊಲೀಸ್…