Former CM and JDS leader HD Kumarswamy addressing a press conference on the upcoming By Elections in Karnataka at JDS Office, in Bengaluru on Wednesday 13th November 2019 Pics: www.pics4news.com
ಬೆಂಗಳೂರು: ‘ಬಿಜೆಪಿ ಸರಕಾರದಲ್ಲಿ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಒಬ್ಬರನ್ನು ಬಿಟ್ಟರೆ ಬೇರೆ ಯಾವ ಸಚಿವರೂ ಸರಿ ಇಲ್ಲ. ಎಲ್ಲರೂ ದುಡ್ಡಿನ ದಂಧೆ ಮಾಡಲು ಬಾಗಿಲು ತೆಗೆದುಕೊಂಡು ಕೂತಿದ್ದಾರೆ’ ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ.
ಜೆಡಿಎಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಪೊಲೀಸ್ ಇಲಾಖೆಯಲ್ಲಿ ದೊಡ್ಡ ದಂಧೆಯೇ ನಡೆಯುತ್ತಿದೆ. ಸಚಿವ ಎಂಟಿಬಿ ನಾಗರಾಜ್ ಯಾಕೆ ಹಾಗೆ ಹೇಳಿದರು? ಅದರ ಹಿಂದೆ ಏನೆಲ್ಲಾ ನಡೆದಿದೆ ಎನ್ನುವುದು ನನಗೆ ಎಲ್ಲವೂ ಗೊತ್ತಿದೆ. ನಂದೀಶ್ 80ಲಕ್ಷ ರೂ.ಕೊಟ್ಟು ಮೂರು ತಿಂಗಳು ಆಗಿರಲಿಲ್ಲ. ಅಷ್ಟರಲ್ಲಿ ಅವರನ್ನು ಅಮಾನತು ಮಾಡಿದರು. ಅದರ ನೋವಿನಲ್ಲಿ ನಂದೀಶ್ಗೆ ಹೃದಯಾಘಾತ ಆಗಿರಬಹುದು. ಅಲ್ಲಿನ ಶಾಸಕರಿಗೆ ಎಷ್ಟು ಹೋಗಿದೆ, ಯಾರ್ಯಾರಿಗೆ ಎಷ್ಟು ಹೋಗಿದೆ. ಎಲ್ಲವೂ ತನಿಖೆ ಮಾಡಿದ್ರೆ ಹೊರಬರಲಿದೆ ಎಂದು ಒತ್ತಾಯಿಸಿದರು.
ಪಡುಬಿದ್ರಿ: ತಾಯಿ – ಮಗ ನಾಪತ್ತೆ ; ದೂರು ದಾಖಲು – Vishwanews24
ಕೋಲಾರದಿಂದ ನಾನು ಸ್ಪರ್ಧೆ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿಯೇ ಸ್ಪರ್ಧೆ ಮಾಡುತ್ತೇನೆ ಎಂದು ಈಗಾಗಲೇ ಹೇಳಿದ್ದೇನೆ. ಕಾರ್ಯಕರ್ತರು ನನ್ನ ಮೇಲಿನ ಅಭಿಮಾನದಿಂದ ಕೋಲಾರದಿಂದ ಸ್ಪರ್ಧೆ ಮಾಡಿ ಎಂದು ಹೇಳಿದ್ದಾರೆ. ಅಲ್ಲಿನ ಜನರ ಸಮಸ್ಯೆ ಏನಿದೆ ಅಂತ ನನಗೆ ಗೊತ್ತಿದೆ. ಕೋಲಾರದಲ್ಲಿ ನಮ್ಮ ಪಕ್ಷಕ್ಕೆ ಸಮರ್ಥ ಅಭ್ಯರ್ಥಿಗಳು ಇದ್ದಾರೆ. ಕೆಜಿಎಫ್ ಬಿಟ್ಟು ಉಳಿದ ಕಡೆ ನಮ್ಮ ಶಾಸಕರು ಇದ್ದಾರೆ. ನಾನೇ ಹೋಗಿ ಸ್ಪರ್ಧೆ ಮಾಡಬೇಕು ಎಂದು ಇಲ್ಲ. ಎಲ್ಲ ಮುಖಂಡರ ಜತೆ ಚರ್ಚೆ ಮಾಡಿ ಸಮಸ್ಯೆ ಪರಿಹಾರ ಮಾಡುತ್ತೇನೆ ಎಂದು ಹೇಳಿದರು.
ಸಚಿವ ಎಂಟಿಬಿ ನಾಗರಾಜ್ ವಿಡಿಯೋ ಜಗಜ್ಜಾಹೀರು ಆಗಿದೆ. ಸರಕಾರಕ್ಕೆ ಮರ್ಯಾದೆ ಇದ್ದಾರೆ ತನಿಖೆ ಮಾಡಿಸಲಿ. ಈಗಾಗಲೇ ಸಿಎಂ ತನಿಖೆ ಮಾಡಿಸುವುದಾಗಿ ಹೇಳಿದ್ದಾರೆ. ಆದರೆ, ಏನು, ಯಾವ ರೀತಿ ತನಿಖೆ ಮಾಡುತ್ತಿದ್ದಾರೆ ಎಂಬುದು ಗೊತ್ತಿಲ್ಲ ಎಂದು ಕಿಡಿಕಾರಿದರು.
ಕೆಲ ಸಚಿವರು ಎಷ್ಟೇ ಶ್ರೀಮಂತರಿದ್ದರೂ ಅವರಿಗೆ ಹಣದ ದಾಹ ಕಡಿಮೆಯಾಗಿಲ್ಲ. ಎಷ್ಟು ಸಾಧ್ಯವೋ ಅಷ್ಟನ್ನೂ ಗೋರುತ್ತಿದ್ದಾರೆ. ಈ ಸರಕಾರದಲ್ಲಿ ಕೈನಲ್ಲಿ ಹಣ ಬಾಚುತ್ತಿಲ್ಲ, ಜೆಸಿಬಿಯಲ್ಲಿ, ಹಿಟಾಚಿಯಲ್ಲಿ ಬಾಚುತ್ತಿದ್ದಾರೆ. ಆದೇನು ತನಿಖೆ ಮಾಡುತ್ತಾರೋ ನೋಡೋಣ. ಈ ಸರಕಾರಕ್ಕೆ ನಾಚಿಕೆ ಆಗಬೇಕು ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಮೊದಲನೇ ಗಂಡ ಸಾಯುತ್ತಾನೆ ಎಂಬ ಜ್ಯೋತಿಷಿ ಮಾತು ಕೇಳಿ ಪ್ರಿಯಕರನಿಗೆ ವಿಷ ಕೊಟ್ಟು ಸಾಯಿಸಿದ ಪ್ರೇಯಸಿ – Vishwanews24
‘ಜೆಡಿಎಸ್ ಎಲ್ಲರಿಗಿಂತ ಮೊದಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿದ್ದು, ಬೇರೆ ಪಕ್ಷಗಳಲ್ಲಿ ಅನೇಕ ಪಟ್ಟಿಗಳಿವೆ. ಅವುಗಳ ಪಾಲಿಗೆ ಪಟ್ಟಿಗಳೆ ಫಜೀತಿ ಆಗಲಿವೆ. ಈಗಾಗಲೇ 123 ಕ್ಷೇತ್ರದಲ್ಲಿ ಅಭ್ಯರ್ಥಿಗಳನ್ನ ಫೈನಲ್ ಮಾಡಿದ್ದು, ಅವರಿಗೆಲ್ಲ ಕೆಲಸ ಪ್ರಾರಂಭ ಮಾಡಲು ಹೇಳಿದ್ದೇನೆ. ನಾವು ಯಾವುದೇ ಪ್ರಚಾರ ಮಾಡದೇ ಕೆಲಸ ಪ್ರಾರಂಭ ಮಾಡಿದ್ದೇವೆ’ ಎಂದು ಕುಮಾರಸ್ವಾಮಿ ತಿಳಿಸಿದರು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…