ಕೊಪ್ಪಳ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಿಎಂ ಹುದ್ದೆಗೆ ರಾಜೀನಾಮೆ ನೀಡುವ ಸುಳಿವು ನೀಡಿದ್ದಾರೆ. ಜೊತೆಗೆ ಹೈಕಮಾಂಡ್ ಸೂಚನೆಗೆ ಬದ್ಧ ಎಂದು ಹೇಳಿದ್ದಾರೆ. ಗುರುವಾರ ಮಾಧ್ಯಮಗಳ ಮುಂದೆ ಬಿ.ಎಸ್.ಯಡಿಯೂರಪ್ಪ ನೀಡಿದ ಹೇಳಿಕೆಗಳನ್ನು ಗಮನಿಸಿದಾಗ ಸಿಎಂ ಹುದ್ದೆಯಿಂದ ಇಳಿಯುವ ಸಾಧ್ಯತೆ ಹೆಚ್ಚಿದೆ. ಈ ಬೆನ್ನಲ್ಲೇ ಪ್ರಣವಾನಂದ ಸ್ವಾಮೀಜಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಪರ ಬ್ಯಾಟಿಂಗ್ ಬೀಸಿದ್ದಾರೆ. ಸಿಎಂ ಯಡಿಯೂರಪ್ಪರನ್ನು ಬದಲಾವಣೆ ಮಾಡಿದರೆ ಕೋಟ ಶ್ರೀನಿವಾಸ ಪೂಜಾರಿಯನ್ನ ಸಿಎಂ ಮಾಡಬೇಕು ಎಂದು ಪ್ರಣವಾನಂದ ಶ್ರೀ ಹೇಳಿದ್ದಾರೆ.
ಆರ್ಯ ಇಡೀಗ ಸಮಾಜಕ್ಕೆ ಸಾಕಷ್ಟು ಅನ್ಯಾಯವಾಗಿದೆ. ಸರ್ಕಾರ ಇದುವರೆಗೂ ನಮ್ಮ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿಲ್ಲ. ಸಣ್ಣ ಸಣ್ಣ ಸಮಾಜಕ್ಕೆ ನಿಗಮ ಮಂಡಳಿ ಘೋಷಣೆ ಮಾಡಿದ್ದಾರೆ. ಕೂಡಲೇ ಸರ್ಕಾರ ಬ್ರಹ್ಮಶ್ರೀ ನಾರಾಯಣಸ್ವಾಮಿ ನಿಗಮ ಮಂಡಳಿ ಸ್ಥಾಪನೆ ಮಾಡಬೇಕು. ನಮ್ಮ ಸಮಾಜವನ್ನ ಚುನಾವಣೆಯಲ್ಲಿ ಮಾತ್ರ ಉಪಯೋಗಿಸಿಕೊಳುತ್ತಾರೆ. ಹೀಗಾಗಿ ಮುಖ್ಯಮಂತ್ರಿ ಬದಲಾವಣೆಯಾದರೆ ಮುಖ್ಯಮಂತ್ರಿ ಸ್ಥಾನವನ್ನು ಕೋಟ ಶ್ರೀನಿವಾಸ ಪೂಜಾರಿಗೆ ಕೊಡಬೇಕು ಅಂತ ಕೊಪ್ಪಳ ಜಿಲ್ಲೆಯ ಗಂಗಾವತಿಯಲ್ಲಿ ಪ್ರಣವಾನಂದ ಸ್ವಾಮೀಜಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು : ಮಟನ್ ಶಾಪ್‌ನಲ್ಲಿ ಎಂಡಿಎಂಎ ಮಾರಾಟ : ಇಬ್ಬರ ಬಂಧನ ಬೆಂಗಳೂರು: ಮಟನ್ ಶಾಪ್ ನಲ್ಲಿ ಎಂಡಿಎಂಎ ಮಾದಕ…
ಕಾರ್ಕಳ : ಮನೆ ವಿಚಾರದಲ್ಲಿ ಜಗಳ; ಮಗನ ಕೊಲೆಗೆ ಯತ್ನಿಸಿದ ತಂದೆ ಕಾರ್ಕಳ : ಮನೆ ವಿಚಾರದಲ್ಲಿ ತಂದೆಯೊಬ್ಬ ತನ್ನ…
ಮೈಸೂರು ದಸರಾ ಕಂಬಳ: ಹೆಸರು ನೋಂದಣಿಗೆ ಸೂಚನೆ ಮಂಗಳೂರು: ಮೈಸೂರು ದಸರಾ 2026ರ ಅಂಗವಾಗಿ ಮೊದಲ ಬಾರಿಗೆ ಅದ್ದೂರಿಯಾಗಿ ಆಯೋಜಿಸಲಾಗುತ್ತಿರುವ…
ಸೌಜನ್ಯಾ ಪ್ರಕರಣ: ಎಸ್‌ಐಟಿ ತಂಡದ ಬಗ್ಗೆ ಕಲ್ಲಡ್ಕ ಪ್ರಭಾಕರ ಭಟ್ ಅಸಮಾಧಾನ ಬಂಟ್ವಾಳ: ಸೌಜನ್ಯಾ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮರುತನಿಖೆಗೆ…
ನವರಾತ್ರಿ ವೇಳೆಗೆ ಗೃಹಲಕ್ಷ್ಮಿ ಯೋಜನೆಯ 33ನೇ ಕಂತಿನ ಹಣ ಫಲಾನುಭವಿಗಳ ಖಾತೆಗೆ ಬೆಂಗಳೂರು: ನವರಾತ್ರಿ ಹಬ್ಬದ ಸಂದರ್ಭದಲ್ಲಿ ರಾಜ್ಯದ ‘ಗೃಹಲಕ್ಷ್ಮಿ’…
ಬಂಟ್ವಾಳ: ಬೆಂಗಳೂರು–ಮಡಗಾಂವ್ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಬಂಟ್ವಾಳ : ವಾರಾಂತ್ಯದ ರಜೆಯ ಹಿನ್ನೆಲೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು…