ಚಿಕ್ಕಮಗಳೂರು: ಲೋಕಸಭಾ ಚುನಾವಣಾ ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತ ಹಾಗೂ ಚುರುಮುರಿ ವ್ಯಾಪಾರಿಯೋರ್ವ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟಾ ಶ್ರೀನಿವಾಸ ಪೂಜಾರಿಗೆ 25,000 ಹಣ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ.
ಕೋಟಾ ಶ್ರೀನಿವಾಸ ಪೂಜಾರಿಇಂದು ಬೆಳಗ್ಗೆಯಿಂದ ಚಿಕ್ಕಮಗಳೂರು ನಗರದಲ್ಲಿ ಚುನಾವಣಾ ಪ್ರಚಾರ ಕೈಗೊಂಡಿದ್ದಾರೆ. ಈ ವೇಳೆ ಪ್ರಚಾರಕ್ಕೆಂದು ಹೋದಾಗ ಚಿಕ್ಕಮಗಳೂರು ಹೊರವಲಯದ ತೇಗೂರು ಸರ್ಕಲ್ ನಲ್ಲಿನ ಚುರುಮುರಿ ವ್ಯಾಪಾರಿ ಲೊಕೇಶ್ ಬಾಬು ಅವರು ಕೋಟಾಗೆ 25 ಸಾವಿರ ಹಣವನ್ನ ಚುನಾವಣಾ ಖರ್ಚಿಗಾಗಿ ನೀಡಿ ಗೆಲ್ಲುವಂತೆ ಶುಭ ಹಾರೈಸಿದ್ದಾರೆ. ಹಣದ ಜೊತೆ ಎಲೆ-ಅಡಿಕೆ-ಬಾಳೆಹಣ್ಣು ಸೇರಿ ವಿವಿಧ ಹಣ್ಣುಗಳನ್ನ ನೀಡಿ ಚುನಾವಣೆಗೆ ಶುಭಕೋರಿದ್ದಾರೆ.
ಕಳೆದ 25 ವರ್ಷಗಳಿಂದ ತೇಗೂರು ಸರ್ಕಲ್ ನಲ್ಲಿ ಚುರುಮುರಿ ಅಂಗಡಿ ಇಟ್ಟಿರುವ ಲೊಕೇಶ್ ಬಿಜೆಪಿಯ ಅಪ್ಪಟ ಕಾರ್ಯಕರ್ತ. ಇಂದು ಕೋಟಾ ಪ್ರತಿಯೊಂದು ಅಂಗಡಿಗಳಿಗೆ ಹೋಗಿ ಮತಯಾಚನೆ ಮಾಡುವ ವೇಳೆ ಹಣ ನೀಡಿ ಶುಭಕೋರಿದ್ದಾರೆ.
ನಕಲಿ ಔಷಧಿ ಜಾಲದಲ್ಲಿ ದೊಡ್ಡ ದೊಡ್ಡ ಖಾಸಗಿ ಆಸ್ಪತ್ರೆಗಳು , ಮೆಡಿಕಲ್ ಸ್ಟೋರ್‌ಗಳು : ಶೀಘ್ರವೇ ತಪ್ಪಿತಸ್ಥ ಆಸ್ಪತ್ರೆಗಳ ಲಿಸ್ಟ್…
ಉಚ್ಚಿಲ ಮೊಗವೀರ ಭವನದಲ್ಲಿ ಕೀರ್ತಿಶೇಷ ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಚ್ಚಿಲ : ಮೊಗವೀರ ಸಮಾಜದ ಗುರು…
ಮೈಸೂರು ದಸರಾದಲ್ಲಿ ಕರಾವಳಿಯ ಕಂಬಳ; ಅ. 18-19ರಂದು ‘ವಿಜಯ ದಶಮಿ’ ಜೋಡುಕರೆ ಕಂಬಳ ಮಂಗಳೂರು: ಮೈಸೂರು ದಸರಾ ಉತ್ಸವದ ಅಂಗವಾಗಿ…
2028ಕ್ಕೂ ಡಿಕೆ ಶಿವಕುಮಾರ್ ಅವರೇ ಮುಖ್ಯಮಂತ್ರಿ ಆಗಲಿ, ಅವರಿಂದಲೇ ಪಕ್ಷ ಅಧಿಕಾರಕ್ಕೆ ಬರಲಿ : ಸತೀಶ್ ಜಾರಕಿಹೊಳಿ ಮೈಸೂರು: 2028ಕ್ಕೂ…
ಶಿರ್ವ, ಉಡುಪಿಯಲ್ಲಿ ಮಾದಕ ವಸ್ತು ಮಾರಾಟ ಪ್ರಕರಣ : ಬಂಧಿತರ ಪೈಕಿ ಹಲವರು ಅಪರಾಧ ಕೃತ್ಯಗಳಲ್ಲಿ ಭಾಗಿ ಉಡುಪಿ: ಉಡುಪಿ…
ಕುಂದಾಪುರ: ಶಾರ್ಜಾದಲ್ಲಿ ಕೊಲೆಯಾದ ಅಲ್ವಿನ್ ಪ್ರಕಾಶ್ ಕುಂದರ್ ಅಂತ್ಯಸಂಸ್ಕಾರ ; ಕುಟುಂಬಸ್ಥರ ಆಕ್ರಂದನ ಕುಂದಾಪುರ: ಶಾರ್ಜಾದಲ್ಲಿ ಅಮಾನುಷವಾಗಿ ಕೊಲೆಯಾದ ಕುಂದಾಪುರ…